
ಮುದ್ದೇಬಿಹಾಳ(ಜೂ.16): ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ದುರಾಡಳಿತದಿಂದ ಬೇಸತ್ತು ಪ್ರಜ್ಞಾವಂತ ಮತದಾರರು ಇಂದು ಪ್ರಕಾಶ ಹುಕ್ಕೇರಿಯವರನ್ನು ಗೆಲ್ಲಿಸುವ ಮೂಲಕ ಮುಂಬರುವ ಚುನಾವಣೆಗಳಿಗೆ ದಿಕ್ಸೂಚಿ ಬರೆದಿದ್ದಾರೆ. ಈ ನಿಟ್ಟಿನಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಾಲೂಕು ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಗುರು ತಾರನಾಳ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 40, 45 ವರ್ಷಗಳ ಕಾಲ ಸನ್ನಡತೆಯ ಹಿರಿಯ ರಾಜಕಾರಿಣಿಯಾಗಿ ರಾಜಕೀಯದಲ್ಲಿ ಸಾಕಷ್ಟು ಹುದ್ದೆಗಳನ್ನು ಅಲಂಕರಿಸಿ ಉತ್ತಮ ಹಾಗೂ ಸ್ವಚ್ಛ ಆಡಳಿತ ನೀಡಿದ ಕಾರಣ ಪ್ರಜ್ಞಾವಂತ ಶಿಕ್ಷಕ ಮತದಾರರು ಅವರಿಗೆ ಮತ ನೀಡುವ ಮೂಲಕ ಆಶೀರ್ವದಿಸಿದ್ದಾರೆ.
ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಭರ್ಜರಿ ಗೆಲುವು: ಅಧಿಕೃತ ಘೋಷಣೆಯೊಂದೇ ಬಾಕಿ
ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ದೇಶದಲ್ಲಿ ಮಾತ್ರವಲ್ಲದೇ ರಾಜ್ಯದಲ್ಲಿಯೂ ಜನಪರ ಉತ್ತಮ ಆಡಳಿತ ನಡೆಸದೆ ಬರಿ ಜಾತಿ ಧರ್ಮದ ಆಧಾರಿತ ಕೋಮುವಾದಗಳನ್ನು ಸೃಷ್ಟಿಸಿ ಎಲ್ಲೆಡೆ ಅಶಾಂತಿ ಉಂಟುಮಾಡಲಾಗುತ್ತಿದೆ. ಯುವಕರಿಗೆ ಉದ್ಯೋಗ ನೀಡದೆ ಗಲಭೆಗಳನ್ನು ಸೃಷ್ಟಿಸುತ್ತಲೇ ಅವರನ್ನು ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದೆ.
MLC Election: ಪಶ್ಚಿಮ ಶಿಕ್ಷಕರ ಮತಕ್ಷೇತ್ರಕ್ಕೆ ಹೊರಟ್ಟಿ ಬಾದಶಾ!
ಅದರಂತೆ ಕಳೆದ 30 ವರ್ಷಗಳ ಕಾಲ ಸನ್ನಡತೆ ವ್ಯಕ್ತಿತ್ವದ ಮೂಲಕ ರಾಜಕೀಯ ಅಜಾತ ಶತ್ರುಗಳಾಗಿ ಈ ಭಾಗದ ಪ್ರತಿಷ್ಠಿತ ನಾಡಗೌಡ ಮನೆತನ ಸೌಮ್ಯ ರಾಜಕಾರಿಣಿಯಾಗಿರುವ ಮಾಜಿ ಸಚಿವ ಸಿ.ಎಸ್. ನಾಡಗೌಡ ಹಾಗೂ ಸದ್ಯ ಶಿಕ್ಷಕರ ಮತಕ್ಷೇತ್ರದಿಂದ ಚುನಾಯಿತಗೊಂಡ ಪ್ರಕಾಶ ಹುಕ್ಕೇರಿಯವರು ಸಮಕಾಲೀನ ರಾಜಕಾರಿಣಿಗಳಾಗಿದ್ದರಿಂದ ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಪಡೆಯುವಂತೆ ಮಾಡಿದ್ದು ನಾಡಗೌಡರ ಅಭಿಮಾನಕ್ಕೆ ಸಾಕ್ಷಿಯಾಗಿದೆ.
ಸದ್ಯ ಇಂತಹ ಬಿಜೆಪಿಯ ಹಿಟ್ಲರ್ ಆಡಳಿತವನ್ನು ಜನರು ಒಪ್ಪಿಕೊಳ್ಳದೆ ವಿರೋಧಿಸುತ್ತಿದ್ದಾರೆ. ಇನ್ನು ಮುಂದೆ ಮತದಾರರು ಕಾಂಗ್ರೆಸ್ ಪಕ್ಷ ಬೆಂಬಲಿಸುವ ಮೂಲಕ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ತಿರ್ಮಾನಿಸಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.