
ಕೊಪ್ಪಳ(ಏ.18): ಕಾಂಗ್ರೆಸ್ ಈಗಾಗಲೇ ದೇಶದಾದ್ಯಂತ ಬ್ರೇನ್ ಡೆಡ್ ಆದ ಪಾರ್ಟಿ. ಅದನ್ನು ಎಷ್ಟೇ ಮೇಲೆತ್ತಲು ಪ್ರಯತ್ನಪಟ್ಟರೂ ಆಗುವುದಿಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಟೀಕಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಮಲ್ಲಿಕಾರ್ಜುನ್ ಖರ್ಗೆ, ಪ್ರಿಯಾಂಕಾ ಗಾಂಧಿ, ಸೋನಿಯಾಗಾಂಧಿ ಸೇರಿದಂತೆ ಪ್ರಮುಖ ನಾಯಕರೇ ಸ್ಪರ್ಧೆ ಮಾಡುತ್ತಿಲ್ಲ. ಅವರಿಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎನ್ನುವಂತೆ ಆಗಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷವೇ ಸ್ವಚ್ಛವಾಗುತ್ತಿದ್ದು, ಬಿಜೆಪಿಯನ್ನೇನು ಸ್ವಚ್ಛ ಮಾಡುತ್ತಾರೆ ಎಂದು ಕಿಡಿಕಾರಿದರು.
ಪ್ರಧಾನಿ ಮೋದಿ, ಬಿಜೆಪಿ ಪರ ವ್ಯಾಪಕ ಅಲೆ: ಬಿಜೆಪಿ ಅಭ್ಯರ್ಥಿ ಶ್ರೀರಾಮುಲು
ಗಾಲಿ ಜನಾರ್ದನರೆಡ್ಡಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಪಕ್ಷ ನಮ್ಮಂತವರನ್ನು ಕಳೆದುಕೊಳ್ಳಬಾರದು ಎಂದೇ ಪಕ್ಷ ನಮಗೆ ಮತ್ತೆ ಮತ್ತೆ ಅವಕಾಶ ನೀಡುತ್ತಿದೆ. ಅವರು ಜೊತೆಯಲ್ಲಿ ಇರುವುದು ನಮಗೆ ಹೆಚ್ಚಿನ ಬಲಬಂದಿದೆ ಎಂದರು. ಸಂಸದ ಸಂಗಣ್ಣ ಕರಡಿ ದೊಡ್ಡ ಲೀಡರ್, ಅವರು ಯಾಕೆ ಬಿಜೆಪಿ ತೊರೆದಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.