ಮಂಡ್ಯದಲ್ಲಿ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಕಾಂಗ್ರೆಸ್‌ ಸಿದ್ಧತೆ: ರಮ್ಯಾ ಹೆಸರು ಪರಾಮರ್ಶೆ

By Kannadaprabha News  |  First Published Apr 19, 2023, 8:01 AM IST

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿಯಿಂದ ಸುಮಲತಾ ಸ್ಪರ್ಧೆ ಕುರಿತು ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದಲೂ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಾಯಕರು ಸಿದ್ಧತೆ ನಡೆಸಿದ್ದಾರೆ. 


ಬೆಂಗಳೂರು (ಏ.19): ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿಯಿಂದ ಸುಮಲತಾ ಸ್ಪರ್ಧೆ ಕುರಿತು ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದಲೂ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಾಯಕರು ಸಿದ್ಧತೆ ನಡೆಸಿದ್ದಾರೆ. ಕುಮಾರಸ್ವಾಮಿ ಅವರು ಮಂಡ್ಯದಿಂದ ಕಣಕ್ಕೆ ಇಳಿದರೆ, ಮಾಜಿ ಸಂಸದೆ ರಮ್ಯಾ, ಮಾಜಿ ಸಚಿವ ಎನ್‌. ಚೆಲುವರಾಯಸ್ವಾಮಿ ಅಥವಾ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಈ ಮೂವರಲ್ಲಿ ಒಬ್ಬರನ್ನು ಕಣಕ್ಕಿಳಿಸಲು ಪರಿಶೀಲನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಕಾಂಗ್ರೆಸ್‌ ಪಕ್ಷವು ಕಳೆದ ಬಾರಿ ಅಭ್ಯರ್ಥಿಯಾಗಿದ್ದ ಪಿ. ರವಿ ಕುಮಾರ್‌ ಅವರಿಗೆ ಟಿಕೆಟ್‌ ಘೋಷಣೆ ಮಾಡಿದೆ. ಆದರೆ, ಬಿಜೆಪಿ ಹಾಗೂ ಜೆಡಿಎಸ್‌ ಸ್ಟಾರ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದಲೂ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚರ್ಚೆ ನಡೆದಿದೆ. ಇದರ ಭಾಗವಾಗಿ ಈಗಾಗಲೇ ಮಾಜಿ ಸಂಸದೆ ರಮ್ಯಾ (ದಿವ್ಯಾ ಸ್ಪಂದನ) ವರನ್ನು ಸಂಪರ್ಕ ಮಾಡಿದ್ದು ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮನವೊಲಿಸಲು ಯತ್ನಿಸಿದ್ದಾರೆ. ಆದರೆ ರಮ್ಯಾ ಕಾಲಾವಕಾಶ ಕೇಳಿದ್ದು ಸ್ಪರ್ಧೆ ಬಗ್ಗೆ ಯಾವುದೇ ನಿಧಾರವನ್ನು ಸ್ಪಷ್ಟಪಡಿಸಿಲ್ಲ ಎಂದು ತಿಳಿದುಬಂದಿದೆ.

Tap to resize

Latest Videos

ಕಾಂಗ್ರೆಸ್‌ ಭ್ರಷ್ಟಚಾರ ಜನರ ಮುಂದೆ ಪ್ರಸ್ತಾಪ: ಸಿ.ಟಿ.ರವಿ

ಇನ್ನು ರಮ್ಯಾ ಅವರು ಸ್ಪರ್ಧೆಗೆ ಆಸಕ್ತಿ ತೋರದಿದ್ದರೆ ಚೆಲುವರಾಯಿ ಸ್ವಾಮಿ ಅವರ ಹೆಸರು ಪರಿಗಣಿಸಬಹುದು. ಇದಾಗದ ಪಕ್ಷದಲ್ಲಿ ವಿಧಾನಪರಿಷತ್‌ ಸದಸ್ಯ ದಿನೇಶ್‌ಗೂಳಿಗೌಡ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಕಾಂಗ್ರೆಸ್‌ ಕಾರ್ಯಕರ್ತರ ಪಡೆ ಬಲಿಷ್ಟವಾಗಿದೆ: ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಟಿ.ಡಿ.ರಾಜೇಗೌಡ ಮಂಗಳವಾರ ಚುನಾವಣಾಧಿಕಾರಿ ಟಿ.ಆರ್‌.ವೇದಮೂರ್ತಿ, ಹಾಗೂ ಸಹಾಯಕ ಚುನಾವಣಾಧಿಕಾರಿ ವಿಮಲ ಸುಪ್ರಿಯಾಯವರಲ್ಲಿ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಕ್ಷೇತ್ರದ ವಿವಿಧೆಡೆಗಳಿಂದ ಸಾವಿರಾರು ಯುವ ಕಾಂಗ್ರೆಸ್‌ ಕಾರ್ಯಕರ್ತರು ಬೈಕ್‌ ರಾರ‍ಯಲಿ ಮೂಲಕ ಶಕ್ತಿ ಪ್ರದರ್ಶನ ನಡೆಸಿದರು. ಕೊಪ್ಪ ಕೋಪದ ವೀರಭದ್ರ ಸ್ವಾಮಿ ದೇವಸ್ಥಾನದ ಬಳಿಯಿಂದ ಹೊರಟ ಬೈಕ್‌ ರಾರ‍ಯಲಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಾಗಿ ಲಾಲ್‌ ಬಹದ್ದೂರ್‌ ಶಾಸ್ತಿ್ರೕ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಕಾಂಗ್ರೆಸ್‌ ಯುವ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡರು.

ರಾಜ್ಯ ಮುಖಂಡ ಬಿ.ಕೆ.ಹರಿಪ್ರಸಾದ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, 2018ರ ಚುನಾವಣೆಯಲ್ಲಿ ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ಶೃಂಗೇರಿ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ನ ಏಕೈಕ ಶಾಸಕರಾಗಿ ಅಯ್ಕೆಯಾದ ಟಿ.ಡಿ.ರಾಜೇಗೌಡ ಅತಿವೃಷ್ಠಿ, ಕೊರೋನ ಸಂಕಷ್ಟಸಮಯದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಮೀಸಲಾತಿ ವಿಚಾರದಲ್ಲಿ ಜನರಿಗೆ ಲಾಲಿಪಾಪ್‌ ನೀಡಿದ ಬಿಜೆಪಿ ಸರ್ಕಾರ: ಗೌರವ್‌ ವಲ್ಲಭ್‌

ಜೆಡಿಎಸ್‌ ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಪತನವಾದ ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಷೇತ್ರ ಬಿಜೆಪಿಗರ ಅಭಿವೃದ್ಧಿಯಲ್ಲಿ ಅಡ್ಡಗಾಲು, ಅಪಪ್ರಚಾರದ ನಡುವೆಯೂ ಸಾಕಷ್ಟುಅನುದಾನಗಳನ್ನು ತಂದು ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡು ಸಜ್ಜನಿಕೆಯ ರಾಜಕಾರಣದಿಂದಲೇ ಜನಪ್ರಿಯರಾಗಿದ್ದಾರೆ. ಈ ಬಾರಿ ರಾಜ್ಯದೆಲ್ಲೆಡೆ ಕಾಂಗ್ರೆಸ್‌ ಅಲೆ ಇದ್ದು ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಪಡೆ ಬಲಿಷ್ಟವಾಗಿದ್ದು, ಹೆಚ್ಚಿನ ಮತಗಳ ಅಂತರದಿಂದ ಕಾಂಗ್ರೆಸ್‌ ಈ ಬಾರಿ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

click me!