ಕುಮಾರಸ್ವಾಮಿ ಅವರು ವಾಸ್ತವಾಂಶ ಮಾತನಾಡುತ್ತಾರೆ. ಎಲ್ಲವನ್ನು ಜನರ ಮುಂದೆ ತೆರೆದಿಡುವುದರಿಂದ ಕಾಂಗ್ರೆಸ್‌ಗೆ ಭಯ ಶುರುವಾಗಿದೆ. ಹೀಗಾಗಿ ಕುಮಾರಸ್ವಾಮಿ ಅವರ ವಿರುದ್ಧ ನಿತ್ಯ ದಾಖಲೆಗಳನ್ನು ಹುಡುಕುತ್ತಿದ್ದಾರೆ. ಅವರ ತೇಜೋವಧೆ ಮಾಡುವ ಪ್ರಯತ್ನಕ್ಕೆ ಇಡೀ ಸರ್ಕಾರ ಮುಂದಾಗಿದೆ ಎಂದು ಕಿಡಿಕಾರಿದ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು(ಸೆ.22): ಎಚ್.ಡಿ.ಕುಮಾರಸ್ವಾಮಿ ಅವರನ್ನು ಕಂಡರೆ ಕಾಂಗ್ರೆಸ್‌ಗೆ ಭಯ. ಹೀಗಾಗಿಯೇ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ವೈಯಕ್ತಿಕವಾಗಿ ಆರೋಪ ಮಾಡುತ್ತಿದೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಶನಿವಾರ ಪಕ್ಷದ ಕಚೇರಿಯಲ್ಲಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ವಾಸ್ತವಾಂಶ ಮಾತನಾಡುತ್ತಾರೆ. ಎಲ್ಲವನ್ನು ಜನರ ಮುಂದೆ ತೆರೆದಿಡುವುದರಿಂದ ಕಾಂಗ್ರೆಸ್‌ಗೆ ಭಯ ಶುರುವಾಗಿದೆ. ಹೀಗಾಗಿ ಕುಮಾರಸ್ವಾಮಿ ಅವರ ವಿರುದ್ಧ ನಿತ್ಯ ದಾಖಲೆಗಳನ್ನು ಹುಡುಕುತ್ತಿದ್ದಾರೆ. ಅವರ ತೇಜೋವಧೆ ಮಾಡುವ ಪ್ರಯತ್ನಕ್ಕೆ ಇಡೀ ಸರ್ಕಾರ ಮುಂದಾಗಿದೆ ಎಂದು ಕಿಡಿಕಾರಿದರು.
undefined
ನಾಗಮಂಗಲ ಗಲಭೆ ವಿಷಯದಲ್ಲಿ ಗುಪ್ತಚರ ಇಲಾಖೆ ವಿಫಲ: ನಿಖಿಲ್ ಕುಮಾರಸ್ವಾಮಿ
ಶಾಸಕ ಮುನಿರತ್ನ ಬಂಧನ ಪ್ರಕರಣದ ತನಿಖೆ ನಡೆಯುತ್ತಿದ್ದು, ಸತ್ಯಾಸತ್ಯತೆ ಹೊರಗೆ ಬರಲಿ. ಅವರ ಧ್ವನಿಯೋ? ಅಲ್ಲವೋ? ಎಂಬ ಸತ್ಯ ಹೊರಗೆ ಬರಬೇಕು. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ಮುನಿರತ್ನ ಬಂಧನ ಗಮನಿಸಿದರೆ, ರಾಜ್ಯ ಸರ್ಕಾರ ಟಾರ್ಗೆಟ್ ರಾಜಕೀಯ ಮಾಡುತ್ತಿದೆ ಎನ್ನಿಸುತ್ತಿದೆ. ದ್ವೇಷದ ರಾಜಕೀಯ ಮಾಡಿಕೊಂಡು ಹೊರಟಿರುವುದನ್ನು ರಾಜ್ಯದ ಜನರು ಮೆಚ್ಚುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.