ಪಂಚ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಬದಲಾವಣೆ: ಸಚಿವ ಶಿವಾನಂದ ಪಾಟೀಲ

Published : Sep 11, 2025, 11:58 PM IST
Shivanand Patil

ಸಾರಾಂಶ

ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳಿಂದ ತಾಯಂದಿರಿಗೆ ಆತ್ಮಬಲ ಬಂದಿದೆ. ಉತ್ತರ ಕರ್ನಾಟಕದ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಇಂದು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ.

ಹಾವೇರಿ (ಸೆ.11): ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಬದಲಾವಣೆಯಾಗಿದೆ. ಜನಸಾಮಾನ್ಯರ ಆದಾಯ ಒಂದು ಲಕ್ಷದಿಂದ ಎರಡು ಲಕ್ಷ ವರೆಗೆ ಹೆಚ್ಚಾಗಿದೆ. ಗ್ಯಾರಂಟಿ ಯೋಜನೆಗಳು ಸದುಪಯೋಗವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಪಂ ಸಹಯೋಗದಲ್ಲಿ ಏರ್ಪಡಿಸಿದ್ದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳಿಂದ ತಾಯಂದಿರಿಗೆ ಆತ್ಮಬಲ ಬಂದಿದೆ.

ಉತ್ತರ ಕರ್ನಾಟಕದ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಇಂದು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಗ್ಯಾರಂಟಿ ಯೋಜನೆ ಜಾರಿಗೆ ಬಂದ ಎರಡು ವರ್ಷದಲ್ಲಿ ಸಾಕಷ್ಟು ಬದಲಾವಣೆಯಾಗಿದೆ ಎಂದರು. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಮಾತನಾಡಿ, ಡಿ. ದೇವರಾಜ ಅರಸು ಅವರಿಂದ ಹಿಡಿದು ಈ ವರೆಗ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನು ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಯು ಘನತೆ-ಗೌರವದಿಂದ ಬದುಕುವಂತಾಗಿದೆ ಹಾಗೂ ಆರ್ಥಿಕ ಸ್ಥಿತಿ ಸುಧಾರಿಸಿದೆ.

ಜನರಿಂದ ಜನರಿಗೆ ತಿಳಿಸುವ ಕೆಲಸವಾಗಬೇಕು

ಇವು ಬಿಟ್ಟಿ ಭಾಗ್ಯವಲ್ಲ, ಈ ಯೋಜನೆಗಳಿಂದ ಬಡ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಗ್ಯಾರಂಟಿ ಯೋಜನೆಗಳ ಕುರಿತು ಜನರಿಂದ ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು. ಶಾಸಕರಾದ ಶ್ರೀನಿವಾಸ ಮಾನೆ, ಯು.ಬಿ. ಬಣಕಾರ ಮಾತನಾಡಿ, ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರಲ್ಲಿ ಉತ್ಸಾಹ ಹಾಗೂ ಖುಷಿ ತರುವ ಯೋಜನೆಗಳಾಗಿವೆ. ಬಡ ಕುಟುಂಬಗಳಿಗೆ ಆರ್ಥಿಕ ಶಕ್ತಿ ಬಂದಿದೆ. ಇದರಿಂದ ಕುಟುಂಬದ ನಿರ್ವಹಣೆಗೆ ಅನುಕೂಲವಾಗುತ್ತಿದೆ. ಸಮಾಜದಲ್ಲಿ ಸಮಾನತೆ, ಸಹಬಾಳ್ವೆ, ಸೌಹಾರ್ದತೆ ಕಾಪಾಡಲು ಎಲ್ಲರೂ ನಮ್ಮ ಜತೆ ಕೈಜೋಡಿಸಬೇಕು ಎಂದು ಹೇಳಿದರು.

ಶಾಸಕ, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಜಾಗೃತಿ ಸಮಿತಿಯ ಡಾ. ವಾಸು ಎಚ್. ಅವರು ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಆರ್ಥಿಕ ಸುಧಾರಣೆ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಸಕ ಯಾಸೀರ ಅಹ್ಮದಖಾನ್ ಪಠಾಣ, ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಹಾವೇರಿ ಹಾಲು ಒಕ್ಕೂಟದ ಅಧ್ಯಕ್ಷ ಮಂಜನಗೌಡ ಪಾಟೀಲ, ಎಂ.ಎಂ. ಮೈದೂರ, ವಿಜಯಕುಮಾರ ದೊಡ್ಡಮನಿ, ಶಂಭನಗೌಡ ಪಾಟೀಲ, ಮಲ್ಲಿಕಾರ್ಜುನ ಬುರಡಿಕಟ್ಟಿ, ನಾರಾಯಣಪ್ಪ ಗೌರಕ್ಕನವರ, ಶೇಖಪ್ಪ ಮಣಕಟ್ಟಿ, ಸುಭಾಸ ಮಜ್ಜಗಿ, ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಜಿಪಂ ಸಿಇಒ ರುಚಿ ಬಿಂದಲ್, ಎಸ್‌ಪಿ ಯಶೋದಾ ವಂಟಗೋಡಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ ಇತರರು ಇದ್ದರು. ಜಿಪಂ ಉಪ ಕಾರ್ಯದರ್ಶಿ ಪುನೀತ ಸ್ವಾಗತಿಸಿದರು. ಶಿಕ್ಷಕ ನಾಗರಾಜ ನಡುವಿನಮಠ ಕಾರ್ಯಕ್ರಮ ನಿರೂಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಭಾರತದ ಶಾಶ್ವತ ಬಾಹ್ಯಾಕಾಶ ನಿವಾಸ ಬಿಎಎಸ್-01ಕ್ಕೆ ನೀಲಿ ನಕ್ಷೆ ಅಂತಿಮಗೊಳಿಸಿದ ಇಸ್ರೋ