ಭ್ರಷ್ಟಾಚಾರ ಹುಟ್ಟು ಹಾಕಿದ ರಕ್ತ ಬೀಜಾಸುರ ಪಕ್ಷ ಕಾಂಗ್ರೆಸ್: ಪ್ರಹ್ಲಾದ್ ಜೋಶಿ ವಾಗ್ದಾಳಿ

By Suvarna News  |  First Published Mar 5, 2023, 7:57 PM IST

ಕಾಂಗ್ರೆಸ್ ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಭ್ರಷ್ಟಾಚಾರ ಹುಟ್ಟು ಹಾಕಿದ ರಕ್ತ ಬೀಜಾಸುರ ಪಕ್ಷ ಕಾಂಗ್ರೆಸ್ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.


ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್

ಚಿಕ್ಕಮಗಳೂರು (ಮಾ.5): ರಾಜ್ಯದ ಜನತೆ ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರವನ್ನು ಬಯಸುತ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಬಹುಮತದಿಂದ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ ವ್ಯಕ್ತಪಡಿಸಿದ್ದರು. ಚಿಕ್ಕಮಗಳೂರು ಜಿಲ್ಲೆಯ ಬಾಳೆ ಹೊನ್ನೂರಿನ ರಂಭಾಪುರಿ ಪೀಠದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ರಾಜ್ಯದಲ್ಲಿ ನಾಲ್ಕೈದು ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಇದೇ ತಿಂಗಳ 12ರಂದು ಮಂಡ್ಯದ ಮದ್ದೂರಿನಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯನ್ನು ಪ್ರಧಾನ ಮಂತ್ರಿಗಳು ಉದ್ಘಾಟಿಸಲಿದ್ದು, ಅಂದು ಐತಿಹಾಸಿಕ ಸಾರ್ವಜನಿಕ ಸಭೆ ನಡೆಯಲಿದೆ. ಇದಲ್ಲದೆ ಧಾರವಾಡದ ಐಐಟಿಯನ್ನು ಸಹ ಪ್ರಧಾನ ಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

Tap to resize

Latest Videos

Vijayapura: ನಂದಿ ಸಕ್ಕರೆ ಕಾರ್ಖಾನೆಯ ಬಾಯ್ಲರ್‌ ಸ್ಫೋಟ ಪ್ರಕರಣ, ಓರ್ವ ಬಲಿ, ಐವರ ಸ್ಥಿತಿ

ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ಕೊಟ್ಟಿದ್ದು ಬಿಜೆಪಿ:
ಕಾಂಗ್ರೆಸ್ ಪಕ್ಷಕ್ಕೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ. ದೇಶದಲ್ಲಿ ಭ್ರಷ್ಟಾಚಾರದ ರಕ್ತ ಬೀಜಾಸುರನನ್ನು ಉತ್ಪಾದನೆ ಮಾಡಿದ್ದೆ ಕಾಂಗ್ರೆಸ್ ಪಕ್ಷ. ನೆಹರೂ ಕಾಲದ ಜೀಪ್ ಹಗರಣದಿಂದ ಹಿಡಿದು ಮನಮೋಹನ್ ಸಿಂಗ್ ಕಾಲದ ಕಲ್ಲಿದ್ದಲು ಹಗರಣ ಸೇರಿದಂತೆ ಇನ್ನಿತರೆ ಹಗರಣಗಳಲ್ಲಿ ಕಾಂಗ್ರೆಸ್ ಪಕ್ಷ ಮುಳುಗಿಹೋಗಿದೆದರು.

MYSURU: ದಶಕದ ದಾಂಪತ್ಯಕ್ಕೆ ಅಡ್ಡ ಬಂದವನ ರುಂಡ ತುಂಡರಿಸಿದ ಗಂಡ!

ಭ್ರಷ್ಟಾಚಾರದ ಭೂತವನ್ನು ಹುಟ್ಟಿಸಿದವರು ಕಾಂಗ್ರೆಸ್ನವರು. ಅವರು ಲೋಕಾಯುಕ್ತವನ್ನು ಬಂದ್ ಮಾಡಿದ್ದು ಏತಕ್ಕಾಗಿ, ಎಸಿಬಿಯನ್ನು ತಂದು ಅದಕ್ಕೂ ಅಧಿಕಾರವನ್ನು ಕೊಡಲಿಲ್ಲ. ಇದೀಗ ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ಕೊಟ್ಟಿದ್ದು ಬಿಜೆಪಿ ಸರ್ಕಾರ. ಯಾವ ಪಕ್ಷದವರೇ ತಪ್ಪು ಮಾಡಿದವರು ಲೋಕಾಯುಕ್ತ ಕ್ರಮ ಕೈಗೊಳ್ಳುತ್ತದೆ ಇದನ್ನು ಶ್ಲಾಘಿಸಬೇಕು. ನಮ್ಮ ಸರ್ಕಾರ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ವಿರುದ್ಧದ ಪ್ರಕರಣವನ್ನು ತಡೆಯಬಹುದಿತ್ತು. ಆದರೆ ಹಾಗೆ ನಮ್ಮ ಸರ್ಕಾರ ಮಾಡಲಿಲ್ಲ ಎಂದಿಗೂ ನಾವು ಭ್ರಷ್ಟಾಚಾರದ ವಿರುದ್ಧ ಎಂದರು.

click me!