
ಬೆಂಗಳೂರು, (ನ.02): ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಡುವಿನ ಟ್ವಿಟರ್ ವಾರ್ ಮುಂದುವರೆದಿದ್ದು, ಈ ಬಾರಿ ಸಿದ್ದರಾಮಯ್ಯ ಅವರ ಪರವಾಗಿ ಕೆಪಿಸಿಸಿ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಅವರದು ನಾಯಿ ಪಾಡಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದರು. ಇದಕ್ಕೆ ಕಾಂಗ್ರೆಸ್ ಸರಣಿ ಟ್ವಿಟ್ ಮಾಡುವ ಮೂಲಕ ತೀಕ್ಷ್ನವಾಗಿ ಪ್ರತಿಕ್ರಿಯಿಸಿದೆ.
'ಸಿದ್ದರಾಮಯ್ಯಗೆ ಕಾಂಗ್ರೆಸ್‌ನ ಇನ್ನಷ್ಟು ಶಾಸಕರು ಪಕ್ಷ ಬಿಡುವ ಭೀತಿ'
ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ..? ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಾಮಿಡಿ ಆಕ್ಟರ್ ನಳೀನ್ ಕುಮಾರ್ ಕಟೀಲ್ ಸಾಕ್ಷಿ. ಇವರ ಮಾತಲ್ಲಿ ಘನತೆ, ಗೌರವ, ಬದ್ಧತೆ, ಯಾವುದೂ ಇಲ್ಲ ಎಂದು ಕಿಡಿಕಾರಿದ್ದಾರೆ. ಸರ್ವಜನಾಂಗದ ನಾಯಕ, ಹಣಕಾಸು ತಜ್ಞ, 168 ಯೋಜನೆಗಳನ್ನು ಘೋಷಿಸಿ ಜಾರಿಗೊಳಿಸಿ ನುಡಿದಂತೆ ನೆಡೆದ ನಾಯಕ ಸಿದ್ದರಾಮಯ್ಯ ಎಂದು ಸಮರ್ಥಿಸಿಕೊಂಡಿದೆ.
ಒಂದು ಪಂಪ್‍ವೆಲ್ ಮೇಲ್ಸೇತುವೆಯನ್ನು ಸಮಯಕ್ಕೆ ಮುಗಿಸಲಾಗದ ನಳೀನ್ ಕುಮಾರ್ ಕಟೀಲ್ ಅವರಿಗೆ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ, ನಮ್ಮ ಪ್ರತಿ ಕಾರ್ಯಕರ್ತರಲ್ಲೂ ಸಿದ್ದರಾಮಯ್ಯನವರ ಬಗ್ಗೆ ಅದಮ್ಯವಾದ ಗೌರವವಿದೆ ಎಂದು ಕೆಪಿಸಿಸಿ ವಾಗ್ದಾಳಿ ಮಾಡಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪದೇ ಪದೇ ಅವಹೇಳನ ಮಾಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ರಿಗೆ ಕನಿಷ್ಠ ನೋಟಿಸನ್ನೂ ಕೊಡದಿದ್ದಿದ್ದು, ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಭೇಟಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಣ್ಣ ಸಮಯ ಕೊಡದಿದ್ದನ್ನು ನೋಡಿದರೆ ರಾಜ್ಯ ಬಿಜೆಪಿ ಯಾವ ಪಾಡಿನಲ್ಲಿದೆ ಎಂದು ತಿಳಿಯುತ್ತದೆ. ಮೊದಲು ಬಿಜೆಪಿ ಪಕ್ಷ ಕಟ್ಟಿದ ಯಡಿಯೂರಪ್ಪ ಅವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ತಿರುಗೇಟು ಕೊಟ್ಟಿದೆ.
ಕಟೀಲ್ ತಮ್ಮ ನಡೆ-ನುಡಿಯ ಮೂಲಕ ತಾವೊಬ್ಬ ಅಪ್ರಬುದ್ಧ, ಅನಾಗರಿಕ, ಸಡಿಲ ನಾಲಿಗೆಯ ಯಕಶ್ಚಿತ್ ರಾಜಕಾರಣಿ ಎಂದು ಮತ್ತೆ ಮತ್ತೆ ಸಾಬೀತು ಮಾಡುತ್ತಿದ್ದಾರೆ. ಬಿಜೆಪಿಯ ಮಾನ ಹರಾಜು ಹಾಕಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು. ಅವರು ಇದೇ ರೀತಿ ಮಾತನಾಡುತ್ತಾ ಬಿಜೆಪಿಯ ಬಣ್ಣ ಬಯಲು ಮಾಡುತ್ತಲೇ ಇರಲಿ ಎಂದು ಕೆಪಿಸಿಸಿ ಟ್ವೀಟ್ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.