ಕಾಂಗ್ರೆಸ್‌ ಸರ್ಕಾರ ಸುಪ್ರೀಂಗೆ ಹೋಗುವ ಬದಲು ಸ್ಟಾಲಿನ್‌ ಮನವೊಲಿಸಲಿ: ಬೊಮ್ಮಾಯಿ

By Kannadaprabha NewsFirst Published Sep 14, 2023, 2:00 AM IST
Highlights

ರಾಜ್ಯ ಸರ್ಕಾರ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡುವುದಿಲ್ಲ ಎಂದು ಗಟ್ಟಿಯಾಗಿ ನಿಂತರೆ, ನಾವೂ ಸರ್ಕಾರದ ಜೊತೆಗೆ ನಿಲ್ಲುತ್ತೇವೆ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು (ಸೆ.14): ರಾಜ್ಯ ಸರ್ಕಾರ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡುವುದಿಲ್ಲ ಎಂದು ಗಟ್ಟಿಯಾಗಿ ನಿಂತರೆ, ನಾವೂ ಸರ್ಕಾರದ ಜೊತೆಗೆ ನಿಲ್ಲುತ್ತೇವೆ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪ್ರತಿದಿನ ಐದು ಸಾವಿರ ಕ್ಯೂಸೆಕ್ಸ್ ನಂತೆ ತಮಿಳುನಾಡಿಗೆ ಮತ್ತೆ 15 ದಿನ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸಿಡಬ್ಲುಆರ್ ಸಿ (ಕಾವೇರಿ ನೀರು ನಿಯಂತ್ರಣ ಸಮಿತಿ) ಆದೇಶ ನೀಡಿರುವುದಕ್ಕೆ ಮಂಗಳವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದರು.

ವಸ್ತು ಸ್ಥಿತಿ ನೋಡಿದರೆ ಕಾವೇರಿಯಲ್ಲಿ ಕುಡಿಯಲಿಕ್ಕೂ ನೀರಿಲ್ಲ. ಮತ್ತೆ ಏಳು ಟಿಎಂಸಿ ನೀರು ಬಿಡಲು ತಿಳಿಸಲಾಗಿದೆ. ಮಂಡ್ಯ ಜಿಲ್ಲೆ ಒಂದಕ್ಕೆ 32 ಟಿಎಂಸಿ ನೀರು ಬೇಕು. ಇದುವರೆಗೂ ಬಿಟ್ಟಿರುವುದು ಕೇವಲ ಏಳು ಟಿಎಂಸಿ ಮಾತ್ರ‌. ಭತ್ತ ಕಬ್ಬು, ಮೆಕ್ಕೆಜೋಳ ಎಲ್ಲವೂ ಒಣಗುತ್ತಿದೆ. ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲಿನಿಂದಲೂ ಎಡವುತ್ತಿದೆ‌. ಬುಧವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲುಎಂಎ) ಸಭೆ ಇದೆ. ಅಲ್ಲಿ ರಾಜ್ಯ ಸರ್ಕಾರ ವಾಸ್ತವವನ್ನು ತಿಳಿಸಬೇಕು ಎಂದರು.

ತಮಿಳುನಾಡಿಗೆ ನೀರು ಹರಿಸಿದರೆ ರೈತರಿಗೆ ಅನ್ಯಾಯ ಮಾಡಿದಂತೆ: ಬೊಮ್ಮಾಯಿ ಕಿಡಿ

ಸಭೆಯಿಂದ ಹೊರಬರುತ್ತಾರೋ? ಅಥವಾ ಇಲ್ಲವೋ? ಅವರಿಗೆ ಬಿಟ್ಟಿದ್ದು, ಮುಂದಿನ ವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಇದೆ. ಅಲ್ಲಿಯೂ ಸರ್ಕಾರ ಬಲವಾಗಿ ವಾದ ಮಾಡಲಿ, ನಮ್ಮ ಕಾವೇರಿ ಮಕ್ಕಳ ಹಿತ ಬಲಿ ಕೊಟ್ಟು ನೀರು ಬಿಡಬೇಡಿ. ಕಾನೂನು ತಂಡ ಮರು ಚಿಂತನೆ ಮಾಡಬೇಕು. ನಾವು ಇದರಲ್ಲಿ ರಾಜಕಾರಣ ಮಾಡುತ್ತಿಲ್ಲ. ಇವರು ಗಟ್ಟಿಯಾಗಿ ನಿಂತರೆ ನಾವು ಸರ್ಕಾರದ ಜೊತೆ ನಿಲ್ಲುತ್ತೇವೆ ಎಂದು ಹೇಳಿದರು.

ಸ್ಟಾಲಿನ್ ಮನವೊಲಿಸಲಿ: ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಳಿ ಸರ್ವ ಪಕ್ಷ ನಿಯೋಗ‌ ಕರೆದುಕೊಂಡು ಹೋಗುವ ಬದಲು ರಾಜ್ಯ ಸರ್ಕಾರವು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ರಾಜ್ಯದ ವಸ್ತುಸ್ಥಿತಿ ತಿಳಿಸಿ ಮನವರಿಕೆ ಮಾಡಬೇಕು ಮತ್ತು ಅವರ ಮನವೊಲಿಸಬೇಕು. ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ಇರುವುದರಿಂದ ಪ್ರಧಾನಿ ಮಧ್ಯಸ್ಥಿಕೆ ವಹಿಸಲು ಬರುವುದಿಲ್ಲ ಎಂದು ತಿಳಿಸಿದರು. 

ಗ್ಯಾರಂಟಿ ಯೋಜನೆಗಾಗಿ ರೈತರ ಬದುಕು ಬಲಿ ಕೊಡಬೇಡಿ: ಕಾಂಗ್ರೆಸ್‌ ವಿರುದ್ಧ ರೇವಣ್ಣ ವಾಗ್ದಾಳಿ

ತಮಿಳುನಾಡು ಅಗತ್ಯಕ್ಕಿಂತ ಹೆಚ್ಚು ನೀರನ್ನು ಕುರುವೈ ಬೆಳೆಗೆ ಅಕ್ರಮವಾಗಿ ಬಳಸಿಕೊಂಡಿದೆ ಎಂದು ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲುಎಂಎ) ಸಭೆಯಲ್ಲಿ ಬಲವಾಗಿ ಹೇಳುತ್ತಿಲ್ಲ. ಸೆ.12 ರ ನಂತರ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ತನ್ನ ನಿಲುವಿಗೆ ಎಷ್ಟು ಬದ್ದವಾಗಿರುತ್ತದೆ ಎಂದು ಕಾದು ನೋಡಲಾಗುವುದು ಎಂದರು.

click me!