
ಪುದುಚೇರಿ (ಆ.22) : ಪುದುಚೇರಿ ಕಾಂಗ್ರೆಸ್ ನಲ್ಲಿ ಭಿನ್ನಮತ.ಸ್ಫೋಟ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಆಗ್ರಹಿಸಿ ಧರಣಿ. ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ. ಕೆಪಿಸಿಸಿ ಮಾಜಿ ಅಧ್ಯಕ್ಷ, ಪುದುಚೇರಿ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ದಾಳಿ ಮಾಡಿರುವ ಘಟನೆ ಪುದುಚೇರಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ.ಪುದುಚೇರಿ ಕಾಂಗ್ರೆಸ್ ಉಸ್ತುವಾರಿ ಆಗಿರುವ ದಿನೇಶ್ ಗುಂಡೂರಾವ್ ಅವರು, ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಭೆಗೆ ಹೋಗಿದ್ದರು. ಸಭೆ ಮುಗಿಸಿ ಹೊರ ಬರುವ ವೇಳೆ ಕಾಂಗ್ರೆಸ್ ಪಕ್ಷದ ಒಂದು ಬಣ ದಿನೇಶ್ ಗುಂಡೂರಾವ್ ಅವರನ್ನು ಕಾರು ಹತ್ತದಂತೆ ತಡೆದು ಗಲಾಟೆ ನಡೆಸಿದೆ. ದಿನೇಶ್ ಗುಂಡೂರಾವ್ ಅವರನ್ನು ಕಾರು ಹತ್ತಲು ಬಿಡದಂತೆ ತಳ್ಳಾಡಿದ್ದಾರೆ.. ಈ ವೇಳೆ ದಿನೇಶ್ ಗುಂಡೂರಾವ್ ಅವರ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾನಿ ಮಾಡಿದ್ದಾರೆ.
ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್‌ಗೆ ಬಹಿರಂಗ ಎಚ್ಚರಿಕೆ
ಮಾಜಿ ಸಚಿವರೊಬ್ಬನ್ನು ಬೆಂಬಲಿಸುವ ಬಣ ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಘೋಷಣೆ ಕೂಗುತ್ತಿದ್ದರು. ಮಾಜಿ ಸಿಎಂ ನಾರಾಯಣಸ್ವಾಮಿ ಅವರ ಬೆಂಬಲಿಗರು ಕೂಡ ಅಲ್ಲಿ ಜಮಾಯಿಸಿದ್ದರಿಂದ ಎರಡು ಗುಂಪುಗಳ ನಡುವೆ ಶುರುವಾದ ವಾಗ್ವಾದ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಇದೇ ವೇಳೆ ದಿನೇಶ್ ಗುಂಡೂರಾವ್ ಸಭೆ ಮುಗಿಸಿ ಹೊರಬರುತ್ತಿದ್ದಂತೆ ಅವರು ಸುತ್ತುವರಿದ ಕಾರ್ಯಕರ್ತರು, ನಾಯಕತ್ವ ಬದಲಾವಣೆ ಕುರಿತು ಉತ್ತರ ನೀಡುವಂತೆ ಒತ್ತಾಯಿಸಿದ್ದಾರೆ. ಈ ಸಂದರ್ಭ ಗುಂಡೂರಾವ್ ಅವರನ್ನು ಕಾರು ಹತ್ತಲೂ ಬಿಡದೆ ತಡೆದು ಕಾರಿಗೂ ಹಾನಿಮಾಡಿದ್ದಾರೆ.
ಈ ಘಟನೆ ಬಳಿಕ ಪುದುಚೇರಿ ಕಾಂಗ್ರೆಸ್ ಕ್ರಮ ತೆಗೆದುಕೊಂಡಿದ್ದು, ಘಟನೆಗೆ ಕಾರಣರಾದ ಐವರು ಕಾಂಗ್ರೆಸ್ ಕಾರ್ಯಕರ್ತರನ್ನು ಅಮಾನತುಗೊಳಿ ಪುದುಚೇರಿ ಕಾಂಗ್ರೆಸ್ ಅಧ್ಯಕ್ಷ ಸುಬ್ರಮಣಿಯನ್ ಆದೇಶ ಹೊರಡಿಸಿದ್ದಾರೆ
ಪುದುಚೇರಿ ಕಾಂಗ್ರೆಸ್ ಸಭೆಯಲ್ಲಿ ಭಿನ್ನಮತ ಸ್ಫೋಟ; ಮಾಜಿ ಸಿಎಂ, ದಿಗ್ವಿಜಯ್ ಸಿಂಗ್ ಎದುರೇ ಜಟಾಪಟಿ !
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.