ಅಂಬೇಡ್ಕರ್‌ಗೆ ಕಾಂಗ್ರೆಸ್‌ನಿಂದ ಹೆಜ್ಜೆ ಹೆಜ್ಜೆಗೂ ಅವಮಾನ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Published : Apr 12, 2025, 08:26 AM ISTUpdated : Apr 12, 2025, 08:28 AM IST
ಅಂಬೇಡ್ಕರ್‌ಗೆ ಕಾಂಗ್ರೆಸ್‌ನಿಂದ ಹೆಜ್ಜೆ ಹೆಜ್ಜೆಗೂ ಅವಮಾನ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಸಾರಾಂಶ

ಕಾಂಗ್ರೆಸ್‌ ಪಕ್ಷ ಹೆಜ್ಜೆ ಹೆಜ್ಜೆಗೂ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರನ್ನು ಅವಮಾನಿಸುತ್ತಲೇ ಬಂದಿದೆ. ಅಂಬೇಡ್ಕರ್‌ ಗೆದ್ದಂತಹ ಹಿಂದೂ ಬಾಹುಳ್ಯದ ಕ್ಷೇತ್ರಗಳನ್ನೇ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಂತಹ ದುರುಳ ನೀತಿ ತೋರಿದವರು ಕಾಂಗ್ರೆಸ್ಸಿಗರು.  

ಬೆಂಗಳೂರು (ಏ.12): ಕಾಂಗ್ರೆಸ್‌ ಪಕ್ಷ ಹೆಜ್ಜೆ ಹೆಜ್ಜೆಗೂ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರನ್ನು ಅವಮಾನಿಸುತ್ತಲೇ ಬಂದಿದೆ. ಅಂಬೇಡ್ಕರ್‌ ಗೆದ್ದಂತಹ ಹಿಂದೂ ಬಾಹುಳ್ಯದ ಕ್ಷೇತ್ರಗಳನ್ನೇ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಂತಹ ದುರುಳ ನೀತಿ ತೋರಿದವರು ಕಾಂಗ್ರೆಸ್ಸಿಗರು. ಈಗ ದಲಿತರ ವೋಟ್‌ ಬ್ಯಾಂಕ್‌ಗಾಗಿ ಮೊಸಳೆ ಕಣ್ಣೀರಿಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. 

ಶುಕ್ರವಾರ ನಗರದಲ್ಲಿ ಬಿಜೆಪಿಯ ಭೀಮ ಹೆಜ್ಜೆ ರಥಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಅಂಬೇಡ್ಕರ್‌ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಲೆಂದೇ ಕಾಂಗ್ರೆಸ್‌ ಅಂದು ಅಂಬೇಡ್ಕರ್‌ ಗೆದ್ದಂತಹ ಜೈಸೂರು, ಕುಲ್ಲಾ, ಹರೀದ್ಪುರ ಪ್ರದೇಶಗಳ ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿತು ಎಂದು ಆರೋಪ ಮಾಡಿದರು. ದೇಶಕ್ಕೆ ಒಂದು ಸಂವಿಧಾನದ ಸುಭದ್ರ ಚೌಕಟ್ಟು ನಿರ್ಮಿಸಿಕೊಟ್ಟಂಥ ಮಹಾನ್‌ ನಾಯಕ ಅಂಬೇಡ್ಕರ್‌ ಅವರಿಗೆ ಕಾಂಗ್ರೆಸ್‌ ಪಕ್ಷ ಸ್ವತಂತ್ರ ಪೂರ್ವದಿಂದಲೂ ಮಹಾ ಅವಮಾನಗಳನ್ನೇ ಮಾಡುತ್ತಾ ಬಂದಿದೆ. 

ಗಾಂಧಿ, ನೆಹರು ಕಾಲದಿಂದ ಇಲ್ಲಿವರೆಗೂ ಇದು ಮುಂದುವರಿದೇ ಇದೆ. ಪ್ರಸ್ತುತದಲ್ಲಿ ಭೀಮ ಹೆಜ್ಜೆ ಶತಮಾನ ಸಂಭ್ರಮ ಆಚರಿಸದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಅವಗಣನೆಯೂ ಇದಕ್ಕೊಂದು ನಿದರ್ಶನ ಎಂದರು. ಮಹಾತ್ಮಗಾಂಧಿ ಅವರು ಬೆಳಗಾವಿಗೆ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸಿದ ಕಾಂಗ್ರೆಸ್‌ ಸರ್ಕಾರ, ಅದೇ ಬೆಳಗಾವಿಯ ನಿಪ್ಪಾಣಿಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸದೆ ಅವಮಾನ ಸಂಪ್ರದಾಯವನ್ನು ಮುಂದುವರೆಸಿದೆ ಎಂದು ಆರೋಪಿಸಿದರು.

ಮಂತ್ರಿಗಳ ಕೈಗೆ ಜಾತಿ ಲೆಕ್ಕ: ಬಹುನಿರೀಕ್ಷಿತ ಜಾತಿಗಣತಿ ವರದಿ ಕಡೆಗೂ ಸಚಿವ ಸಭೆಯಲ್ಲಿ ಮಂಡನೆ

ಮಹಾತ್ಮ ಗಾಂಧಿ ಅವರ ಶತಮಾನ ಸಂಭ್ರಮವೇ ಆಗಲಿ, ಅಂಬೇಡ್ಕರ್‌ ಅವರ ಭೀಮ ಹೆಜ್ಜೆ ಸಂಭ್ರಮವೇ ಆಗಲಿ ರಾಜ್ಯ ಸರ್ಕಾರ ಸರ್ವಪಕ್ಷಗಳ ಸಭೆ ಕರೆದು, ದಲಿತ ನಾಯಕರು ಮತ್ತು ದಲಿತ ಚಿಂತಕರನ್ನು ಕರೆದು ಚರ್ಚಿಸಿ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕಿತ್ತು. ಆದರೆ, ಸರ್ಕಾರ ಮಹಾತ್ಮಾ ಗಾಂಧಿ ಅವರ ಶತಮಾನ ಸಮಾರಂಭವನ್ನು ಪಕ್ಷದ ಒಂದು ಸಮಾವೇಶದ ರೀತಿ ಆಚರಿಸಿದರೆ, ಭೀಮ ಹೆಜ್ಜೆಯನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಸಚಿವ ಜೋಶಿ ಅಸಮಾಧಾನ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ