
ರಾಮನಗರ(ಅ.01): ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ನಾವು ಕಾಂಗ್ರೆಸ್‌ಗೆ ಆಹ್ವಾನ ಮಾಡಿಲ್ಲ. ಅವರೇ ಮುಖಂಡರ ಕಡೆಯಿಂದ ಪಕ್ಷಕ್ಕೆ ಕರೆತರುವಂತೆ ಹೇಳಿಸುತ್ತಿದ್ದಾರೆ ಎಂದು ಶಾಸಕ ಎಚ್.ಸಿ ಬಾಲಕೃಷ್ಣ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೂ ಮುನ್ನ ಯೋಗೇಶ್ವರ್ ಬಂದಿದ್ದರೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೆವು. ಅವರಿಗೆ ಗೌರವ ನೀಡುತ್ತಿದ್ದೆವು. ಈಗ ಎಚ್.ಡಿ ಕುಮಾರಸ್ವಾಮಿ ಜೊತೆ ಸೇರಿಸಿಕೊಂಡಿದ್ದಾರೆ. ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಾರೆ ನೋಡೋಣ. ನಮ್ಮ ಹಣೆ ಬರಹ ಏನಿತ್ತೋ ಗೊತ್ತಿಲ್ಲ. ಬಂದಿದ್ದರೆ ಗೌರವವಾಗಿ ನಡೆಸಿಕೊಳ್ಳುತ್ತಿದ್ದೇವು ಎಂದರು.
ರಾಮನಗರ: ಕರ್ನಾಟಕ ಜಾನಪದ ಪರಿಷತ್ತಿಗೆ ಯುನೆಸ್ಕೋ ಮಾನ್ಯತೆ
ಮಾಜಿ ಸಂಸದ ಡಿ.ಕೆ.ಸುರೇಶ್ ಸದ್ಯಕ್ಕೆ ಚುನಾವಣೆ ಬೇಡ ಅನ್ನುತ್ತಿದ್ದಾರೆ. ಸಾಧಕ ಬಾಧಕ ಎಲ್ಲವನ್ನೂ ನೋಡಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ. ಚನ್ನಪಟ್ಟಣ ಚುನಾವಣಾ ಉಸ್ತುವಾರಿ ಚೆಲುವರಾಯಸ್ವಾಮಿ ಕೂಡ ಸಭೆ ನಡೆಸಿದ್ದು, ಸಾಕಷ್ಟು ಚರ್ಚೆಗಳನ್ನು ನಡೆಸಿದ್ದೇವೆ. ಆದಷ್ಟು ಬೇಗ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ ಎಂದು ಹೇಳಿದರು.
ಚನ್ನಪಟ್ಟಣ ಉಪಚುನಾವಣೆ ದೃಷ್ಟಿಯಿಂದ ಈಗಾಗಲೇ ಕ್ಷೇತ್ರದಲ್ಲಿ ಓಡಾಟ ನಡೆಸಿ ಮುಖಂಡರ ಜೊತೆ ಚರ್ಚೆ ಮಾಡಿ ದ್ದೇವೆ. ಅಂತಿಮವಾಗಿ ನಮ್ಮ ವಿರೋಧಿ ಯಾರು ಅಂತಾ ಗೊತ್ತಾದ ಮೇಲೆ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.