
ಶಿವಮೊಗ್ಗ (ಫೆ.26): ಬಿ.ಎಸ್.ಯಡಿಯೂರಪ್ಪ ಅಭಿವೃದ್ಧಿಯ ಹರಿಕಾರ ಎಂಬುದರಲ್ಲಿ ಎರಡು ಮಾತಿಲ್ಲ. ರಾಜಕಾರಣಕ್ಕೆ ಬಂದಾಗ ಪರಸ್ಪರ ಟೀಕೆಗಳು ಅನಿವಾರ್ಯ. ಅದನ್ನು ಹೊರತುಪಡಿಸಿ ಅವರ ಬಗ್ಗೆ ನನಗೆ ಪ್ರೀತಿ ಇದೆ. ಬಿಜೆಪಿಯವರು ಯಡಿಯೂರಪ್ಪನವರನ್ನು ಅಧಿಕಾರದಿಂದಿಳಿಸಲು ಕಣ್ಣೀರು ತರಿಸಿದ್ದಕ್ಕಾಗಿ ನೋವೂ ಇದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ವಿರುದ್ಧ ಕತ್ತಿ ಮಸೆಯುವ ಒಂದು ತಂಡವೇ ಇದೆ. ಇವರು ಅಮಿತ್ ಶಾ ಮೆಚ್ಚಿಸಲು ಅವರನ್ನು ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರಿಗೆ ಹೋಲಿಸುತ್ತಾರೆ.
ಇದು ಎಲ್ಲಿಯ ಹೋಲಿಕೆ? ಈ ಈಶ್ವರಪ್ಪ ಒಬ್ಬ ಮಹಿಷಾಸುರ ಇದ್ದಂತೆ ಎಂದು ಹರಿಹಾಯ್ದರು. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಹರಸಾಹಸ ಪಡುತ್ತಿದ್ದಾರೆ. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕಳುಹಿಸಿ ಎಂದು ಪ್ರಾಂಶುಪಾಲರಿಗೆ ಹೇಳುತ್ತಿದ್ದಾರೆ. ಈ ರೀತಿ ಪರಿಸ್ಥಿತಿ ಬಿಜೆಪಿಗೆ ಬರಬಾರದಿತ್ತು ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯವಾಡಿದರು.
ವಿಧಾನಸೌಧದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಪ್ರತಿಮೆ ಅನಾವರಣ
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಏರ್ಪೋರ್ಚ್ ಉದ್ಘಾಟನಾ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಎಲ್ಲ ಕಾಲೇಜುಗಳಿಗೆ ಹೋಗಿ ಪ್ರಾಂಶುಪಾಲರ ಬಳಿ ಪ್ರಧಾನಿ ಬರುತ್ತಿದ್ದಾರೆ, ಶಾಲೆಯ ಬಾಗಿಲು ಮುಚ್ಚಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕಳುಹಿಸಿ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಕೆ.ಎಸ್. ಈಶ್ವರಪ್ಪ ಒಬ್ಬ ಮಹಿಷಾಸುರ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಬ್ಬ ಉತ್ತಮ ಆಡಳಿತಗಾರ. ಬಿ.ಎಸ್. ಯಡಿಯೂರಪ್ಪ ಅಭಿವೃದ್ಧಿಯ ಹರಿಕಾರ ಎಂಬುದರಲ್ಲಿ ಎರಡು ಮಾತಿಲ್ಲ. ರಾಜಕಾರಣಕ್ಕೆ ಬಂದಾಗ ಪರಸ್ಪರ ಟೀಕೆಗಳು ಅನಿವಾರ್ಯ ಆಗಿರುತ್ತವೆ. ಅದನ್ನು ಹೊರತುಪಡಿಸಿದರೆ ಯಡಿಯೂರಪ್ಪ ಅವರ ಬಗ್ಗೆ ನನಗೆ ಪ್ರೀತಿ ಇದೆ. ಆದರೆ, ಬಿಜೆಪಿಯವರು ಇದೇ ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸಿ ಕಣ್ಣೀರು ತರಿಸಿದ್ದಕ್ಕೆ ನೋವು ಇದೆ ಎಂದು ಹೇಳಿದರು.
ಶಿವಾಜಿ ಪ್ರತಿಮೆಗೆ ಅಡ್ಡಿಪಡಿಸಿಲ್ಲ, ಕೀಳು ರಾಜಕೀಯ ಮಾಡಲ್ಲ: ರಮೇಶ್ ಜಾರಕಿಹೊಳಿ
ಬಿ.ಎಸ್. ಯಡಿಯೂರಪ್ಪ ವಿರುದ್ಧ ಕತ್ತಿ ಮಸೆಯುವ ಬಿಜೆಪಿಯ ತಂಡವೇ ಇದೆ. ಸಿ.ಟಿ.ರವಿ, ಸಂತೋಷ್ ಸೇರಿದಂತೆ ಹಲವರಿದ್ದಾರೆ. ಇದರಲ್ಲಿ ಕೆ.ಎಸ್. ಈಶ್ವರಪ್ಪ ಕೂಡ ಒಬ್ಬರು. ಇವರು ಅಮಿತ್ ಶಾ ಅವರನ್ನು ಮೆಚ್ಚಿಸಲು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಹೋಲಿಸುತ್ತಾರೆ. ಎಲ್ಲಿ ಹೋಲಿಕೆ ಇದೆ, ಈ ಈಶ್ವರಪ್ಪ ಒಬ್ಬ ಮಹಿಷಾಸುರ ಇದ್ದಂತೆ ಎಂದು ಹರಿಹಾಯ್ದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಡಾ. ಶ್ರಿನಿವಾಸ ಕರಿಯಣ್ಣ, ಶಂಕರಘಟ್ಟರಮೇಶ್, ವೈ.ಹೆಚ್. ನಾಗರಾಜ್, ಜಿ.ಡಿ.ಮಂಜುನಾಥ್, ಬಾಲಾಜಿ, ಮಹೇಂದ್ರ ಸೇರಿದಂತೆ ಹಲವರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.