ಬೆಂಗಳೂರು ನೆಪವೊಡ್ಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ಕಾಂಗ್ರೆಸ್ ಸರ್ಕಾರ: ಮಂಡ್ಯದ ಡಾ.ಇಂದ್ರೇಶ್ ಆಕ್ಷೇಪ

By Sathish Kumar KH  |  First Published Mar 10, 2024, 6:43 PM IST

ರಾಜ್ಯ ಸರ್ಕಾರವು ಬೆಂಗಳೂರಿಗೆ ಕುಡಿಯುವ ನೀರಿನ ನೆಪವೊಡ್ಡು ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ಇಂದ್ರೇಶ್ ಆರೋಪಿಸಿದ್ದಾರೆ.


ಮಂಡ್ಯ (ಮಾ.10): ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಬೆಂಗಳೂರಿನಲ್ಲಿ ಕುಡಿಯುವ ನಿರಿಗೂ ಹಾಹಾಕಾರ ಶುರುವಾರಿಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಬೆಂಗಳೂರು ನೆಪವೊಡ್ಡಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಆರೋಪ ಮಾಡಿದ್ದಾರೆ. ನಾಳೆ ಮಧ್ಯಾಹ್ನದವರೆಗೆ ಕಾವೇರಿ ನಾಲೆಗೆ ಎಷ್ಟು ನೀರು ಬಿಡಲಾಗಿದೆ ಎಂಬ ಮಾಹಿತಿ ಕೊಡದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮಂಡ್ಯದಲ್ಲಿ ಸರ್ಕಾರದಿಂದ ನಡೆದ ಕಾಂಗ್ರೆಸ್ ಗ್ಯಾರಂಟಿ ಸಮಾವೇಶದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡು ಓಲೈಕೆಗೆ ಕೈ ಸರ್ಕಾರ ಮುಂದಾಗಿದೆ. ಬೆಂಗಳೂರಿಗೆ ಕುಡಿಯುವ ನೀರಿನ ನೆಪವೊಡ್ಡಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಕೆಆರ್‌ಎಸ್ ಡ್ಯಾಂನಿಂದ ನೀರು ಬಿಡಗಡೆ ಬಗ್ಗೆ ಸ್ಪಷ್ಟ ಮಾಹಿತಿ ಕೊಡಬೇಕು. ಇಲ್ಲದಿದ್ದರೇ ಸರ್ಕಾರದ ವಿರುದ್ದ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Latest Videos

undefined

ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ವಾಕ್ಸಮರಕ್ಕೆ ದಾಳವಾದ ಸಂಸದೆ ಸುಮಲತಾ ಅಂಬರೀಶ್!

ಮಂಡ್ಯದ ಕೆಆರ್‌ಎಸ್ ಜಲಾಶಯದ ಬಳಿ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅನುಮತಿ ನೀಡುವ ಉದ್ದೇಶದಿಂದ ಟ್ರಯಲ್ ಬ್ಲಾಸ್ಟ್ ವಿಚಾರದಲ್ಲಿ ಜಿಲ್ಲಾಡಳಿತ ಹಾಗೂ ಸರ್ಕಾರ ಅನುಮಾನಸ್ಪದವಾಗಿ ನಡೆದುಕೊಂಡಿವೆ. ಜಾರ್ಖಂಡ್‌ನಿಂದ ತಜ್ಞರನ್ನ ಕರೆಸಿ ಟ್ರಯಲ್ ಬ್ಲಾಸ್ಟ್ ಮಾಡಲು‌ ಮುಂದಾಗಿತ್ತು. ಅದರ ಮುಂದುವರೆದ ಭಾಗವಾಗಿ ರಾತ್ರೋ ರಾತ್ರೀ ಕಾವೇರಿ ನೀರನ್ನ ತಮಿಳುನಾಡಿಗೆ ಬಿಡಲಾಗಿದೆ. ಈ ಸರ್ಕಾರಕ್ಕೆ ಜಿಲ್ಲೆಯ ರೈತರು ಮತ್ತು ಜಾನುವಾರುಗಳ ಶಾಪ ತಟ್ಟದೆ ಬಿಡಲ್ಲ ಎಂದು ಕಿಡಿಕಾರಿದರು.

ಮಂಡ್ಯದ ಗಂಡು ಅಂಬರೀಶ್ ಕಾಂಗ್ರೆಸ್ಸಿಗರಾಗಿಯೇ ಪ್ರಾಣ ಬಿಟ್ಟಿದ್ದಾರೆ; ಡಿಸಿಎಂ ಡಿ.ಕೆ. ಶಿವಕುಮಾರ್!

ಬಿಜೆಪಿಯವರಿಗೆ ಬುದ್ದಿ ಭ್ರಮಣೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ ಮಾತಿಗೆ ತಿರುಗೇಟು ನೀಡಿದ ಡಾ.ಇಂದ್ರೇಶ್ ಅವರು ಈ ಸರ್ಕಾರಕ್ಕೆ ಬ್ಯಾಲೆನ್ಸ್ ಇಲ್ಲ. 136 ಸೀಟು ಗೆದ್ದ ಮದದಲ್ಲಿ ಈ ಹೇಳಿಕೆ ನೀಡ್ತಿದ್ದಾರೆ. ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ. ಇನ್ನು ಕೆಆರ್‌ಎಸ್ ಜಲಾಶಯದಿಂದ ನೀರು ಹರಿಸುತ್ತಿರುವ ಬಗ್ಗೆ ನಾಳೆ ಮಧ್ಯಾಹ್ನದ ವೇಳೆಗೆ ಸರಿಯಾದ ಮಾಹಿತಿ ನೀಡಿ. ಬೆಂಗಳೂರಿಗೆ ಎಷ್ಟು ನೀರು ಬಿಟ್ಟಿದ್ದೀರಾ ತಿಳಿಸಿ. ಇಲ್ಲದಿದ್ದರೇ ಬಿಜೆಪಿ ರಾಜ್ಯಾಧ್ಯಕ್ಷರ‌ ಜೊತೆ ಚರ್ಚೆ ಮಾಡಿ ಹೋರಾಟ ಮಾಡ್ತೇವೆ. ನಾಳೆಯೇ ಹೋರಾಟದ ರೂಪುರೇಷೆ ನಿರ್ಧಾರ ಮಾಡ್ತೇವೆ ಎಂದು ತಿಳಿಸಿದರು.

click me!