Santosh Suicide Case: ಬಿಜೆಪಿ ಸರ್ಕಾರ ಸಾವಿನ ಮನೆಯಲ್ಲಿಯೂ ರಾಜಕಾರಣ ಮಾಡ್ತಿದೆ: ರಾಯರೆಡ್ಡಿ

By Girish GoudarFirst Published Apr 15, 2022, 8:32 AM IST
Highlights

*  ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮಾನ, ಮರ್ಯಾದೆ ಇಲ್ಲ
*  ಸಂತೋಷ ಪಾಟೀಲ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿ ನಡೆಸಿದ್ದಾರೆ
*  ಸಂತೋಷ ಪಾಟೀಲ ಆತ್ಮಹತ್ಯೆಗೆ ಈಶ್ವರಪ್ಪ ಕಾರಣ: ರಾಯರೆಡ್ಡಿ

ಯಲಬುರ್ಗಾ(ಏ.14):  ಸಚಿವ ಈಶ್ವರಪ್ಪ ಅವರ ಶೇ. 40 ಕಮಿಷನ್‌ ದಂಧೆಯಿಂದ ನೊಂದು ಸಂತೋಷ ಪಾಟೀಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಕೆ.ಎಸ್‌. ಈಶ್ವರಪ್ಪ(KS Eshwarappa) ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ(Basavaraj Rayareddy) ಆಗ್ರಹಿಸಿದರು.

ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪಟ್ಟಣದಲ್ಲಿ ಗುರುವಾರ ಬ್ಲಾಕ್‌ ಕಾಂಗ್ರೆಸ್‌(Congress) ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮಾನ, ಮರ್ಯಾದೆ ಇಲ್ಲವಾಗಿದೆ. ಗುತ್ತಿಗೆದಾರ ಸಂತೋಷ ಪಾಟೀಲ(Santosh Patil) ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಗಳನ್ನು ನಡೆಸಿದ್ದಾರೆ. ಬಿಜೆಪಿ ಸರ್ಕಾರ(BJP Government) ಸಾವಿನ ಮನೆಯಲ್ಲಿಯೂ ರಾಜಕಾರಣ(Politics) ಮಾಡುತ್ತಿದೆ ಎಂದು ಆರೋಪಿಸಿದರು.

Latest Videos

ಗ್ರಾಮೀಣಾಭಿವೃದ್ಧಿ ಇಲಾಖೆಯ ಹಗರಣದ ತನಿಖೆ ಆಗಲಿ: ಆಪ್‌

ಸಂತೋಷ ಕುಟುಂಬಕ್ಕೆ 1 ಕೋಟಿ ಪರಿಹಾರ ಹಾಗೂ ಕಾಮಗಾರಿ ನಿರ್ವಹಿಸಿದ 4 ಕೋಟಿಯನ್ನು ನೀಡಬೇಕು. ಸಚಿವ ಈಶ್ವರಪ್ಪ ಅವರನ್ನು ಬಂಧಿಸಿ(Arrest) ಕಾನೂನು ಕ್ರಮ ಕೈಗೊಳ್ಳವವರೆಗೊ ಕಾಂಗ್ರೆಸ್‌ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.

ಬಳಿಕ ತಹಸೀಲ್ದಾರ್‌ ಶ್ರೀಶೈಲ ತಳವಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ನಾರಾಯಣಪ್ಪ ಹರಪ್ಪನಹಳ್ಳಿ, ಹನುಮಂತಗೌಡ ಚೆಂಡೂರು, ರಾಮಣ್ಣ ಸಾಲಭಾವಿ, ಸಂಗಣ್ಣ ಟೆಂಗಿನಕಾಯಿ, ಮಂಜುನಾಥ ಕಡೇಮನಿ, ಬಸವರಾಜ ಚಿತ್ತರಗಿ, ಶರಣಪ್ಪ ಉಪ್ಪಾರ, ಈರಣ್ಣ ಹಳ್ಳಿಕೇರಿ, ರೇವಣೆಪ್ಪ ಸಂಗಟಿ, ಎಂ.ಎಫ್‌. ನಧಾಪ, ರೇವಣೆಪ್ಪ ಹಿರೇಕುರಬರ, ಡಾ. ಶಿವನಗೌಡ ದಾನರಡ್ಡಿ, ಈಶ್ವರ ಅಟಮಾಳಗಿ, ಹನುಮಂತಪ್ಪ ಹನುಮಾಪುರ, ಹಂಪಯ್ಯಸ್ವಾಮಿ, ಸುರ್ದೀರ ಕೊರ್ಲಳ್ಳಿ, ಆನಂದ ಉಳ್ಳಾಗಡ್ಡಿ, ಶರಣಪ್ಪ ಗಾಂಜಿ, ಮಲ್ಲು ಜಕ್ಕಲಿ, ಡಾ. ನಂದಿತಾ ದಾನರಡ್ಡಿ, ಎಸ್‌. ಗೊಲ್ಲರ್‌, ಗಿರಿಜಾ ಸಂಗಟಿ, ಡಾ. ನಂದಿತಾ ದಾನರಡ್ಡಿ, ಅಲ್ಲಾಸಾಬ ದಮ್ಮೂರ, ಸಿದ್ದಪ್ಪ ಕಟ್ಟಿಮನಿ, ಸುರೇಶ ದಾನಕೈ, ಬಸವರಾಜ ಇಳಗೇರ, ರೈಮಾನಸಾಬ ನಾಯಕ, ಖಾಜಾವಲಿ ಗಡಾದ ಪುನೀತ ಕೊಪ್ಪಳ ಇದ್ದರು.

ಕೊನೆಗೂ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ, ಬಿಜೆಪಿ ಸರ್ಕಾರದ 2ನೇ ವಿಕೆಟ್ ಪತನ

ಶಿವಮೊಗ್ಗ: ಗುತ್ತೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ. ಇಂದು(ಗುರುವಾರ) ಸಂಜೆ ಶಿವಮೊಗ್ಗದಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಸ್ಥಾನಕ್ಕೆ  ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದರು. ಇದು ಬಿಜೆಪಿ ಸರ್ಕಾರದ ಎರಡನೇ ವಿಕೆಟ್ ತನವಾದಂತಾಗಿದೆ. ಈಗಾಗಲೇ ರಾಸಲೀಲೆ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಆ ಬಗ್ಗೆ ತನಿಖೆಯಿಂದ ಎಲ್ಲಾ ಸತ್ಯಾಸತ್ಯತೆ ತಿಳಿದು ಬರಲಿದೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದೇನೆ. ತನಿಖೆಯಿಂದ ನಾನು ನಿರ್ದೋಷಿ ಎಂಬುದಾಗಿ ಹೊರಬರಲಿದೆ. ನನಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ನಾನು ನಾಳೆ ಸಂಜೆ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸೋದಾಗಿ ಘೋಷಿಸಿದರು. 

ಈಶ್ವರಪ್ಪ ರಾಜೀನಾಮೆ ಹಿಂದಿದೆಯಾ ಮತ್ತೊಂದು ಕಹಾನಿ?

ಇಂದು(ಶುಕ್ರವಾರ) ಸಿಎಂಗೆ ರಾಜೀನಾಮೆ ಪತ್ರವನ್ನು ಸಲ್ಲಿಸುತ್ತೇನೆ. ಈ ಕುರಿತು ನಾನು ಸಿಎಂ ಜೊತೆಗೂ ಚರ್ಚೆ ಮಾಡಿದ್ದೇನೆ. ಸಿಎಂ ಹಾಗೂ ಎಲ್ಲ ಸ್ನೇಹಿತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಎಲ್ಲವನ್ನೂ ಎದುರಿಸಿ ಮುಕ್ತವಾಗಿ ಹೊರಬರುತ್ತೇನೆ. ಪಕ್ಷಕ್ಕೆ ಮುಜುಗರವಾಗಬಾರದೆಂದು ರಾಜೀನಾಮೆ ನಿರ್ಧಾರ ಮಾಡಿದ್ದೇನೆ. ನಾಳೆ ಸಂಜೆ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತೇನೆ. ರಾಜೀನಾಮೆ ನೀಡುವ ಬಗ್ಗೆ 3-4 ದಿನದ ಹಿಂದೆ ನಿರ್ಧರಿಸಿದ್ದೆ ಎಂದು ಹೇಳಿದರು.

ಬುಧವಾರ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದ್ದರು. ಬೆಳಗ್ಗೆಯಿಂದ ಈಶ್ವರಪ್ಪ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. 3 ದಿನ ಮಾಧ್ಯಮಗಳ ಜೊತೆ ಮಾತನಾಡಲ್ಲವೆಂದಿದ್ದರು. ಗುರುವಾರ ಸುದ್ದಿಗೋಷ್ಠಿ ಕರೆದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಈಶ್ವರಪ್ಪ ಘೋಷಣೆ ಮಾಡಿದ್ದಾರೆ.
 

click me!