Karnataka Politics: ಕಾಂಗ್ರೆಸ್‌ಗೆ ಭವಿಷ್ಯವೇ ಇಲ್ಲ: ಸಿಎಂ ಬೊಮ್ಮಾಯಿ

By Kannadaprabha NewsFirst Published Feb 23, 2022, 5:48 AM IST
Highlights

*   ಕನಿಷ್ಠ ಪ್ರತಿಪಕ್ಷವಾಗಿಯಾದರೂ ಕೆಲಸ ಮಾಡುವಲ್ಲಿ ಕಾಂಗ್ರೆಸ್‌ ವಿಫಲ
*   ರಾಜಕಾರಣದ ಮುಸುಕು ಅವರ ಮತ್ತು ಪಕ್ಷದ ಮೇಲೆ ಬಿದ್ದಿದೆ
*   ನಾವೆಲ್ಲರೂ ಒಕ್ಕೊರಲಿನ ಸಂದೇಶವನ್ನು ನೀಡೋಣ
 

ಬೆಂಗಳೂರು(ಫೆ.23): ರಾಜಕಾರಣದ ಮುಸುಕು ಕಾಂಗ್ರೆಸ್‌ ಮುಖಂಡರು ಮತ್ತವರ ಪಕ್ಷದ ಮೇಲೆ ಬಿದ್ದಿದ್ದು, ಅವರಿಗೆ ಭವಿಷ್ಯ ಇಲ್ಲ. ಕನಿಷ್ಠ ಪ್ರತಿಪಕ್ಷವಾಗಿಯಾದರೂ ಕೆಲಸ ಮಾಡುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಟೀಕಾಪ್ರಹಾರ ನಡೆಸಿದರು.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಆಡಳಿತ ಪಕ್ಷವಾಗಿ ಕೆಲಸ ಮಾಡಲು ಯೋಗ್ಯರಲ್ಲ ಎಂದು ಕಾಂಗ್ರೆಸ್‌(Congress) ಅನ್ನು 2018ರಲ್ಲಿ ಜನರು ತೀರ್ಮಾನಿಸಿ ತಿರಸ್ಕರಿಸಿದರು. ಕನಿಷ್ಠ ಪ್ರತಿಪಕ್ಷವಾಗಿ ಕೆಲಸ ಮಾಡಬೇಕಿತ್ತು. ಆದರೆ, ಪ್ರತಿಪಕ್ಷವಾಗಿಯೂ ವಿಫಲವಾಗಿದೆ. ರಾಜಕಾರಣದ(Politics) ಮುಸುಕು ಅವರ ಮತ್ತು ಪಕ್ಷದ ಮೇಲೆ ಬಿದ್ದಿದೆ. ಎಲ್ಲವನ್ನು ರಾಜಕೀಯವಾಗಿ ಮತ್ತು ದ್ವೇಷದಿಂದ ನೋಡುವುದರಿಂದ ಮುಖಂಡರಿಗಾಗಲಿ, ಅವರ ಪಕ್ಷಕ್ಕಾಗಲಿ ರಾಜಕೀಯ ಭವಿಷ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

Latest Videos

Karnataka Politics: 'ಸಿಎಂ ಬೊಮ್ಮಾಯಿ ಜಾತಿವಾದಿಗಳ ಶಿಷ್ಯ'

ಸದನವು ಶುಕ್ರವಾರದವರೆಗೆ ನಡೆಯಬೇಕಿತ್ತು. ಆದರೆ, ಕಾಂಗ್ರೆಸ್‌ ನಡೆಯಿಂದಾಗಿ ಸದನವನ್ನು ಮಂಗಳವಾರವೇ ಮೊಟಕುಗೊಳಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದ್ದು ಬೇಸರದ ಸಂಗತಿ. ಪ್ರತಿಪಕ್ಷದವರು ಸದನ ಕರೆಯಿಂದ ಚರ್ಚೆ ಮಾಡಬೇಕು ಎನ್ನುತ್ತಾರೆ. ಅಧಿವೇಶನ(Session) ನಡೆಯುವಾಗ ಚರ್ಚೆ ಮಾಡಲು ಸಿದ್ಧರಿಲ್ಲ. ಯಾವುದೇ ವಿಚಾರವೇ ಆಗಲಿ ಚರ್ಚೆ ಮತ್ತು ವಾದ ಮಾಡಬಹುದು. ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಸರ್ಕಾರದ ಸಾಧನೆಯನ್ನು ಹೇಳಿಕೊಂಡಾಗ ಅದರ ನ್ಯೂನತೆಗಳನ್ನು ಹೇಳಬಹುದಿತ್ತು. ಆ ಕರ್ತವ್ಯವನ್ನೂ ಮಾಡಲಿಲ್ಲ. ಗ್ರಾಮೀಣಾಭಿವೃದ್ಧಿ ಸಚಿವರ ಹೇಳಿಕೆ ಮೇಲೆ ಚರ್ಚೆ ನಡೆಸಬಹುದಿತ್ತು. ಎಲ್ಲಾ ವಿಚಾರದಲ್ಲಿಯೂ ಉತ್ತರ ನೀಡಲು ಸರ್ಕಾರ ಮುಕ್ತವಾಗಿತ್ತು. ಕಾಂಗ್ರೆಸ್‌ಗೂ ಗೊತ್ತಿದೆ, ಸಚಿವರ ಹೇಳಿಕೆಯಲ್ಲಿ ಏನೂ ಇಲ್ಲ ಎಂಬುದು. ಧರಣಿ ಮೂಲಕ ಸದನದ ಮತ್ತು ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.

ವಸ್ತ್ರ ಸಂಹಿತೆಯ ಬಗ್ಗೆ ಹೈಕೋರ್ಟ್‌ನಲ್ಲಿ(High Court) ಗಂಭೀರವಾದ ಚರ್ಚೆ ನಡೆಯುತ್ತಿದೆ. ಈಗಾಗಲೇ ಮಧ್ಯಂತರ ಆದೇಶ ನೀಡಿದ್ದು, ಅದರ ಅನುಷ್ಠಾನವಾಗುತ್ತಿದೆ. ಈ ಸಂದರ್ಭದಲ್ಲಿ ಕೆಲವು ಗೊಂದಲಗಳನ್ನು ಸೃಷಿ ಮಾಡಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ನಾವೆಲ್ಲರೂ ಒಕ್ಕೊರಲಿನ ಸಂದೇಶವನ್ನು ನೀಡೋಣ. ಅಂತಿಮ ಆದೇಶ ಬರುವವರೆಗೂ ಕಾದು, ಶಾಂತಿಯಿಂದ ಇರಬಹುದಾಗಿತ್ತು. ಮಕ್ಕಳ ವಿದ್ಯಾಭ್ಯಾಸ ಬಹಳ ಮುಖ್ಯ. ಪರೀಕ್ಷೆಗಳಿವೆ ಎಂಬ ಕನಿಷ್ಠ ಸಂದೇಶವನ್ನು ಕೊಡಲು ಸಹ ಅವರಿಗೆ ಸಾಧ್ಯವಾಗಲಿಲ್ಲ. ಮಾನವೀಯತೆ ವಿಚಾರವನ್ನೇ ಇಟ್ಟುಕೊಂಡಿಲ್ಲ. ರಾಜಕಾರಣವೇ ಪ್ರಮುಖವಾಗಿದೆ. ರಾಜಕಾರಣದಲ್ಲಿಯೂ ಪ್ರತಿಪಕ್ಷ ನಾಯಕ ಮತ್ತು ಕಾಂಗ್ರೆಸ್‌ ಅಧ್ಯಕ್ಷರು ಹಿರಿಯರು. ಬಹಳ ವರ್ಷಗಳಿಂದ ರಾಜಕಾರಣದಲ್ಲಿರುವವರು. ಅವರ ಅನುಭವ ಎಲ್ಲಿ ಹೋಯಿತು. ಅವರ ಅನುಭವದಿಂದ ಪ್ರತಿಪಕ್ಷವಾಗಿ ಕೆಲಸ ಮಾಡಿದ್ದರೆ, ಜನ ಮೆಚ್ಚಿಕೊಳ್ಳುತ್ತಿದ್ದರು ಎಂದರು.

ಹಿಂದೂ ಕಾರ್ಯಕರ್ತನನ್ನು ರಕ್ಷಿಸಿಕೊಳ್ಳುವ ಶಕ್ತಿ ಬೊಮ್ಮಾಯಿ ಸರ್ಕಾರಕ್ಕೆ ಇಲ್ಲವೇ?: ಸ್ವಾಮೀಜಿ ಪ್ರಶ್ನೆ

ಹೂವಿನಹಡಗಲಿ: ಶಿವಮೊಗ್ಗದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತನ ಕೊಲೆ ಮಾಡಿರುವುದನ್ನು ಹಿರೇಹಡಗಲಿಯ ಸದ್ಗುರು ಶಿವಯೋಗಿ ಸಂಸ್ಥಾನ ಮಠದ ಅಭಿನವ ಹಾಲವೀರಪ್ಪಜ್ಜ(Abhinava Hala Veerappajja) ಖಂಡಿಸಿದ್ದರು. 

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹತ್ಯೆ ಕೇಸ್: ಈಶ್ವರಪ್ಪ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಸಿಎಂ

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಪರ ಕಾರ್ಯಕರ್ತನ ಕಗ್ಗೊಲೆ ಆಗಿರುವುದು ನೋಡಿದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ(BJP Government) ಇದೆಯಾ? ಅಥವಾ ಯಾವ ಸರ್ಕಾರ ಆಳ್ವಿಕೆ ಮಾಡುತ್ತಿದೆ ಎಂಬ ಅನುಮಾನ ಕಾಡುತ್ತಿದೆ ಎಂದರು.

ರಾಜ್ಯದಲ್ಲಿ(Karnataka) ಯಾವುದೇ ಸರ್ಕಾರ ಇರಲಿ, ಹಿಂದೂಪರ ಸಂಘಟನೆಯ ಕಾರ್ಯಕರ್ತರನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. ಈ ಸರ್ಕಾರಗಳಿಗೆ ಕಾರ್ಯಕರ್ತರ ಪ್ರಾಣಕ್ಕೆ ಬೆಲೆ ಇಲ್ಲದಂತಾಗಿದೆ. ಒಬ್ಬ ಹಿಂದೂ ಕಾರ್ಯಕರ್ತನನ್ನು ರಕ್ಷಿಸಿಕೊಳ್ಳುವ ಶಕ್ತಿ ಈ ಸರ್ಕಾರಕ್ಕೆ ಇಲ್ಲವೇ ಎಂದು ಪ್ರಶ್ನಿಸಿದ ಅವರು, ಇಂತಹ ಸರ್ಕಾರವನ್ನು ಹಿಂದೂ ಸಮಾಜ ಕ್ಷಮಿಸುವುದಿಲ್ಲವೆಂದು ಹೇಳಿದ್ದರು. 

ಸರ್ಕಾರ ಕೊಲೆ ಆರೋಪಿಗಳನ್ನು ರಕ್ಷಿಸದೆ ಅವರನ್ನು ಪತ್ತೆ ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ ಅವರು, ಕೊಲೆ ಮಾಡಿದ ಯುವಕರ ಬೆನ್ನಿಗೆ ರಾಜಕಾರಣಿಗಳು ನಿಲ್ಲಬಾರದು. ಓಲೈಕೆ ರಾಜಕಾರಣ(Politics) ಮಾಡಬಾರದು ಎಂದು ಹೇಳಿದ್ದರು.  
 

click me!