
ಬೆಂಗಳೂರು, (ಮಾ.11): ಕೊನೆಗೂ ಡಿಕೆ ಶಿವಕುಮಾರ್ ಅವರನ್ನ ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಅಧ್ಯಕ್ಷರನ್ನಾಗಿ ಆಯ್ಮೆ ಮಾಡಿದೆ.
ಡಿಕೆಶಿಗೆ ಅಧ್ಯಕ್ಷ ಸ್ಥಾನ ನೀಡಿದ್ದು, ಜತೆಗೆ ಸತೀಶ್ ಜಾರಕಿಹೊಳಿ, ಸಲೀಂ ಅಹಮ್ಮದ್, ಈಶ್ವರ್ ಖಂಡ್ರೆ ಅವರನ್ನ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಇಂದು (ಬುಧವಾರ) ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ.
ಇದರ ಜತೆಗೆ ನೂತನ ಕೆಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡಿರುವ ಎಐಸಿಸಿ ಮುಖ್ಯ ಸಚೇತಕರನ್ನು ಬದಲಾವಣೆ ಮಾಡಿದೆ. ವಿಧಾನಸಭೆ ಮುಖ್ಯ ಸಚೇತಕರಾಗಿ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ಹಾಗೂ ವಿಧಾನಪರಿಷತ್ ಮುಖ್ಯ ಸಚೇತಕರಾಗಿ ಎಂ. ನಾರಾಯಣ ಸ್ವಾಮಿ ನೇಮಕಗೊಂಡಿದ್ದಾರೆ.
ಇನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮತ್ತು ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರು ಮುಂದುವರಿಯಲಿ ಎಂದು ಹೈಕಮಾಂಡ್ ತಿಳಿಸಿದೆ. ಇದರಿಂದ ಸಿದ್ದರಾಮಯ್ಯ ಅವರು ತಮ್ಮ ಹಠ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷರನ್ನಾಗಿ ಡಿಕೆ ಶಿವಕುಮಾರ್ ಅವರನ್ನ ನೇಮಕ ಮಾಡಿ. ಅದರ ಜತೆ ಮೂವರನ್ನ ಕಾರ್ಯಾಧ್ಯಕ್ಷರನ್ನ ನೇಮಕ ಮಾಡಬೇಕೆಂದು ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಡಿಮ್ಯಾಂಡ್ ಇಟ್ಟಿದ್ದರು.
ಅಲ್ಲದೇ ವಿರೋಧ ಪಕ್ಷ ಹಾಗೂ ಶಾಸಕಾಂಗ ಪಕ್ಷನ ನಾಯಕ ಸ್ಥಾನವನ್ನ ವಿಭಜಿಸುವುದಕ್ಕೆ ಸಿದ್ದರಾಮಯ್ಯ ಅವರು ವಿರೋಧಿಸಿದ್ದರು. ಒಂದು ವೇಳೆ ಎರಡು ಹುದ್ದೆಗಳನ್ನ ವಿಭಜಿಸಿದರೆ ನನಗೆ ಯಾವುದೇ ಹುದ್ದೆ ಬೇಡ ಎಂದು ಹೈಕಮಾಂಡ್‌ಗೆ ತಿಳಿಸಿದ್ದರು.
ಸಿದ್ದರಾಂಯ್ಯನವರ ಈ ಎಲ್ಲಾ ಡಿಮ್ಯಾಂಡ್‌ಗಳಿಂದ ಕಾಂಗ್ರೆಸ್ ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷರ ಆಯ್ಕೆಯನ್ನ ವಿಳಂಬ ಮಾಡಿತ್ತು. ಇದೀಗ ಕೊನೆಗೂ ಅಳೆದು ತೂಗಿ ಸಿದ್ದರಾಯ್ಯನವರ ಮಾತಿನಂತೆ ಕೆಪಿಸಿಸಿ ಅಧ್ಯಕ್ಷ ಜತೆಗೆ ಮೂವರನ್ನ ಕಾರ್ಯಾಧ್ಯಕ್ಷರನ್ನ ನೇಮಕ ಮಾಡಿದೆ.
ಮಾರ್ಚ್ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.