ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲ: ಎಚ್.ಎಂ.ರೇವಣ್ಣ

Published : Oct 05, 2025, 10:31 AM IST
HM Revanna

ಸಾರಾಂಶ

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದರು.

ಮುಳಬಾಗಿಲು (ಅ.05): ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದರು.

ಬೆಂಗಳೂರಿನಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಮಾರ್ಗ ಮಧ್ಯೆ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಬಡಬಗ್ಗರಿಗ ಐದು ಗ್ಯಾರಂಟಿ ಯೋಜನೆಗಳಿಂದ ಹಲವಾರು ರೀತಿಯ ಅನುಕೂಲಗಳಾಗುತ್ತಿದ್ದು, ಇದೇ ಮಾದರಿಯಲ್ಲಿ ಪಕ್ಕದ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ಸರ್ಕಾರಗಳು ಸಹ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದರಿಂದ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ಪ್ರಭಾವಿ ನಾಯಕರಾಗಿ ಹೊರಹೊಮ್ಮಿದ್ದಾರೆಂದು ಸಂತಸ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳ ಸದ್ಬಳಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಜೊತೆಗೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಮಾಡಲಾಗುತ್ತಿದ್ದು, ಸರಿಯಾದ ರೀತಿಯಲ್ಲಿ ಐದು ಗ್ಯಾರಂಟಿ ಯೋಜನೆಗಳು ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆಂದು ಎಚ್ಚರಿಸಿದರು. ಸರ್ಕಾರಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದಾರರಿಗೆ ಪಡಿತರ ನೀಡದೆ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ನ್ಯಾಯಬೆಲೆ ಅಂಗಡಿ ಮಾಲೀಕರ ಲೈಸೆನ್ಸ್‌ನನ್ನು ಮುಲಾಜಿಲ್ಲದೆ ರದ್ದುಪಡಿಸುವುದಾಗಿ ತಿಳಿಸಿದರು.

ಕ್ರಮ ಕೈಗೊಳ್ಳುವುದಾಗಿ ಭರವಸೆ

ಆವನಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಎಂ.ಸಿ.ನೀಲಕಂಠೇಗೌಡರು ನಿಧನಗೊಂಡು ಆರು ತಿಂಗಳಾಗಿದ್ದು ಇದುವರೆಗೂ ಖಾಲಿ ಇರುವ ಆವಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತುಂಬಿಲ್ಲ ಎಂದು ಗ್ಯಾರಂಟಿ ಅಧ್ಯಕ್ಷರ ಗಮನ ಸೆಳೆದಾಗ ಈ ಸಂಬಂಧ ಡಿಸಿಸಿ ಅಧ್ಯಕ್ಷರು ಮತ್ತು ಮುಖಂಡರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕೆಪಿಸಿಸಿ ಒಬಿಸಿ ಕಾರ್ಯದರ್ಶಿ ಚನ್ನಾಪುರ ಎನ್.ವೆಂಕಟೇಶ್ ಗೌಡ, ಟೌನ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಮಾನುಲ್ಲಾ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಸುಬ್ರಮಣಿ, ಮುಖಂಡರಾದ ಕಾರ್ಗಿಲ್ ವೆಂಕಟೇಶ್, ಸಿದ್ದಗಟ್ಟ ಮುನಿಸ್ವಾಮಿಗೌಡ, ಕೋಳಿ ನಾಗರಾಜ್ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!