ಲೋಕಸಭೆ ಚುನಾವಣೆ ಫಲಿತಾಂಶ 2024: ಫೀನಿಕ್ಸ್‌ ಹಕ್ಕಿಯಂತೆ ಎದ್ದು ಬಂದ ಕಾಂಗ್ರೆಸ್‌..!

Published : Jun 05, 2024, 08:47 AM IST
ಲೋಕಸಭೆ ಚುನಾವಣೆ ಫಲಿತಾಂಶ 2024: ಫೀನಿಕ್ಸ್‌ ಹಕ್ಕಿಯಂತೆ ಎದ್ದು ಬಂದ ಕಾಂಗ್ರೆಸ್‌..!

ಸಾರಾಂಶ

ಕಳೆದ ಎರಡು ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧೆ ನೀಡಲು ವಿಫಲವಾದ ಕಾಂಗ್ರೆಸ್‌ ಪಕ್ಷವು ಈ ಬಾರಿಯ ಚುನಾವಣೆಗೂ ಮುನ್ನ ಸಣ್ಣಪುಟ್ಟ ರಾಜಕೀಯ ಪಕ್ಷಗಳೆಲ್ಲ ಸೇರಿ ರಚಿಸಿಕೊಂಡ ಇಂಡಿಯಾ ಮೈತ್ರಿಕೂಟಕ್ಕೆ ತಾನೂ ಅಹಂ ಬಿಟ್ಟು ಸೇರ್ಪಡೆಗೊಂಡಿತ್ತು. ಆ ಪಕ್ಷಗಳಿಗೆ ಹೋಲಿಸಿದರೆ ಸಹಜವಾಗಿಯೇ ದೊಡ್ಡ ಪಕ್ಷವಾಗಿದ್ದ ಕಾಂಗ್ರೆಸ್‌, ಈಗ ಸೀಟು ಗಳಿಕೆ ಹೆಚ್ಚಿಸಿಕೊಂಡು ಇಂಡಿಯಾ ಮೈತ್ರಿಕೂಟಕ್ಕೆ ನೈಸರ್ಗಿಕ ನಾಯಕನಾಗಿ ಹೊರಹೊಮ್ಮಿದೆ. 

ನವದೆಹಲಿ(ಜೂ.05):  10 ವರ್ಷಗಳ ಹಿಂದೆ ನರೇಂದ್ರ ಮೋದಿಯವರ ಅಬ್ಬರದ ಗೆಲುವಿನ ಬಳಿಕ ನೆಲಕಚ್ಚಿದ್ದ 140 ವರ್ಷಗಳ ಇತಿಹಾಸವಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ ಈ ಬಾರಿಯ ಲೋಕಸಭೆ ಚುನಾವಣೆಯ ಮೂಲಕ ಪುನಃ ಫೀನಿಕ್ಸ್‌ ಹಕ್ಕಿಯಂತೆ ಎದ್ದು ಬಂದಿದೆ. ಕಾಂಗ್ರೆಸ್‌ ಪಕ್ಷದ ಪುನರುತ್ಥಾನದ ಜೊತೆಗೇ ಬಿಜೆಪಿಗೆ ಪ್ರಬಲ ವಿರೋಧಿ ಶಕ್ತಿಯಾಗಿ ಕಾಂಗ್ರೆಸ್‌ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಕೂಡ ಎದ್ದುನಿಂತಿದೆ.

ಕಳೆದ ಎರಡು ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧೆ ನೀಡಲು ವಿಫಲವಾದ ಕಾಂಗ್ರೆಸ್‌ ಪಕ್ಷವು ಈ ಬಾರಿಯ ಚುನಾವಣೆಗೂ ಮುನ್ನ ಸಣ್ಣಪುಟ್ಟ ರಾಜಕೀಯ ಪಕ್ಷಗಳೆಲ್ಲ ಸೇರಿ ರಚಿಸಿಕೊಂಡ ಇಂಡಿಯಾ ಮೈತ್ರಿಕೂಟಕ್ಕೆ ತಾನೂ ಅಹಂ ಬಿಟ್ಟು ಸೇರ್ಪಡೆಗೊಂಡಿತ್ತು. ಆ ಪಕ್ಷಗಳಿಗೆ ಹೋಲಿಸಿದರೆ ಸಹಜವಾಗಿಯೇ ದೊಡ್ಡ ಪಕ್ಷವಾಗಿದ್ದ ಕಾಂಗ್ರೆಸ್‌, ಈಗ ಸೀಟು ಗಳಿಕೆ ಹೆಚ್ಚಿಸಿಕೊಂಡು ಇಂಡಿಯಾ ಮೈತ್ರಿಕೂಟಕ್ಕೆ ನೈಸರ್ಗಿಕ ನಾಯಕನಾಗಿ ಹೊರಹೊಮ್ಮಿದೆ.

ಲೋಕಸಭೆ ಚುನಾವಣೆ ಫಲಿತಾಂಶ 2024: ಕಾಂಗ್ರೆಸ್‌ ಪುಟಿದೇಳುವಂತೆ ಮಾಡಿದ ಖರ್ಗೆ

ಶಕ್ತಿಹೀನವಾಗಿದ್ದ ಕಾಂಗ್ರೆಸ್‌ ಪಕ್ಷ ಮರಳಿ ಶಕ್ತಿ ಗಳಿಸಿಕೊಳ್ಳುವುದಕ್ಕೆ ಹಲವಾರು ಕಾರಣಗಳಿವೆ. ಪ್ರಮುಖವಾಗಿ, ಕರ್ನಾಟಕದ ಉಚಿತ ಯೋಜನೆಗಳ ಮಾದರಿಯನ್ನು ರಾಷ್ಟ್ರ ಮಟ್ಟದಲ್ಲೂ ಪ್ರಯೋಗಿಸಲು ಮುಂದಾಗಿದ್ದರಿಂದ ಮಹಿಳೆಯರ ಬೆಂಬಲ ತಕ್ಕಮಟ್ಟಿಗೆ ಲಭಿಸಿದೆ. ಇದಕ್ಕಿಂತಲೂ ಹೆಚ್ಚಾಗಿ, ಕಾಂಗ್ರೆಸ್‌ ಪಕ್ಷದ ಸೀಟು ಗಳಿಕೆ ಹೆಚ್ಚುವುದರಲ್ಲಿ ಬಿಜೆಪಿಯ ಕೊಡುಗೆಯೇ ಸಾಕಷ್ಟಿದೆ. ಸೇನೆಗೆ ಯುವಕರನ್ನು ಕಾಯಂ ನೇಮಕಾತಿ ಮಾಡಿಕೊಳ್ಳುವ ವ್ಯವಸ್ಥೆಯನ್ನು ಬದಲಿಸಿ ತಾತ್ಕಾಲಿಕ ನೇಮಕಾತಿಗೆ ಅಗ್ನಿವೀರ ಯೋಜನೆಯನ್ನು ತಂದಿರುವುದು ಯುವಕರ ಆಕ್ರೋಶಕ್ಕೆ ಕಾರಣವಾಗಿತ್ತು. ಅದನ್ನು ಪ್ರಚಾರದ ಸರಕಾಗಿಸಿಕೊಂಡು ಬಿಜೆಪಿಯ ವಿರುದ್ಧ ತಿರುಗಿಸುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ. ಅದರ ಜೊತೆಗೆ, ಮೂರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟವನ್ನು ಸಂಘಟಿಸಿದ್ದು ಕೂಡ ಫಲ ನೀಡಿದೆ.

ಬಿಜೆಪಿ ಗೆದ್ದರೆ ಸಂವಿಧಾನ ಬದಲಿಸುತ್ತದೆ, ಬಿಜೆಪಿ ಶ್ರೀಮಂತರ ಪರವಾಗಿರುವ ಹಾಗೂ ಬಡವರ ವಿರೋಧಿಯಾಗಿರುವ ಪಕ್ಷ, ಉದ್ಯೋಗ ಸೃಷ್ಟಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂಬ ಪ್ರಚಾರವನ್ನೂ ಕಾಂಗ್ರೆಸ್‌ ಪಕ್ಷ ಬಲವಾಗಿ ಮಾಡಿದ್ದು ಆ ಪಕ್ಷಕ್ಕೆ ಅನುಕೂಲ ಮಾಡಿಕೊಟ್ಟಿದೆ. ಕೆಲ ರಾಜ್ಯಗಳಲ್ಲಿ ಬಿಜೆಪಿ ವಿರುದ್ಧ ಇದ್ದ ಆಡಳಿತವಿರೋಧಿ ಅಲೆ ಹಾಗೂ ಉತ್ತರ ಪ್ರದೇಶದಲ್ಲಿ ನಿರೀಕ್ಷೆ ಮೀರಿ ಇಂಡಿಯಾ ಮೈತ್ರಿಕೂಟ ಮಾಡಿರುವ ಸಾಧನೆಯು ಕಾಂಗ್ರೆಸ್‌ನ ವರ್ಚಸ್ಸು ಹೆಚ್ಚಿಸುವಲ್ಲಿ ಯಶಸ್ವಿಯಾಗಿವೆ.

2014ರ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿನ ಬಳಿಕ ನರೇಂದ್ರ ಮೋದಿ ಪ್ರವರ್ಧಮಾನಕ್ಕೆ ಬಂದ ರೀತಿಯಿಂದಾಗಿ ಇನ್ನು 40 ವರ್ಷಗಳ ಕಾಲ ಬಿಜೆಪಿಗೆ ದೇಶದಲ್ಲಿ ಪ್ರಬಲ ವಿರೋಧ ಪಕ್ಷಗಳೇ ಇರುವುದಿಲ್ಲ ಎಂದು ಹೇಳಲಾಗುತ್ತಿತ್ತು. ಆ ಮಾತನ್ನು ಕೇವಲ 10 ವರ್ಷಗಳಲ್ಲಿ ಸುಳ್ಳಾಗಿಸುವ ಮೂಲಕ ಕಾಂಗ್ರೆಸ್‌ ತನ್ನಲ್ಲಿ ಇನ್ನೂ ಚೈತನ್ಯವಿದೆ ಎಂಬುದನ್ನು ತೋರಿಸಿಕೊಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!