ದೋಸ್ತಿ ಕೆಡವಿದ್ದು ಬಿಜೆಪಿ ಅಲ್ಲ, ಮುಚ್ಚಿಟ್ಟಿದ್ದ ಬೆಂಕಿ HDKಯಿಂದಲೇ ಬಹಿರಂಗ!

By Suvarna News  |  First Published Oct 1, 2020, 8:05 PM IST

ಉಪ ಚುನಾವಣೆಗೆ ಮತ್ತೆ ಮೈತ್ರಿ ವಿಚಾರ/ ಮೈತ್ರಿ ವಿಚಾರ ಪ್ರಸ್ತಾಪದ ಬಗ್ಗೆ ಮಾಜಿ ಸಿಎಂ ಹೆಚ್ಡಿಕೆ ಪ್ರಶ್ನೆ / ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್ನಿಂದ ಮುಂದಿಟ್ಟಿರುವುದಾದರೂ ಯಾರು...? / 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ/ ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ


ಬೆಂಗಳೂರು(ಅ. 01)  ಉಪಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಎಂಬ ವಿಚಾರಕ್ಕೆ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.  ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್ ನಿಂದ  ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ  ಎಂದು ಠಕ್ಕರ್ ನೀಡಿದ್ದಾರೆ.

ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಕಾಂಗ್ರೆಸ್ ವರ್ತನೆ  ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ ನೀಡುತ್ತಲೇ ಬಂದಿದೆ. 

Tap to resize

Latest Videos

'ಮುನಿ'ದ ರತ್ನ ಮತ್ತೆ ಕಾಂಗ್ರೆಸ್‌ಗೆ ಹೋಗ್ತಾರಾ? ಸುರೇಶ್ ಬಿಚ್ಚಿಟ್ಟ ಒಗಟು

ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ. ಮೈತ್ರಿ ಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್  ಎಂಬ ವಿಚಾರ ಯಾರೂ ಮುಂದಿಡುವುದೂ ಬೇಡ.  ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ 'ನಾಯಕ'ರು ಲಾಭ ಮಾಡಿಕೊಳ್ಳುವುದೂ ಬೇಡ ಎಂದು ಕಟುವಾಗಿಯೇ ಹೇಳಿದ್ದಾರೆ.

 

ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ.
1/3

— H D Kumaraswamy (@hd_kumaraswamy)
click me!