* ಪಠ್ಯದಲ್ಲಿ ಭಗವದ್ಗೀತೆ ಸೇರಿಸೋದರಿಂದ ನಮಗೆ ಹೊಟ್ಟಿ ಉರಿ ಅಂತ ಹೇಳಿದೋರು ಯಾರು?
* ತಮಿಳುನಾಡು ರಾಜಕಾರಣ ಮಾಡುತ್ತಿದೆ
* ಧರ್ಮದಲ್ಲಿರುವ ಒಳ್ಳೆಯ ವಿಚಾರವನ್ನು ಮಕ್ಕಳಿಗೆ ಹೇಳಿಕೊಡಿ
ಕಲಬುರಗಿ(ಮಾ.23): ಶಾಲಾ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವುದರಿಂದ ನಮಗೆ (Congress) ಹೊಟ್ಟೆಉರಿಯುತ್ತದೆ ಎಂದು ಹೇಳಿದವರು ಯಾರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಪ್ರಶ್ನಿಸುವ ಮೂಲಕ ಬಿಜೆಪಿಗೆ(BJP) ಟಾಂಗ್ ನೀಡಿದ್ದಾರೆ.
ಕಲಬುರಗಿಯಲ್ಲಿ(Kalaburagi) ಮಾತನಾಡಿದ ಅವರು, ರಾಜೀವ್ ಗಾಂಧಿ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಇಡೀ ದೇಶಕ್ಕೆ ಚಿಕ್ಕಮಕ್ಕಳಿಂದ ಹಿರಿಯರವರೆಗೂ ಎಲ್ಲರಿಗೂ ವರ್ಷಾನುಗಟ್ಟಲೆ ರಾಮಾಯಣ, ಮಹಾಭಾರತವನ್ನು ತೋರಿಸಿ, ದೇಶದ ಸಂಸ್ಕೃತಿ, ಇತಿಹಾಸ, ಗ್ರಂಥ, ಪರಂಪರೆಯನ್ನು ಪರಿಚಯಿಸಿದ್ದರು ಎಂದರು.
Fuel Price Hike 'ಬೆಲೆ ಏರಿಕೆ ಮೂಲಕ ಬಿಜೆಪಿ ಸರ್ಕಾರ ಪಿಕ್ ಪಾಕೆಟ್'
ಕೆಂಗಲ್ ಹನುಮಂತಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 2 ರು.ಗೆ ಭಗವದ್ಗೀತೆ(Bhagavad Gita) ಪುಸ್ತಕವನ್ನು ಮನೆ ಮನೆಗೂ ಹಂಚಿದ್ದರು. ಇದೆಲ್ಲವನ್ನು ಮಾಡಿದ್ದು ನಾವು. ನಾವ್ಯಾಕೆ ಇದನ್ನು ವಿರೋಧಿಸೋಣ? ನನಗೆ ಭಗವದ್ಗೀತೆ ಶ್ಲೋಕ ಗೊತ್ತಿದೆ. ಅದನ್ನು ಬಿಜೆಪಿಯವರು ಬಂದು ಹೇಳಿಕೊಟ್ಟಿದ್ದಾರಾ? ನಾನು ಶಾಲೆಯಲ್ಲಿರುವಾಗಲೇ ಕಲಿತಿದ್ದೆ. ಈ ವಿಚಾರದ ಬಗ್ಗೆ ಬಿಜೆಪಿಯವರು ಸದನದಲ್ಲಿ ಚರ್ಚೆಗೆ ಬರಲಿ. ಅವರು ಶ್ಲೋಕ ಹೇಳಲಿ. ಹಿಂದುತ್ವ ಇವರ ಮನೆ ಆಸ್ತಿನಾ? ದೇಶದ ಜನರಿಗೆ ಈ ಗ್ರಂಥಗಳ ಪ್ರಚಾರ ಮೊದಲು ಆರಂಭಿಸಿದ್ದು ಕಾಂಗ್ರೆಸ್, ಆಮೇಲೆ ಇವರು ರಾಮ ಮಂದಿರ ಕಟ್ಟುತ್ತೇವೆ ಎಂದು ಮುಂದೆ ಬಂದರು ಎಂದರು.
ಧರ್ಮದಲ್ಲಿರುವ ಒಳ್ಳೆಯ ವಿಚಾರವನ್ನು ಮಕ್ಕಳಿಗೆ ಹೇಳಿಕೊಡಿ. ಕ್ರೈಸ್ತ, ಬೌದ್ಧ, ಜೈನ ಧರ್ಮಗಳಲ್ಲೂ ಉತ್ತಮ ವಿಚಾರಗಳಿವೆ. ಅವುಗಳನ್ನು ಹೇಳಿಕೊಡಿ. ಧರ್ಮ(Religion) ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ಕರ್ಮ ಹಲವಾದರೂ ನಿಷ್ಠೆ ಒಂದೇ, ದೇವನೊಬ್ಬ ನಾಮ ಹಲವು. ಇದಕ್ಕೆ ನಾವು ಒಪ್ಪಿಗೆ ಕೊಡುವುದೇನು? ಇದನ್ನು ಆರಂಭಿಸಿದ್ದೆ ನಾವು. ನಾವು ಮಾಡಿರುವುದನ್ನು ಅವರು ಕಾಪಿ ಮಾಡುತ್ತಿದ್ದಾರೆ. ಈಗಾಗಲೇ ಶ್ರೀಕೃಷ್ಣ ಸೇರಿದಂತೆ ಹಿಂದೂ ಧರ್ಮದ ಅಂಶಗಳು ಇಲ್ಲವೇ? ಭಗವದ್ಗೀತೆ ಪೂರ್ಣ ಪಟ್ಟಿಇಲ್ಲದಿದ್ದರೂ ಅಂಶಗಳು ಇಲ್ಲವೇ?’ ಎಂದರು.
ತಮಿಳುನಾಡು ರಾಜಕಾರಣ ಮಾಡುತ್ತಿದೆ:
ಅವರು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಆ ರಾಜ್ಯದ ನಿರ್ಧಾರದ ಬಗ್ಗೆ ಮಾತನಾಡುವುದಿಲ್ಲ. ಅದು ಅವರ ರಾಜಕೀಯ ಇಚ್ಛಾಶಕ್ತಿ. ಈ ಅಣೆಕಟ್ಟು ನಿರ್ಮಾಣ ವಿಚಾರವಾಗಿ ಯಾವುದೇ ಅಡ್ಡಿ ಇಲ್ಲ. ಈ ಯೋಜನೆ ಎರಡೂ ರಾಜ್ಯಗಳ ಹಿತ ಕಾಯಲಿದೆ. ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚಿನ ಲಾಭ ಇದ್ದು, ಬಿಜೆಪಿ ಸರ್ಕಾರ ಈ ಯೋಜನೆ ಮಾಡುವುದಾಗಿ ಮಾತು ಕೊಟ್ಟಿದ್ದು, ಅದಕ್ಕೆ ಬದ್ಧವಾಗಿರಲಿ.
ಸಿದ್ದು-ಡಿಕೆಶಿ ಶೀತಲ ಸಮರ: ಸಿಎಂ ಅಭ್ಯರ್ಥಿ ಘೋಷಣೆ ಈಗಿಲ್ಲ, ಇದು ಇತಿಹಾಸ ಎಂದ ಕಾಂಗ್ರೆಸ್ ನಾಯಕ
ತಮಿಳುನಾಡು(Tamil Nadu) ರೀತಿ ರಾಜ್ಯದಲ್ಲಿರುವ ಬಿಜೆಪಿ ಡಬಲ್ ಎಂಜಿನ್ ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸಬೇಕು. ಡಬಲ್ ಎಂಜಿನ್ ಸರ್ಕಾರಕ್ಕೆ ಬದ್ಧತೆ ಇರಬೇಕು. ಮೊನ್ನೆ ಸರ್ವಪಕ್ಷ ಸಭೆ ಆದಮೇಲೆ ಮುಖ್ಯಮಂತ್ರಿ ಏನು ಹೇಳಿದರು? ಇದು ನಮ್ಮ ಹಕ್ಕು, ಯಾವುದೇ ಅಡ್ಡಿಯಿಲ್ಲ. ಈ ವಿಚಾರವಾಗಿ ಕೇಂದ್ರ ಸಚಿವರು, ಪ್ರಧಾನಿಗಳ ಜತೆ ಮಾತನಾಡಿ, ಅನುಮತಿ ಪಡೆದು ಯೋಜನೆ ಆರಂಭಿಸುತ್ತೇವೆ. ಅದಕ್ಕಾಗಿ ಹಣ ಇಟ್ಟಿದ್ದೇವೆ, ಕೇಂದ್ರ ಒಪ್ಪಿಗೆ ಕೊಡಲಿಲ್ಲ ಎಂದರೆ ಸರ್ವಪಕ್ಷ
ನಿಯೋಗ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದು ನಿಜ ಅಲ್ಲವೇ?
ಈ ಯೋಜನೆಗೆ ರಾಜಕೀಯ ಇಚ್ಛಾಶಕ್ತಿ ಮುಖ್ಯ. ಡಬಲ್ ಎಂಜಿನ್ ಸರ್ಕಾರಕ್ಕೆ ಕರ್ನಾಟಕ ಬೇಕೋ, ತಮಿಳುನಾಡು ಬೇಕೋ, 25 ಜನ ಸಂಸದರು ಬೇಕೋ, ತಮಿಳುನಾಡಿನ ಬಿಜೆಪಿ ವಿಚಾರ ಬೇಕೋ ಅವರೇ ತೀರ್ಮಾನಿಸಲಿ. ಗೋವಾ ಬೇಕೋ, ಕರ್ನಾಟಕ ಬೇಕೋ ನಿರ್ಧಾರ ಮಾಡಲಿ’ ಎಂದು ಸವಾಲು ಹಾಕಿದರು.