
ಕುದೂರು(ರಾಮನಗರ) (ನ.3) ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಉದ್ರಿಕ್ತ ಗುಂಪೊಂದು ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಮತ್ತು ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಅವರ ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಕಾಮಸಾಗರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಬಾಲಕೃಷ್ಣ ಅವರು ಕಟ್ಟಡ ಉದ್ಘಾಟನೆಗಾಗಿ ಆಗಮಿಸಿದ್ದರು. ಶಾಸಕ ಎ.ಮಂಜುನಾಥ್ ಕೋರ್ಚ್ ಕೆಲಸದ ಕಾರಣ ಬರಲು ತಡವಾಗಿದ್ದು, ಅಷ್ಟರಲ್ಲಿ ಬಮೂಲ… ಅಧ್ಯಕ್ಷ ನರಸಿಂಹಮೂರ್ತಿ ನಮಗೆ ಬೇರೆ ಕೆಲಸವಿದೆ ಎಂದು ನೂತನ ಕಟ್ಟಡದ ಉದ್ಘಾಟನೆಗೆ ಟೇಪ್ ಕತ್ತರಿಸಲು ಮಾಜಿ ಶಾಸಕರೊಂದಿಗೆ ಹೋದಾಗ ಜೆಡಿಎಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಟೇಪ್ ಕಿತ್ತುಹಾಕಿದ್ದಾರೆ. ಇದರಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ವಾಗ್ವಾದಕ್ಕಿಳಿದಿದ್ದಾರೆ. ಈ ವೇಳೆ ಕೆಲ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಆಗ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ಶಾಂತಗೊಳಿಸಿದರು.
ನಂತರ ಬಾಲಕೃಷ್ಣ ವೇದಿಕೆ ಕಾರ್ಯಕ್ರಮ ಮುಗಿಸಿ ಹೊರ ನಡೆದರು. ಆಗ ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಬಾಲಕೃಷ್ಣ ಮತ್ತು ನರಸಿಂಹಮೂರ್ತಿ ಅವರಿದ್ದ ಕಾರುಗಳತ್ತ ಕಲ್ಲು ತೂರಿದರು. ಕಲ್ಲು ತೂರಾಟದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ.
ಮತ್ತೊಮ್ಮೆ ಉದ್ಘಾಟನೆ: ಇದಾದ ಬಳಿಕ ಆಗಮಿಸಿದ ಶಾಸಕ ಎ.ಮಂಜುನಾಥ್ ಮತ್ತೊಮ್ಮೆ ಡೇರಿಯ ಟೇಪ್ ಕತ್ತರಿಸಿ ಉದ್ಘಾಟನೆ ಮಾಡಿ ಪಕ್ಕದಲ್ಲೇ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳಿದರು.
ರಾಜ್ಯದ ಸಮಗ್ರ ಅಭಿವೃದ್ಧಿಯೇ ‘ಪಂಚರತ್ನ’ ಗುರಿ: ಎಚ್.ಡಿ.ಕುಮಾರಸ್ವಾಮಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.