ಗ್ಯಾರಂಟಿ ಯೋಜನೆ ನಮ್ಮ ಕಮೀಟಮೆಂಟ್, ಅದು ನಮ್ಮ ಬದ್ಧತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ವಿಜಯಪುರ (ಆ.15): ಗ್ಯಾರಂಟಿ ಯೋಜನೆ ನಮ್ಮ ಕಮೀಟಮೆಂಟ್, ಅದು ನಮ್ಮ ಬದ್ಧತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಗ್ಯಾರಂಟಿ ಯೋಜನೆಗಳ ಬಗ್ಗೆ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಸತೀಶ ಜಾರಕಿಹೊಳಿ ಹೇಳಿದ್ದರ ಬಗ್ಗೆ ನನಗೆ ಗೊತ್ತಿಲ್ಲ. ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನೂ ಮಾಡುತ್ತಿದ್ದೇವೆ. ನಮ್ಮ ಮುಖ್ಯಮಂತ್ರಿಗಳು ಹಣಕಾಸು ತಜ್ಞರಾಗಿದ್ದು, 15 ಬಜೆಟ್ ಮಂಡನೆ ಮಾಡಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಬಗ್ಗೆ ಯಾರಿಗೂ ಸಂಶಯ ಬೇಡ ಎಂದರು.
ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ ಸುಮಾರು ಶೇ.82 ಪರ್ಸೆಂಟ್‌ನಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿದ್ದು, ಎಲ್ಲರಿಗೂ ಬಿಪಿಎಲ್ ಕಾರ್ಡ್ ಇದೆ. ಅನವಶ್ಯಕವಾಗಿ ಶ್ರೀಮಂತರಿಗೆ ಬಿಪಿಎಲ್ ಏಕೆ ಎಂಬ ಚಿಂತನೆ ನಡೆಯುತ್ತಿದೆ. ಈ ಬಗ್ಗೆ ಸಮಗ್ರವಾಗಿ ಸಮೀಕ್ಷೆ ಆಗಬೇಕಾಗಿದೆ. ಸರ್ಕಾರ ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತದೆ ಎಂದು ತಿಳಿಸಿದರು. ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ನನಗೆ ಗೊತ್ತಿಲ್ಲ. ಹೈಕಮಾಂಡ್ ಹೇಳಬೇಕು. ನಾನು ಹೈಕಮಾಂಡ್ ಅಲ್ಲ ಎಂದರು.
undefined
ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಹೈಕಮಾಂಡ್ ನಿರ್ಧಾರ: ಸಚಿವ ಜಮೀರ್ ಅಹ್ಮದ್
ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಆ.21 ರಂದು ಸಿಎಂ ಬಾಗಿನ ಅರ್ಪಣೆ ಮಾಡಲಿದ್ದಾರೆ. ಈಗ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಸದ್ಯ ತಾತ್ಕಾಲಿಕವಾಗಿ 21ಕ್ಕೆ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಎಲ್ಲರ ಜೊತೆ ಮಾತನಾಡಿ ನಿರ್ಧಾರ ಮಾಡುತ್ತೇವೆ.
-ಎಂ.ಬಿ.ಪಾಟೀಲ, ಸಚಿವರು.