ಹಣ ಆಫರ್​​ ಮಾಡಿದ್ರು ಎಂದ ಬಿಜೆಪಿ ಶಾಸಕ: ಹಣದ ಮೂಲ ಕೇಳಿದ ಕಾಂಗ್ರೆಸ್ ನಾಯಕ

By Suvarna News  |  First Published Sep 12, 2021, 6:03 PM IST

* ಪಕ್ಷಕ್ಕೆ ಮುಜುಗರ ತಂದಿಟ್ಟ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್
* ಕಾಂಗ್ರೆಸ್​ ಬಿಟ್ಟು ಬರಲು ಹಣ ಆಫರ್​​ ಮಾಡಿದ್ರು' ಎಂದ ಶ್ರೀಮಂತ ಪಾಟೀಲ್
* ಬಿಜೆಪಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಟ್ವೀಟ್


ಬೆಂಗಳೂರು, (ಸೆ.12): ಆಪರೇಷನ್ ಕಮಲದ ವೇಳೆ ನನಗೆ ದೊಡ್ಡ ಮೊತ್ತದ ಹಣದ ಆಮಿಷ ಬಂದಿತ್ತು ಎನ್ನುವ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

 ಶ್ರೀಮಂತ ಪಾಟೀಲ್ ಅವರ ಈ ಹೇಳಿಕೆಯೊಂದು ಬಿಜೆಪಿ ಹಾಗೂ ನಾಯಕರುಗಳಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಅಲ್ಲದೇ ವಿರೋಧ ಪಕ್ಷಕ್ಕೆ ಆಹಾರವಾಗಿದೆ.

Tap to resize

Latest Videos

ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್‌ಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ MLA ಆಗ್ರಹ

ಹೌದು... ಈ ಬಗ್ಗೆ ಕೆಪಿಸಿಸಿ ಮಾಜಿ ಅಧ್ಯಕ್ಷ, ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ್ದು, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ BJP ಸೇರಲು ಬಿಜೆಪಿಯವರು ಹಣದ ಆಫರ್ ನೀಡಿದ ಬಗ್ಗೆ ಸ್ವತಃ ಒಪ್ಪಿಕೊಂಡಿದ್ದಾರೆ. 17 ಶಾಸಕರನ್ನು BJP ಅಕ್ರಮ ದುಡ್ಡಿನಿಂದ ಖರೀದಿಸಿದೆ ಎಂಬುದು ಕೊನೆಗೂ ನಿಜವಾಗಿದೆ. ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದಿರುವ ಈ ಸರ್ಕಾರ ಅಕ್ರಮ ಸಂತಾನ. ಹಾಗಾದರೆ ಶಾಸಕರ ಖರೀದಿಗೆ ಬಳಕೆಯಾದ ಹಣದ ಮೂಲ ಯಾವುದು? ಎಂದು ಪ್ರಶ್ನಿಸಿದ್ದಾರೆ.

1
ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ BJP ಸೇರಲು ಯವರು ಹಣದ ಆಫರ್ ನೀಡಿದ ಬಗ್ಗೆ ಸ್ವತಃ ಒಪ್ಪಿಕೊಂಡಿದ್ದಾರೆ‌.

17 ಶಾಸಕರನ್ನು BJP ಅಕ್ರಮ ದುಡ್ಡಿನಿಂದ ಖರೀದಿಸಿದೆ ಎಂಬುದು ಕೊನೆಗೂ ನಿಜವಾಗಿದೆ.

ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದಿರುವ ಈ ಸರ್ಕಾರ ಅಕ್ರ‌ಮ ಸಂತಾನ.

ಹಾಗಾದರೆ ಶಾಸಕರ ಖರೀದಿಗೆ ಬಳಕೆಯಾದ ಹಣದ ಮೂಲ‌ ಯಾವುದು?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao)

ಆಪರೇಷನ್ ಕಮಲ ಎಂಬ ಅನಿಷ್ಟ ಸಂತತಿಯ ಸೃಷ್ಟಿಕರ್ತರಾದ BJPಯವರು 17 ಶಾಸಕರ ಖರೀದಿಗೆ ಕೋಟಿ ಕೋಟಿ ಸುರಿದಿರುವುದು ಸತ್ಯ.'ನಾ ಕಾವೂಂಗಾ ನಾ ಕಾನೇ ದೂಂಗಾ' ಎಂದು ಪೋಸ್ ಕೊಡುವ ಮೋದಿಯವರೆ,ಕರ್ನಾಟಕದಲ್ಲಿ 17 ಶಾಸಕರ ಖರೀದಿಗೆ ಸುರಿದ ಅಕ್ರಮ ಹಣ ಯಾರು ತಿಂದು ವಿಸರ್ಜನೆ ಮಾಡಿದ ಹಣ ಎಂದು ಹೇಳುವಿರಾ? ಈ ಅಕ್ರಮ ಹಣದ ಮೂಲದ ಬಗ್ಗೆ ತನಿಖೆ ನಡೆಸುವಿರಾ?

ಸಂವಿಧಾನಬದ್ಧವಾಗಿ ಚುನಾಯಿತವಾದ ಸರ್ಕಾರವನ್ನು ಸಂವಿಧಾನಬಾಹಿರವಾಗಿ ಕೆಡವುವ ಹೀನ ಸಂಸ್ಕೃತಿ BJPಯವರದ್ದು. ಪಕ್ಷಾಂತರ ನಿಷೇಧ ಕಾಯ್ದೆಗೆ ಮಸಿ ಬಳಿದ  BJP ದುಷ್ಟರ ಕೂಟವಿದ್ದಂತೆ. ರಾಜ್ಯದಲ್ಲಿ 17 ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದಿರುವ ಈ ಸರ್ಕಾರಕ್ಕೆ ಅಧಿಕಾರದಲ್ಲಿಳಿಯುವ ಯಾವುದೇ ನೈತಿಕತೆಯಿಲ್ಲ. BJPಯವರ ಭ್ರಷ್ಟರ ಸರ್ಕಾರವಿದು ಎಂದು ಟ್ವೀಟ್ ಮಾಡಿದ್ದಾರೆ.

ಕಳೆದ ಬಾರಿ ಮಂತ್ರಿ ಆಗಿದ್ದ ಶಾಸಕ ಪಾಟೀಲ್, ಈ ಬಾರಿ ಮಂತ್ರಿ ಸ್ಥಾನದಿಂದ ವಂಚಿತರಾಗಿದ್ದಾರೆ. ಆ ಕಾರಣಕ್ಕಾಗಿ ತಮ್ಮ ಹಿಂದಿನ ಅನುಭವ ಬಹಿರಂಗಗೊಳಿಸಿದ ಶ್ರೀಮಂತ ಪಾಟೀಲ್ ​ಕಾಂಗ್ರೆಸ್ ಬಿಟ್ಟು ಬರಲು ಕಮಲ ನಾಯಕರು ಹಣದ ಆಫರ್ ನೀಡಿದ್ದರು ಎಂದು ಹೇಳಿದ್ದಾರೆ
 
ವಿಧಾನ ಮಂಡಲ ಅಧಿವೇಶನ ಕೂಡ ಶುರು ಆಗ್ತಿದೆ. ಇಂಥ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ವಿರೋಧ ಪಕ್ಷಕ್ಕೆ ದೊಡ್ಡ ಅಸ್ತ್ರ ಕೊಟ್ಟಂತಾಗಿದ್ದು, ಇದು ಅಧಿವೇಶನದಲ್ಲಿ ಸದ್ದು ಮಾಡುವ ಸಾಧ್ಯತೆಗಳಿವೆ.

click me!