
ಬೆಂಗಳೂರು(ಡಿ.14) : ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ರಾಜ್ಯ ಕಾಂಗ್ರೆಸ್ ಭಾರಿ ರಣತಂತ್ರ ರೂಪಿಸುತ್ತಿದೆ. ಸ್ಪಷ್ಟ ಬಹುಮತದ ಮೂಲಕ ಸರ್ಕಾರ ರಚಿಸಲು ಎಲ್ಲಾ ಪ್ರಯತ್ನ ಮಾಡುತ್ತಿದೆ. ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರ ಜೊತೆ ದೆಹಲಿಯಲ್ಲಿ ಮಹತ್ವ ಸಭೆ ನಡೆಸಿದ್ದಾರೆ. ಇದೀಗ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ 36 ಮಂದಿಯನ್ನೊಳಗೊಂಡ ಹೊಸ ಸಮಿತಿ ರಚಿಸಿ ಆದೇಶ ನೀಡಿದ್ದಾರೆ. ರಾಜ್ಯ ಚುನಾವಣೆ ಕುರಿತು ಮಹತ್ವದ ನಿರ್ಧಾರಗಳನ್ನು ಹೊಸ ಪ್ರದೇಶ ಚುನಾವಣಾ ಸಮಿತಿ ನೋಡಿಕೊಳ್ಳಲಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್ ಎಂಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಸೇರಿದಂತೆ ಹಲವು ಮುಖಂಡರು ಈ ಸಮಿತಿಯಲ್ಲಿದ್ದಾರೆ. ವಿನಯ್ ಕುಲಕರ್ಣಿ, ಮಾಜಿ ಮೇಯರ್ ಜಿ ಪದ್ಮಾವತಿ ಶರಣಪ್ಪ ಸುನಗಾರ್, ಶಿವರಾಜ ತಂಗಡಗಿ ಸೇರಿದಂತೆ ಕಾಂಗ್ರೆಸ್ ನಲ್ಲಿ ಮುನಿಸಿಕೊಂಡಿದ್ದ ಎಂ ಆರ್ ಸೀತಾರಾಂ ಸ್ಥಾನ ಪಡೆದಿರುವುದು ಅಚ್ಚರಿ ಮೂಡಿಸಿದೆ.
ಕಾಂಗ್ರೆಸ್ ನ ಪ್ರದೇಶ ಎಲೆಕ್ಷನ್ ಕಮಿಟಿ ಸದಸ್ಯರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.