
ಯಾದಗಿರಿ(ಆ.13): ರಾಜ್ಯ ಸರಕಾರ ಉತ್ತಮವಾಗಿ ಆಡಳಿತ ನೀಡುತ್ತಿರುವುದನ್ನು ಸಹಿಸಿಕೊಳ್ಳಲು ಬಿಜೆಪಿಗೆ ಆಗುತ್ತಿಲ್ಲ. ಹೀಗಾಗಿಯೇ ಸುಖಾಸುಮ್ಮನೇ ಆರೋಪ ಮಾಡುತ್ತಿದ್ದಾರೆ. ಇವರಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಾಡಿನ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಡಾ. ಭೀಮಣ್ಣ ಮೇಟಿ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗುತ್ತಿದೆ. ನಾಡಿನ ಜನತೆ ಸರಕಾರದ ಮೇಲೆ ಉತ್ತಮ ಅಭಿಪ್ರಾಯವ ಹೊಂದುವ ಜತೆಗೆ ಸಾಕಷ್ಟು ವಿಶ್ವಾಸ ಇಟ್ಟುಕೊಂಡಿದ್ದಾರೆ. ಇದು ಬಿಜೆಪಿ ನಾಯಕರಲ್ಲಿ ತಳಮಳ ಶುರುವಾಗಿದೆ ಎಂದರು.
ಯಾದಗಿರಿ: ಬಸವಸಾಗರ ಜಲಾಶಯ ಭರ್ತಿ, ಸಚಿವ ದರ್ಶನಾಪುರ್ ಬಾಗಿನ ಅರ್ಪಣೆ
ಸಚಿವರು ಪಾರದರ್ಶಕವಾದ ಆಡಳಿತ ನೀಡುತ್ತಿದ್ದಾರೆ. ಆದರೆ, ಅವರ ಮೇಲೆ ಬಿಜೆಪಿ ಯಾವುದೇ ದಾಖಲಾತಿಗಳು ಇಲ್ಲದೇ ಕಮಿಷನ್ ಆರೋಪ ಮಾಡುತ್ತಿದ್ದಾರೆ. ಇದು ಅತ್ಯಂತ ನಾಚಿಗೇಡು ಸಂಗತಿ ಆಗಿದೆ. ಹಿಂದೆ ಇವರು ಆಡಳಿತ ಇದ್ದಾಗ ನಡೆಸಿದ ಶೇ.40ರಷ್ಟುಕಮಿಷನ್ ಕುರಿತಂತೆ ತನಿಖೆ ಕೂಡ ನಡೆಸಲಾಗುತ್ತಿದೆ. ಇದು ಅವರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಗಣಮಿಸಿದೆ. ಹೀಗಾಗಿಯೇ ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನುಡಿದಂತೆ ನಡೆಯಲಾಗುತ್ತಿದೆ. ಐದು ಗ್ಯಾರಂಟಿಗಳನ್ನು ಸಹ ಅನುಷ್ಠಾನ ಮಾಡಲಾಗುತ್ತಿದೆ. ಬಿಜೆಪಿ ಅವರು ಬರೀ ಸುಳ್ಳು ಹೇಳಿ ಆಡಳಿತ ನಡೆಸಿದ ಪರಿಣಾಮವಾಗಿ ಅವರಿಗೆ ಜನರು ಸೋಲಿನ ರುಚಿ ತೋರ್ಪಡಿಸಿದ್ದಾರೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.