ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿಗಳಿಂದಾಗಿ ಹಲವು ನಿಗಮಗಳ ಹಣ ದೊರಕುತ್ತಿಲ್ಲ. ಇದರಿಂದ ವಿವಿಧ ಸಮುದಾಯಗಳ ಬಡ ವಿದ್ಯಾರ್ಥಿಗಳ ಬದುಕನ್ನು ಕತ್ತಲಲ್ಲಿ ಇಟ್ಟಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಹಿಂದುಳಿದವರ ಮೇಲೆ ಇಟ್ಟಿರುವ ಡೋಂಗಿ ಮುಖವಾಡವನ್ನು ಕಳಚಬೇಕಿದೆ ಎಂದು ಹೇಳಿದ ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ
ಮಡಿಕೇರಿ(ಮಾ.17): ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ಹಿತಾಸಕ್ತಿಯನ್ನು ಕಡೆಗಣಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ಸಮುದಾಯಗಳ ನಿಗಮಗಳಿಗೆ ಅನುದಾನ ನೀಡದೆ ಅವುಗಳ ಬಾಗಿಲು ಮುಚ್ಚುವ ವ್ಯವಸ್ಥಿತ ಸಂಚು ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿಗಳಿಂದಾಗಿ ಹಲವು ನಿಗಮಗಳ ಹಣ ದೊರಕುತ್ತಿಲ್ಲ. ಇದರಿಂದ ವಿವಿಧ ಸಮುದಾಯಗಳ ಬಡ ವಿದ್ಯಾರ್ಥಿಗಳ ಬದುಕನ್ನು ಕತ್ತಲಲ್ಲಿ ಇಟ್ಟಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಹಿಂದುಳಿದವರ ಮೇಲೆ ಇಟ್ಟಿರುವ ಡೋಂಗಿ ಮುಖವಾಡವನ್ನು ಕಳಚಬೇಕಿದೆ ಎಂದು ಹೇಳಿದರು.
undefined
ಮೈಸೂರು ಟಿಕೆಟ್ ಯದುವೀರ್ ಗೆ ಬಹುತೇಕ ಫಿಕ್ಸ್, ಕಾಂಗ್ರೆಸ್ ಗೆ ಲಾಭನಾ? ನಷ್ಟನಾ?
ನಮ್ಮ ಸರ್ಕಾರದ ಅವಧಿಯಲ್ಲಿ ದೇವರಾಜು ಅರಸು ಅಭಿವೃದ್ಧಿ ನಿಗಮಕ್ಕೆ ರು.190 ಕೋಟಿ ನೀಡಿದ್ದೇವೆ. ಮರಾಠ ಅಭಿವೃದ್ಧಿ ನಿಗಮಕ್ಕೆ ರು.100 ಕೋಟಿ ನೀಡಿದ್ದೇವೆ. ಆದರೆ ಸಿದ್ದರಾಮಯ್ಯ ಸರ್ಕಾರ ರು.50 ಕೋಟಿ ಮಾತ್ರ ನೀಡಿದೆ. ಹೀಗೆ ವಿವಿಧ ಸಮುದಾಯಗಳ ನಿಗಮಗಳಿಗೆ ಅರ್ಧ ಅನುದಾನ ಮಾತ್ರ ನೀಡುವ ಮೂಲಕ ಕಡೆಗಣಿಸುತ್ತಿದೆ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಸಾಮಾಜಿಕ, ಜಾಗತಿಕ ಹಾಗೂ ಔದ್ಯೋಗಿಕ ಯೋಜನೆ ನೀಡುವಲ್ಲಿ ಸಫಲರಾಗಿದ್ದಾರೆಂದು ತಿಳಿಸಿದರು.
ಈ ಬಾರಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಿಂದ ಯದುವೀರ್ ಅವರಿಗೆ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಈ ಸ್ಪರ್ಧೆ ಕೊಡಗು-ಮೈಸೂರಿಗೆ ಮಾತ್ರ ಸೀಮಿತವಾಗಿಲ್ಲ ಬದಲಾಗಿ ಏಳೆಂಟು ಕ್ಷೇತ್ರಗಳ ಮೇಲೆ ತಮ್ಮ ಪ್ರಭಾವ ಬೀರಲಿದೆ ಎಂದು ಹೇಳಿದರು.
ಮೈಸೂರು ರಾಜಮನೆತನ ರಾಮ ರಾಜ್ಯವನ್ನು ಮಾಡಿದವರು. ಶ್ರೀಕಂಠದತ್ತ ಅವರ ನಂತರ ಇದೀಗ ಯದುವೀರ್ ಅವರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅವರ ಬೆನ್ನಿಗೆ ನಾವು ನಿಂತು ಅವರನ್ನು ಗೆಲ್ಲಿಸುತ್ತೇವೆ ಎಂದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಂದೇ ಮೀಸಲಾತಿ ನೀಡಿದ್ದರು. ಇದೀಗ ಯದುವೀರ್ ಅವರು ನಮ್ಮ ಅಭ್ಯರ್ಥಿಯಾಗಿದ್ದು, ಎಲ್ಲ ಸಮುದಾಯವನ್ನು ಒಟ್ಟಾಗಿ ತೆಗೆದುಕೊಂಡು ಹೋಗಲಿದ್ದಾರೆ ಎಂದರು. ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ , ಕೊಡಗು ಘಟಕದ ಅಧ್ಯಕ್ಷ ಅಪ್ರು ರವೀಂದ್ರ, ಪ್ರಧಾನ ಕಾರ್ಯದರ್ಶಿ ವಿನೋದ್ ಪೂಜಾರಿ ಇದ್ದರು.