ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿ ಮನೆಯನ್ನೂ ತಲುಪಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಬೆಳಗಾವಿ (ಜ.16): ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿ ಮನೆಯನ್ನೂ ತಲುಪಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುದ್ರೆಮನೆ ಗ್ರಾಮಸ್ಥರು ಸಂಜೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಚುನಾವಣೆ ಪೂರ್ವ ಘೋಷಿಸಿದ್ದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇವುಗಳಲ್ಲಿ ಒಂದಿಲ್ಲೊಂದು ಯೋಜನೆಗಳು ಎಲ್ಲರ ಮನೆಗಳನ್ನೂ ತಲುಪಿವೆ. ವಿದ್ಯುತ್ ಬಿಲ್ ತುಂಬುವುದು ತಪ್ಪಿದೆ.
ಮಹಿಳೆಯರು ಬಸ್ ಟಿಕೆಟ್ ಪಡೆಯುವುದು ನಿಂತಿದೆ. ಗೃಹಲಕ್ಷ್ಮಿ ಮೂಲಕ ₹2 ಸಾವಿರ ಬರುತ್ತಿದೆ. ಪಡಿತರ ಮತ್ತು ಅದರ ಹಣ ಖಾತೆಗೆ ಜಮಾ ಆಗುತ್ತಿದೆ. ಈಗ ಯುವ ನಿಧಿ ಯೋಜನೆಯೂ ಜಾರಿಗೊಂಡಿದೆ. ಇದರಿಂದಾಗಿ ಜನರ ಆರ್ಥಿಕತೆ ಉತ್ತಮವಾಗಿದೆ. ಪ್ರಸ್ತುತ ಬರಗಾಲವನ್ನು ಎದುರಿಸುವ ಶಕ್ತಿ ಜನರಿಗೆ ಬಂದಿದೆ. ಜನರಲ್ಲಿ ನಮ್ಮ ಸರ್ಕಾರ ಎನ್ನುವ ಭಾವನೆ ಮೂಡಿದೆ ಎಂದು ತಿಳಿಸಿದರು. ಗ್ರಾಮೀಣ ಕ್ಷೇತ್ರದ ಶಾಸಕಿಯಾಗಿ ನನ್ನನ್ನು ಆಯ್ಕೆ ಮಾಡಿದ್ದೀರಿ. ನಿಮ್ಮ ಕೃಪೆಯಿಂದ ನಾನು ರಾಜ್ಯದ ಮಂತ್ರಿಯಾಗಿದ್ದೇನೆ.
ಕೈ ನಾಯಕರಿಂದ ರಾಮಾಸ್ತ್ರ ಪ್ರಯೋಗ: ರಾಮನ ಅಸ್ತಿತ್ವ ಪ್ರಶ್ನಿಸಿದ್ದ ಕಾಂಗ್ರೆಸ್‌ನಿಂದ ಲೋಕ ಸಮರ ಗೆಲ್ಲಲು ರಾಮಜಪ
ನಿಮ್ಮ ಮನೆ ಮಗಳು ರಾಜ್ಯದ ಸೇವೆ ಮಾಡುವ ಮೂಲಕ ನಿಮ್ಮ ಗೌರವವನ್ನು ಹೆಚ್ಚಿಸುವ ಕೆಲಸ ಮಾಡುತ್ತೇನೆ. ನಿಮ್ಮ ಬೆಂಬಲ ನನಗೆ ಸದಾ ಇರಲಿ ಎಂದು ಕೋರಿದರು. ಕಾರ್ಯಕ್ರಮದಲ್ಲಿ ಯುವರಾಜ ಕದಂ, ಅರುಣ ದೇವನ್, ದೀಪಕ್ ಪಾಟೀಲ, ವಿಮಲಾ ತಾಯಿ ಸಾಖರೆ, ಪಿಂಟು ಕಾಗಣಕರ್, ವಿನಾಯಕ ಪಾಟೀಲ, ಶಂಕರ ಪಾಟೀಲ, ವೈಜನಾಥ್ ರಾಜಗೋಳ್ಕರ್, ಶುಭಾಂಗಿ ರಾಜಗೋಳ್ಕರ್, ಲತಾ ಶಿವನೆಗೆಕರ್, ರಘುನಾಥ್ ಖಂಡೇಕರ್, ಮರಗಾಯಿ ಯುವಕ ಮಂಡಳ, ಸುರೇಶ ಪಾಟೀಲ ಸೇರಿದಂತೆ ಇನ್ನೀತರರು ಉಪಸ್ಥಿತರಿದ್ದರು.
ನನ್ನ ಮಾತನ್ನು ಸಕಾರಾತ್ಮಕತೆ ಅರ್ಥೈಸಿಕೊಳ್ಳಿ: ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಸಹ ಮುಂಬೈ ಪ್ರಾಂತ್ಯದಲ್ಲಿತ್ತು, ಹಿಂದಿನಿಂದಲೂ ಕನ್ನಡಿಗರು - ಮರಾಠಿ ಭಾಷಿಕರು ಅನ್ಯೋನ್ಯತೆಯಿಂದ ಬಾಳುತ್ತಿದ್ದೇವೆ. ಈ ಅನ್ಯೋನ್ಯತೆ ಮುಂದುವರಿಯಬೇಕು ಎನ್ನುವ ಆಶಯವನ್ನು ನಾನು ವ್ಯಕ್ತಪಡಿಸಿದ್ದೇನೆ. ಸ್ವಾತಂತ್ರ್ಯ ಪೂರ್ವದಲ್ಲಿ ಮಹಾರಾಷ್ಟ್ರ ರಾಜ್ಯವೇ ಅಸ್ಥಿತ್ವದಲ್ಲೇ ಇಲ್ಲದ್ದರಿಂದ ಅಂತಹ ಅರ್ಥ ಕಲ್ಪಿಸುವ ಪ್ರಶ್ನೆಯೇ ಬರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ. ನಿಪ್ಪಾಣಿ ತಾಲೂಕಿನ ಕಾರದಗಾದಲ್ಲಿ ನಡೆದ ಕನ್ನಡ ಸಮಾವೇಶದಲ್ಲಿ ತಾವು ಆಡಿದ ಮಾತುಗಳಿಗೆ ಸ್ಪಷ್ಟನೆ ನೀಡಿದರು.
ಶಿವಲಿಂಗೇಗೌಡ ಸ್ಪರ್ಧೆ ಇಲ್ಲದೆ ಕಾಂಗ್ರೆಸ್ ಗೆಲುವಿಲ್ಲ: ಮಾಜಿ ಸಚಿವ ಬಿ.ಶಿವರಾಮು
ಕನ್ನಡಿಗರಿಗೆ ಸ್ಫೂರ್ತಿ ತುಂಬುವ ಭರದಲ್ಲಿ ಅಲ್ಲಿ ನಾನು ಆಡಿದ ಮಾತುಗಳ ಸಕಾರಾತ್ಮಕತೆಯನ್ನು ಅರ್ಥೈಸಿಕೊಳ್ಳಬೇಕು. ಇದರ ಬದಲಾಗಿ ಬೇರೆ ರೀತಿಯಲ್ಲಿ ಅರ್ಥೈಸುವುದರಿಂದ ಅದು ಗಡಿಭಾಗದ ಕನ್ನಡಿಗರ ಉತ್ಸಾಹಕ್ಕೆ ಹಿನ್ನಡೆಯನ್ನುಂಟು ಮಾಡಬಹುದು ಎಂದಿದ್ದಾರೆ. ನಾನು ಹೆಮ್ಮೆಯ ಕನ್ನಡತಿಯಾಗಿ, ಕನ್ನಡದ ಮೇಲೆ ವಿಶೇಷವಾದ ಅಭಿಮಾನ ಇಟ್ಟುಕೊಂಡು ಭಾಗವಹಿಸಿದ್ದೆ. ಗಡಿ ಭಾಗದಲ್ಲಿ ಇಷ್ಚೊಂದು ಉತ್ಸಾಹದಿಂದ ಅಲ್ಲಿನ ಕನ್ನಡಿಗರು - ಮರಾಠಿ ಭಾಷಿಕರೆಲ್ಲ ಸೇರಿ ಕನ್ನಡ ಸಮಾವೇಶ ನಡೆಸುತ್ತಿರುವುದನ್ನು ತಿಳಿದು, ಅವರ ಸಂಭ್ರಮದಲ್ಲಿ ಪಾಲ್ಗೊಳ್ಳುವ ಮತ್ತು ಅವರಲ್ಲಿ ಉತ್ಸಾಹ ತುಂಬುವ ಉದ್ದೇಶದಿಂದ ಅಲ್ಲಿನ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ್ದೇನೆ ಎಂದರು.