ಗ್ಯಾರಂಟಿ ಸೌಲಭ್ಯ ಸಿಗದ ಜನರು ಕಾಂಗ್ರೆಸ್ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್‌ಗೆ ತಿರುಗುಬಾಣವಾಗಲಿದ್ದು, ಲೋಕಸಭಾ ಚುನಾವಣೆ ನಡೆದು 3 ತಿಂಗಳಲ್ಲಿ ಈ ದರಿದ್ರ ರಾಜ್ಯ ಸರ್ಕಾರ ಬಿದ್ದು ಹೋಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ಹಾವೇರಿ (ಫೆ.02): ಗ್ಯಾರಂಟಿ ಸೌಲಭ್ಯ ಸಿಗದ ಜನರು ಕಾಂಗ್ರೆಸ್ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್‌ಗೆ ತಿರುಗುಬಾಣವಾಗಲಿದ್ದು, ಲೋಕಸಭಾ ಚುನಾವಣೆ ನಡೆದು 3 ತಿಂಗಳಲ್ಲಿ ಈ ದರಿದ್ರ ರಾಜ್ಯ ಸರ್ಕಾರ ಬಿದ್ದು ಹೋಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಪಕ್ಷದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ರಾಜ್ಯದಲ್ಲಿ ಕಾಂಗ್ರೆಸ್ ಸಚಿವರೂ ಧೈರ್ಯ ತೋರುತ್ತಿಲ್ಲ. ಮತ್ತೊಂದು ಕಡೆ ಇಂಡಿಯಾ ಒಕ್ಕೂಟ ಮುರಿದು ಬೀಳುತ್ತಿದೆ ಎಂದರು. ಸಿದ್ದರಾಮಯ್ಯ ಸಿಎಂ ತಕ್ಷಣ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿದ್ದ ₹4000 ನಿಲ್ಲಿಸಿದರು. ರೈತರ ವಿದ್ಯಾನಿಧಿ ಮತ್ತು ರೈತಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸಿದರು. ರೈತರ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತು ಹೋಗಿದೆ ಎಂದು ಆರೋಪಿಸಿದರು.
undefined
ದೇಶದಲ್ಲಿ ಇನ್ನೆರಡು ವರ್ಷದಲ್ಲಿ ನಿರುದ್ಯೋಗ ಹೆಚ್ಚಳ: ವೀರಪ್ಪ ಮೊಯ್ಲಿ
ಪೌರಕಾರ್ಮಿಕರ ಕಾಯಂ ಆದೇಶ ಪೂರ್ಣ ಜಾರಿಯಾಗಲಿ: ನಾನು ಅಧಿಕಾರದಲ್ಲಿದ್ದಾಗ ರಾಜ್ಯದ ೪೪ ಸಾವಿರ ಪೌರಕಾರ್ಮಿಕರನ್ನು ಕಾಯಂಗೊಳಿಸುವ ಆದೇಶ ಮಾಡಿ ಮೊದಲ ಹಂತದಲ್ಲಿ ೧೧,೩೦೦ ಜನರಿಗೆ ಆದೇಶ ನೀಡಿದ್ದೆ. ನಾವು ಮಾಡಿದ್ದ ಆದೇಶ ಪೂರ್ಣಪ್ರಮಾಣದಲ್ಲಿ ಜಾರಿ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು. ಇಲ್ಲಿನ ಗಾಂಧಿ ವೃತ್ತದಲ್ಲಿ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿದ್ದ ೬೪ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ನಿಮಿತ್ತ ೬೪ ಪೌರಕಾರ್ಮಿಕರನ್ನು ಸನ್ಮಾನಿಸಿ ಅವರು ಮಾತನಾಡಿದರು.
ರಾಜ್ಯದ ಎಲ್ಲ ಪೌರಕಾರ್ಮಿಕರ ನೇಮಕಾತಿಯ ಮುಂದಿನ ಪ್ರಕ್ರಿಯೆ ನಡೆಯುತ್ತಿತ್ತು. ಅಷ್ಟರೊಳಗೆ ಚುನಾವಣೆ ಬಂತು. ಆ ಪ್ರಕ್ರಿಯೆ ಎಲ್ಲಿಗೆ ಬಂದಿದೆ ಎಂಬ ಮಾಹಿತಿ ಇಲ್ಲ, ಆದರೆ, ನಾವು ಜಾರಿಗೊಳಿಸಿದ್ದ ಆದೇಶ ಅನುಷ್ಠಾನವಾದರೆ ರಾಜ್ಯದ ಪೌರಕಾರ್ಮಿಕರಿಗೆ ಅನುಕೂಲ ಆಗಲಿದೆ ಎಂದರು. ಪೌರ ಕಾರ್ಮಿಕರನ್ನು ಕಾಯಂ ಮಾಡುವ ಪ್ರಕ್ರಿಯೆ ನಡೆಸುತ್ತಿದ್ದಾಗ ಅಧಿಕಾರಿಗಳು ಅದನ್ನು ಮಾಡಲು ಬರುವುದಿಲ್ಲ, ಕಾರ್ಮಿಕರಿಗೆ ವಯಸ್ಸಾಗಿದೆ ಎಂದಿದ್ದರು. ಒಳ್ಳೆಯ ಕೆಲಸ ಮಾಡುವಾಗ, ಬಡವರ ಕೆಲಸ ಮಾಡುವಾಗ ಮಾನವೀತೆಯ ನೆಲಗಟ್ಟಿನಲ್ಲಿ ಮಾಡಿ ಎಂದು ಸೂಚಿಸಿದ್ದೆ.
ಕಾಂಗ್ರೆಸ್‌ನಿಂದ ಬ್ಲ್ಯಾಕ್ ಮೇಲ್ ರಾಜಕಾರಣ: ಎಚ್.ಡಿ.ಕುಮಾರಸ್ವಾಮಿ ಕಿಡಿ
ನೀವು ಅತ್ಯಂತ ಪವಿತ್ರವಾದ ಕೆಲಸ ಮಾಡುತ್ತಿದ್ದೀರಿ. ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರು ಜೀವನದಲ್ಲಿ ಯಶಸ್ವಿಯಾದರೆ ನೀವೂ ಯಶಸ್ವಿಯಾದಂತೆ ಎಂದರು. ಹಾವೇರಿ ಜಿಲ್ಲೆ ಪುಣ್ಯಭೂಮಿ. ಮೇರು ಸಾಹಿತಿಗಳು, ಕವಿಗಳು, ಮಠಾಧೀಶರು, ಪುಣ್ಯಪುರುಷರು ನಡೆದಾಡಿದ ಇತಿಹಾಸ ಹೊಂದಿದೆ. ಇದಕ್ಕೆ ಒಳ್ಳೆಯ ಭವಿಷ್ಯ ಬರೆಯುವ ಅವಶ್ಯಕತೆ ಇದೆ. ಹಾವೇರಿ ಜಿಲ್ಲೆಯ ಹೋರಾಟದಲ್ಲೂ ಸಿ.ಎಂ. ಉದಾಸಿ ಅವರ ನೇತೃತ್ವದಲ್ಲಿ ನಾವು ಪಾಲ್ಗೊಂಡಿದ್ದೆವು. ಜಿಲ್ಲಾ ಕೇಂದ್ರ ಆದ ಮೇಲೆ ಯಾವ ಮಟ್ಟಕ್ಕೆ ಪ್ರಗತಿ ಆಗಬೇಕಿತ್ತೋ ಆ ಮಟ್ಟಕ್ಕೆ ಆಗಿಲ್ಲ, ಜನರ ನಿರೀಕ್ಷೆ ಪೂರ್ಣ ಆಗಿಲ್ಲ, ಇನ್ನಷ್ಟು ಅಭಿವೃದ್ಧಿ ಆಗಬೇಕಿದೆ ಎಂದರು.