ಸಿದ್ದು ನಾಯಕತ್ವದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಸನ್ನದ್ಧ: ಸಚಿವ ಸತೀಶ್‌ ಜಾರಕಿಹೊಳಿ

Published : Feb 08, 2024, 08:45 AM IST
ಸಿದ್ದು ನಾಯಕತ್ವದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಸನ್ನದ್ಧ: ಸಚಿವ ಸತೀಶ್‌ ಜಾರಕಿಹೊಳಿ

ಸಾರಾಂಶ

ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್‌ ಸನ್ನದ್ಧಗೊಂಡಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬೆಳಗಾವಿ (ಫೆ.08): ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್‌ ಸನ್ನದ್ಧಗೊಂಡಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಇನ್ನೇನು ಬಹಳ ಹತ್ತಿರದಲ್ಲಿದೆ. ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ. ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿ. ಕಾರ್ಯಕರ್ತರ ಮೇಲೆ ಬಹುದೊಡ್ಡ ಜವಾಬ್ದಾರಿಯಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರ ಜೊತೆಗೆ ಎಲ್ಲ ಮುಖಂಡರು ಚುನಾವಣೆಗೆ ಸಿದ್ಧರಾಗಬೇಕು ಎಂದು ಕರೆ ನೀಡಿದರು.

ಚುನಾವಣೆ ಮಾಡುವುದು ನಮಗೆ ಹೊಸ ವಿಚಾರವಲ್ಲ. ಹಲವಾರು ಚುನಾವಣೆಯನ್ನು ನಾವು ಎದುರಿಸುತ್ತಿದ್ದೇವೆ. ಎಲ್ಲರೂ ಸಂಘಟಿತರಾಗಿ ಕೆಲಸ ಮಾಡಬೇಕು. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದಂತೆ ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಇಡೀ ರಾಜ್ಯದ ಜನತೆ ನಮ್ಮ ಜೊತೆಗಿದ್ದಾರೆ. ಆದರೂ ನಾವು ಲೋಕಸಭೆ ಚುನಾವಣೆಯಲ್ಲಿ ಕಠಿಣ ಶ್ರಮವಹಿಸಬೇಕಿದೆ. ಪಕ್ಷದ ಶಾಸಕರು ಕೂಡ ಪಕ್ಷದ ಕಾರ್ಯಕರ್ತನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ನಾನೂ ಟಿಕೆಟ್‌ ಆಕಾಂಕ್ಷಿ: ಎಚ್‌.ವಿಶ್ವನಾಥ್‌

ಗ್ಯಾರಂಟಿ ಯೋಜನೆಗಳು ಯಾರಿಗೆ ತಲುಪಿಲ್ಲವೋ ಅಂತಹವರನ್ನು ಗುರುತಿಸಿ, ಅವರಿಗೆ ಯೋಜನೆ ತಲುಪುವಂತೆ ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು. ಲೋಕಸಭಾ ಚುನಾವಣೆ ಮಹತ್ವದ ಚುನಾವಣೆಯಾಗಿದೆ. ಎದುರಾಳಿಗಳು ನಮ್ಮ ಕಾರ್ಯಕರ್ತರನ್ನು ಸೆಳೆಯುವಂತಹ ಪ್ರಯತ್ನ ಮಾಡುತ್ತಾರೆ. ಆದರೆ, ಪಕ್ಷವನ್ನು ಅಧಿಕಾರಕ್ಕೆ ತಂದು ದೊಡ್ಡ ಶಕ್ತಿ ತುಂಬಿದ್ದಿರಿ. ಎದುರಾಳಿಗಳನ್ನು ನಮ್ಮತ್ತ ಸೆಳೆಯುವ ಕಾರ್ಯದಲ್ಲಿ ತೊಡಗಬೇಕು ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ನಾಯಕತ್ವದಲ್ಲಿ ನಾವು ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಹಾಗಾಗಿ, ಮುಖಂಡರು ನಮ್ಮಲ್ಲಿ ಏನೇ ಭಿನ್ನಾಭಿಪ್ರಾಯ ಇದ್ದರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ವ್ಯಕ್ತಿಗಿಂತ ಪಕ್ಷ ದೊಡ್ಡದು. ಬರುವ ದಿನಗಳಲ್ಲಿ ಪಕ್ಷಕ್ಕಾಗಿ ದುಡಿದವರಿಗೆ ಒಳ್ಳೆಯ ಅವಕಾಶಗಳು ಬಂದೇ ಬರುತ್ತವೆ. ಕೇಂದ್ರದ ವರಿಷ್ಠರು ನನ್ನ ಮೇಲೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಈ ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕಿದೆ. ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ. ಜಿಲ್ಲೆಯ ಎರಡೂ ಲೋಕಸಭಾ ಚುನಾವಣೆ ಎದುರಾಗಲಿದೆ.

ಸಮಾಜದಲ್ಲಿ ಮೇಲು- ಕೀಳೆಂಬ ಭಾವನೆ ಇನ್ನೂ ದೂರಾಗಿಲ್ಲ: ಸಿದ್ದರಾಮಯ್ಯ ವಿಷಾದ

ಕಾರ್ಯಕರ್ತರು ಕಾರ್ಯಪ್ರವೃತ್ತರಾಗಿ ಹೆಚ್ಚಿನ ಬಲ ತುಂಬಬೇಕು. ಭೂತ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂದು ಕರೆ ನೀಡಿದರು. ಎಐಸಿಸಿ ಕಾರ್ಯದರ್ಶಿ ರೋಜ ಖಾನ್‌, ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ.ಮೋಹನ, ಮಾಜಿ ಸಚಿವ ವೀರಕುಮಾರ ಪಾಟೀಲ, ಕೆಪಿಸಿಸಿ ವಕ್ತಾರ ಅಬ್ದುಲ ಮುನೀರ್‌, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಮೀಟಿ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಲಕ್ಷ್ಮಣ ಚಿಂಗಳೆ ಮೊದಲಾದವರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ