
ಬೆಂಗಳೂರು, (ಮೇ. 19): ಗ್ರಾಮ ಪಂಚಾಯತ್ ಚುನಾವಣೆ ನಡೆಸುವಂತೆ ಮಾಜಿ ಸಚಿವ ಹೆಚ್.ಕೆ. ಪಾಟೀಲ್, ರಾಜ್ಯ ಚುನಾವಣಾ ಆಯುಕ್ತರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಈಗ ವಿಶ್ವದಲ್ಲಿ ಕೊರೋನಾ ವೈರಸ್ ಹಾವಳಿಯಿದೆ. ವೈರಸ್ ನಿಂದ ವಿಶ್ವವೇ ತತ್ತರಿಸಿದೆ. ಈ ಸಂಕಷ್ಟದ ಕಾಲದಲ್ಲಿ ಚುನಾವಣೆಗಳು ನಡೆಯಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯಿತಿ ಅವಧಿ ಮುಕ್ತಾಯ: ಬಿಎಸ್‌ವೈಗೆ ಸಿದ್ದು ಪ್ರಜಾಪ್ರಭುತ್ವ, ಸಂವಿಧಾನದ ಪಾಠ
ಪಂಚಾಯಿತಿ ಚುನಾವಣೆಗಳನ್ನು ಮುಂದೂಡಬೇಕು ಎಂದು ಸರ್ಕಾರ, ಚುನಾವಣಾ ಆಯೋಗಕ್ಕೆ ವಿನಂತಿಸಿಕೊಂಡಿದೆ. ಇದು ಸರಿಯಲ್ಲ. ಸರ್ಕಾರ ಚುನಾವಣೆ ಮುಂದೂಡಿಕೆಗೆ ಪ್ರಯತ್ನ ನಡೆಸಿದೆ ಜೊತೆಗೆ ಡಿಸಿಗಳ ಮೂಲಕ ನಾಮನಿರ್ದೇಶನಕ್ಕೆ ಕೈಹಾಕಿದೆ. ಆದರೆ, ಪಂಚಾಯತ್ ರಾಜ್ ತಿದ್ದುಪಡಿ ಕಾಯ್ದೆ ಪ್ರಕಾರ ಸಾಧ್ಯವಿಲ್ಲ. ಅಲ್ಲದೇ ರಾಜಕೀಯವಾಗಿ ಗ್ರಾಮ ಪಂಚಾಯತ್ಗಳನ್ನು ದುರ್ಬಳಕೆ ಆಗಬಾರದು ಹಾಗಾಗಿ ರಾಜ್ಯ ಚುನಾವಣಾ ಆಯೋಗ ಎಚ್ಚರಿಕೆ ವಹಿಸಿ ಚುನಾವಣೆ ನಡೆಸಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರ ಚುನಾವಣೆ ನಡೆಸದೆ ಹೋದರೆ ಕಾನೂನಿಗೆ ವಿರುದ್ಧವಾಗುತ್ತದೆ. ಕೇವಲ ಕೋವಿಡ್ ನೆಪವಾಗಿಟ್ಟುಕೊಂಡು ಸರ್ಕಾರ ಈ ಚಿಂತನೆ ನಡೆಸಿದರೇ ತಪ್ಪು. ಇಲ್ಲಿ ಸರ್ಕಾರ ಅಧಿಕಾರ ಬಳಸಿಕೊಂಡು ತಮ್ಮ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುವುದಕ್ಕೆ ಹೊರಟಿದೆ ಎಂದು ಹೆಚ್ ಕೆ ಪಾಟೀಲ ಆರೋಪ ಮಾಡಿದ್ದಾರೆ.
ಲಾಕ್‌ಡೌನ್: ಗ್ರಾಮ ಪಂಚಾಯತ್ ಎಲೆಕ್ಷನ್ ಡೌಟ್, ಬೇರೆ ತೀರ್ಮಾನ ಕೈಗೊಂಡ ಸರ್ಕಾರ
ಇನ್ಮು ಚುನಾವಣಾ ಆಯೋಗ ಸಂವಿಧಾನ ಬದ್ಧವಾಗಿಯೇ ನಡೆದುಕೊಂಡು ಗ್ರಾಮ ಪಂಚಾಯತ್ ಚುನಾವಣೆಯನ್ನ ನಡೆಸಬೇಕೆಂದು ರಾಜ್ಯ ಚುನಾವಣಾ ಆಯೋಗಕ್ಕೆ ಹೆಚ್.ಕೆ.ಪಾಟೀಲ್ ಪತ್ರ ಬರೆದು ಒತ್ತಾಯ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.