ವಿಪಕ್ಷದ ಎಲ್ಲ ಪ್ರಶ್ನೆಗೆ ಕಾಂಗ್ರೆಸ್‌ ಸರ್ಕಾರ ಉತ್ತರಿಸಲಿದೆ: ಸಿಎಂ ಸಿದ್ದರಾಮಯ್ಯ

By Kannadaprabha News  |  First Published Dec 5, 2023, 2:00 AM IST

ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು, ವಿರೋಧಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ಬೆಳಗಾವಿ (ಡಿ.05): ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು, ವಿರೋಧಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ವಿರೋಧಪಕ್ಷದವರು ಜಂಟಿಯಾಗಿ ಹೋರಾಟ ಕೈಗೊಳ್ಳಲಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದರೂ ಬಿಜೆಪಿಯವರು ವಿಪಕ್ಷ ನಾಯಕರನ್ನು ಆಯ್ಕೆ ಮಾಡಿರಲಿಲ್ಲ. ವಿರೋಧ ಪಕ್ಷದವರಿಗೆ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ. ಅವರು ಜಂಟಿಯಾಗಿ ಹೋರಾಟ ನಡೆಸಿದರೂ, ಅವರ ಎಲ್ಲ ಹೋರಾಟಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ ಎಂದರು.

ಪಂಚರಾಜ್ಯ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಪೇಕ್ಷಿತ ಯಶಸ್ಸು ಸಾಧ್ಯವಾಗದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ತೆಲಂಗಾಣದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮಧ್ಯಪ್ರದೇಶದಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯವರೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಎಂದಿಗೂ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವುದಿಲ್ಲ. ಬಡ ಜನರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಪ್ರಾಮಾಣಿಕತೆಯಿಂದ ಇವುಗಳನ್ನು ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು ಎಂದಷ್ಟೇ ಹೇಳಿದರು.

Tap to resize

Latest Videos

ಮುಂಬರುವ ಲೋಕಸಭೆಯಲ್ಲಿ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತೆ: ರೇಣುಕಾಚಾರ್ಯ ಭವಿಷ್ಯ

ಸಿದ್ದು-ಡಿಕೆಶಿ ಸರ್ಕಾರದ ಎಫೆಕ್ಟ್ ತೆಲಂಗಾಣದಲ್ಲಾಗಿದೆ: ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕರ್ನಾಟಕದ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಸರ್ಕಾರದ ಎಫೆಕ್ಟ್ ತೆಲಂಗಾಣದಲ್ಲಿ ಆಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣದ ಜನರಿಗೆ ಕಾಂಗ್ರೆಸ್ ಬಗ್ಗೆ ವಿಶ್ವಾಸ ಬಂದಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ತುಂಬ ಖುಷಿಯಾಗಿದೆ ಎಂದರು. ಕರ್ನಾಟಕದ ಸಿಎಂ, ಮಂತ್ರಿಗಳಿಗೆ ಉಸ್ತುವಾರಿ ಕೊಡಲಾಗಿತ್ತು. ಸಿಎಂ, ಡಿಸಿಎಂ ಎರಡು ಬಾರಿ ತೆಲಂಗಾಣಕ್ಕೆ ಭೇಟಿ ನೀಡಿ ಪ್ರಚಾರ ನಡೆಸಿದ್ದರು. ಇನ್ನು ಬಿಜೆಪಿ ಮಿತ್ರರು ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎನ್ನುತ್ತಿದ್ದರು. ಅದು ಎಂದೆಂದಿಗೂ ಸಾಧ್ಯವಿಲ್ಲ ಎಂದರು.

click me!