MLC Election: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಹೈಕಮಾಂಡ್!

By Suvarna NewsFirst Published May 23, 2022, 8:57 PM IST
Highlights
  • ಎರಡು ಸ್ಥಾನಕ್ಕೆ ಅಭ್ಯರ್ಥಿಗಳ ಅಂತಿಮಗೊಳಿಸದ ಕಾಂಗ್ರೆಸ್
  • ನಾಗರಾಜು ಯಾದವ್, ಅಬ್ದುಲ್ ಜಬ್ಬಾರ್‌ಗೆ ಟಿಕೆಟ್
  • ಕಾಂಗ್ರೆಸ್ ಹೈಕಮಾಂಡ್‌ನಿಂದ ಕಾಂಗ್ರೆಸ್ ಪಟ್ಟಿ ಪ್ರಕಟ

ನವದೆಹಲಿ(ಮೇ.23): ವಿಧಾನಪರಿಷತ್ ಚುನಾವಣೆ ಕಣ ರಂಗೇರಿದೆ. ಇದರ ನಡುವೆ ಕಾಂಗ್ರೆಸ್ ಎರಡು ಸ್ಥಾನಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಎಂ ನಾಗರಾಜು ಯಾದವ್ ಹಾಗೂ ಕೆ ಅಬ್ದುಲ್ ಜಬ್ಬಾರ್ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿ ಪ್ರಕಟಿಸಿದೆ.

ಭಾರಿ ಕುತೂಹಲ ಮೂಡಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಗೊಂದಲಗಳಿಗೂ ಕಾರಣವಾಗಿತ್ತು. ಸಿದ್ದರಾಮಯ್ಯ ಬಣ ಹಾಗೂ ಡಿಕೆ ಶಿವಕುಮಾರ್ ಬಣದ ನಡುವೆ ಅಭ್ಯರ್ಥಿಗಳ ಆಯ್ಕೆಗೆ ಜಿದ್ದಾಜಿದ್ದಿ ನಡೆದಿತ್ತು ಅನ್ನೋ ವರದಿಗಳು ಹರಿದಾಡಿತ್ತು. ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಸುದೀರ್ಘ ಚರ್ಚೆ ನಡೆಸಿತ್ತು.

ವಿಜಯೇಂದ್ರಗೆ ಪರಿಷತ್‌ ಟಿಕೆಟ್‌: ಸಿಎಂ ಶಿಫಾರಸು

ಹಲವು ನಾಯಕರ ಲಾಬಿ ನಡುವೆ  ಎಂ ನಾಗರಾಜು ಯಾದವ್ ಹಾಗೂ ಕೆ ಅಬ್ದುಲ್ ಜಬ್ಬಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇದೀಗ ಎಲ್ಲರ ಚಿತ್ತ ಬಿಜೆಪಿಯತ್ತ ನೆಟ್ಟಿದೆ. 

"

ಚುನಾವಣಾ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್‌ ಸಭೆ
ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಬೆಳಗಾವಿಯಲ್ಲಿ ಕಾಂಗ್ರೆಸ್‌ ಮುಖಂಡರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಚುನಾವಣೆಯನ್ನು ಯಾವ ರೀತಿಯಾಗಿ ಎದುರಿಸಬೇಕು ಎಂದು ಚರ್ಚಿಸಲಾಯಿತು.

ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲವು ಸಾಧಿಸಿದ್ದರಿಂದಾಗಿ ಅದೇ ಹುಮ್ಮಸ್ಸಿನಲ್ಲಿ ಕೆಲಸ ಮಾಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ನೀಡಿದರು.

MLC Election: 26ಕ್ಕೆ ಸಿಎಂ ನೇತೃತ್ವದಲ್ಲಿ ನಾಮಪತ್ರ ಸಲ್ಲಿಕೆ: ಹೊರಟ್ಟಿ

ಅಭ್ಯರ್ಥಿ, ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಪ್ರಭಾವಿ ನಾಯಕರು, ಸಚಿವರಾಗಿ, ಸಂಸದರಾಗಿ ಸಾಕಷ್ಟುಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರಿಗೆ ಯಾವ ಪ್ರಮಾಣಪತ್ರ ಬೇಕಿಲ್ಲ. ಈ ಚುನಾವಣೆಯಲ್ಲಿ ಸ್ಪರ್ಧಿಸಲು ಡಿಗ್ರಿ ಸರ್ಟಿಫಿಕೇಟ್‌ ಬೇಕೆಂದು ಬಿಜೆಪಿಯವರು ಹೇಳುತ್ತಿದ್ದಾರೆ. ಪ್ರಭಾವಿ ನಾಯಕರಿಗೆ ಅದರ ಅಗತ್ಯವಿಲ್ಲ, ಅವರಿಗೆ ನಾವು ಬಲ ತುಂಬುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಮೀಷನ್‌ ದಂಧೆಗಿಳಿದ ಬಿಜೆಪಿ:
ಯಾವುದೇ ಅಭಿವೃದ್ಧಿಯಾಗಬೇಕಾದರೆ ಬಿಜೆಪಿಯಲ್ಲಿ ಶೇ.40 ರಷ್ಟುಕಮಿಷನ್‌ ಇದೆ. ಈಗ ಶೇ.50 ರಷ್ಟುಕಮಿಷನ್‌ಗೆ ಬಂದು ನಿಂತಿದೆ. ಇತ್ತೀಚೆಗೆ ಲಿಂಗಸೂರಿನ ಅಭಿವೃದ್ಧಿ ಕಾಮಗಾರಿಯಲ್ಲಿ ಶೇ.50ರಷ್ಟುಭ್ರಷ್ಟಾಚಾರದ ನಡೆದಿರುವುದು ಕೇಳಿ ಬಂದಿದೆ. ಈ ಭ್ರಷ್ಟಾಚಾರದಲ್ಲಿ ಎಲ್ಲ ಬಿಜೆಪಿಗರು ಶಾಮೀಲಾಗಿದ್ದಾರೆ. ಇಂತಹ ಚುನಾವಣೆ ಎದುರಿಸಲು ಬಿಜೆಪಿ ಕಮಿಷನ್‌ ದಂಧೆಗೆ ಇಳಿದಿದೆ ಎಂದು ವಾಗ್ದಾಳಿ ನಡೆಸಿದರು.

ಚುನಾವಣೆಯಲ್ಲಿ ಬಹುಮತ ಸಾಧಿಸಲು .30ಕೋಟಿಯಿಂದ 50 ಕೋಟಿ ಹಣಬೇಕು, ಕಮೀಷನ್‌ದಿಂದ ಇವೆಲ್ಲವೂ ಸಾಧ್ಯ. 5-6 ಸೀಟ್‌ಗಾಗಿ ಕೋಟಿ ರುಪಾಯಿ ಬಂಡವಾಳ ಹೂಡಿಕೆ ಮಾಡುತ್ತಾರೆ ಎಂದು ಟೀಕಿಸಿದರು.
 

click me!