
ಮೈಸೂರು (ಡಿ.11): ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಲೋಕಸಭಾ ಚುನಾವಣೆ ಬಳಿಕ ಸರ್ಕಾರ ಪತನ ಆಗಲಿದೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರವನ್ನು ಅಲುಗಾಡಿಸಲು ಯತ್ನಿಸುತ್ತಿದ್ದಾರೆ ಎಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಆರೋಪಿಸಿದರು.
ಭಾನುವಾರ ಮಾತನಾಡಿ, ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಈಗ ಅಧಿವೇಶನ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ರಾಜ್ಯ ಸರ್ಕಾರ ಪತನ ಆಗುತ್ತದೆ ಎಂಬ ಹೇಳಿಕೆ ನೀಡಿ ಸರ್ಕಾರವನ್ನು ಅಲುಗಾಡಿಸಲು ಮುಂದಾಗುತ್ತಿದ್ದಾರೆ. ಆದರೆ ನಾವು ಗಟ್ಟಿಯಾಗಿದ್ದೇವೆ, ಅವರು ಹೇಳಿದಂತೆ ಸರ್ಕಾರ ಪತನ ಆಗಲ್ಲ ಎಂದರು.
ಪಿಪಿಪಿ ಮಾದರಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗೆ ಕ್ರಮ: ಸಚಿವ ಎಚ್.ಕೆ.ಪಾಟೀಲ್
ರಾಜ್ಯದಲ್ಲಿ ಬಹುಮತದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೀಗಿರುವಾಗ ವಿರೋಧ ಪಕ್ಷದವರಾಗಲಿ ಅಥವಾ ಯಾರೇ ಆಗಲಿ ಸರ್ಕಾರವನ್ನು ಬೀಳಿಸುತ್ತೇವೆ ಎಂದು ಹೇಳುವುದು ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಬೆಳವಣಿಗೆಯಲ್ಲ ಎಂದು ಕಿಡಿಕಾರಿದರು.
ಇದೇ ವೇಳೆ ಮುಖ್ಯಮಂತ್ರಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹರಿಪ್ರಸಾದ್ ಹೇಳಿಕೆ ನಾನು ನೋಡಿಲ್ಲ. ಕೆಲವೊಮ್ಮೆ ಮಾಧ್ಯಮಗಳೇ ಇಂಥ ವಿಚಾರವನ್ನು ಪ್ರಸ್ತಾಪ ಮಾಡುತ್ತಿವೆ. ಇದು ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದರು.
ಬರಗಾಲಕ್ಕಾಗಿ ಅನುದಾನ, ಕೇಂದ್ರದ ವಿಳಂಬ ದ್ರೋಹಕ್ಕೆ ಜನ ಕ್ಷಮಿಸೊಲ್ಲ: ಸಚಿವ ಎಚ್.ಕೆ. ಪಾಟೀಲ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.