ಯಡಿಯೂರಪ್ಪ ತಾವು ಭ್ರಷ್ಟಾಚಾರ ಮಾಡಿ ಸಿಕ್ಕಾಕ್ಕೊಂಡು ಜೈಲು ಅನುಭವಿಸಿ ನಿಮ್ಮನ್ನು ಜೈಲಿಗೆ ಕಳಿಸುತ್ತೇವೆ ಎಂದು ಹೇಳುತ್ತಾರೆ. ಸಿದ್ದರಾಮಯ್ಯನವರ ಬಗ್ಗೆ ಮಾತನಾಡುವ ಯಾವ ನೈತಿಕ ಹಕ್ಕಿಲ್ಲ ಎಂಬುವುದನ್ನು ಸ್ಪಷ್ಟವಾಗಿ ಅರ್ಥೈಸಿಕೊಳ್ಳಬೇಕಿದೆ ಎಂದು ತಿಳಿಸಿದ ತಾರನಾಳ
ಮುದ್ದೇಬಿಹಾಳ(ಅ.14): ಪ್ರಧಾನಿ ನರೇಂದ್ರ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ದುರಾಡಳಿತ ಹಾಗೂ ಜನ ವಿರೋಧಿ, ರೈತ ವಿರೋಧಿ ಸರ್ಕಾರವೆಂದು ಸಾರ್ವಜನಿಕರಿಗೆ ತಿಳಿಯುವಂತೆ ಮಾಡಿದ ಸಿದ್ದರಾಮಯ್ಯನವರ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಭಟನೆ ಮಾಡಿ ಘಂಟಾಘೋಷವಾಗಿ ಕಾರ್ಯಕರ್ತರಿಗೆ ಕರೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ದೇಶ ಹಾಗೂ ರಾಜ್ಯದಲ್ಲಿ ತಮ್ಮ ಸರ್ಕಾರ ನಡೆಸಿದ ಭ್ರಷ್ಟಾಚಾರ ಮತ್ತು ದುರಾಡಳಿತ ಜನರಿಗೆ ಗೊತ್ತಾಗಬಾರದು ಎಂದು ಕೋಮುಗಲಬೆ ಸೃಷ್ಟಿಸಿ ಅಶಾಂತಿ ವಾತಾವರಣ ನಿರ್ಮಿಸುವ ಮೂಲಕ ಜನರನ್ನು ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಆರೋಪಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆ ಪೂರ್ವದಲ್ಲಿ ಜನರಿಗೆ ಹೇಳಿದಂತೆ ಯಾವ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಕೇವಲ ಹಿಂದು ದೇವಾಲಯ, ಮುಸ್ಲಿಂರ ಮಸೀದಿಗಳ ವಿಷಯಗಳನ್ನು ಮುಂದಿಟ್ಟುಕೊಂಡು ಧರ್ಮ, ಧರ್ಮಗಳ ಹಾಗೂ ಜಾತಿ ಜಾತಿಗಳ ಮಧ್ಯ ಕೋಮುವಾದ ಸೃಷ್ಟಿಸುವ ಯೋಜನೆಗಳನ್ನು ರೂಪಿಸುವುದರ ಜೊತೆಗೆ ವಾಮಮಾರ್ಗದ ಮೂಲಕ ಅಧಿಕಾರದ ಗದ್ದು ಹಿಡಿಯುವುದು ಮಾತ್ರ ಅವರಿಗೆ ಗೊತ್ತಿದೆ. ಆದರೆ, ನಿಜವಾದ ಕಡು ಬಡವರಿಗೆ ಆಗಿರುವ ಅನ್ಯಾಯ, ನಿರುದ್ಯೋಗ, ಸಮಸ್ಯೆ ಬಗೆಹರಿಸುವ ಯಾವ ಮಹತ್ತರ ಯೋಜನೆಗಳನ್ನು ಇವರಿಂದ ರೂಪಿಸಲು ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.
ಸೋನಿಯಾ, ರಾಹುಲ್ ಇಟಲಿಗೆ ಮರಳುವ ಕಾಲ ಸನ್ನಿಹಿತ: ಕಟೀಲ್
ಈ ಸರ್ಕಾರದ ದುರಾಡಳಿತವನ್ನು ರಾಹುಲ್ ಗಾಂಧಿ ಅವರು ಜನರಿಗೆ ತಿಳಿಸುತ್ತಿರುವುದರಿಂದ ರಾಹುಲ್ ಹಾಗೂ ಅವರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿ ಬಾಯಿ ಚಪಲ ತೀರಿಸಿಕೊಳ್ಳುತ್ತಿದ್ದಾರೆ. ಅದರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಾವು ಭ್ರಷ್ಟಾಚಾರ ಮಾಡಿ ಸಿಕ್ಕಾಕ್ಕೊಂಡು ಜೈಲು ಅನುಭವಿಸಿ ನಿಮ್ಮನ್ನು ಜೈಲಿಗೆ ಕಳಿಸುತ್ತೇವೆ ಎಂದು ಹೇಳುತ್ತಾರೆ. ಸಿದ್ದರಾಮಯ್ಯನವರ ಬಗ್ಗೆ ಮಾತನಾಡುವ ಯಾವ ನೈತಿಕ ಹಕ್ಕಿಲ್ಲ ಎಂಬುವುದನ್ನು ಸ್ಪಷ್ಟವಾಗಿ ಅರ್ಥೈಸಿಕೊಳ್ಳಬೇಕಿದೆ ಎಂದು ತಿಳಿಸಿದರು.
ನಿಮ್ಮ ರಾಜಕೀಯ ಡೊಂಬರಾಟ, ಪೊಳ್ಳು ಆಶ್ವಾಸನೆಯನ್ನು ಜನರು ನಂಬದೇ ಬಿಜೆಪಿ ಸರ್ಕಾರವನ್ನು ಕಿತ್ತೆಸೆದು ಈ ಬಾರಿ ರಾಜ್ಯದಲ್ಲಿ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ ನೇತೃತ್ವದ ಕಾಂಗ್ರೆಸ್ ಪಕ್ಷವನ್ನು ಅತ್ಯಂತ ಬಹುಮತದಿಂದ ಗೆಲ್ಲಿಸುವ ಮೂಲಕ ಅಧಿಕಾರಕ್ಕೆ ತರಬೇಕೆಂದು ಈಗಾಗಲೇ ಜನ ತೀರ್ಮಾನಿಸಿದ್ದಾರೆ ಅಂತ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ತಿಳಿಸಿದ್ದಾರೆ.