ಪಂಚ ಗ್ಯಾರಂಟಿ ಚುನಾವಣೆಯ ಗಿಮಿಕ್ ಅಲ್ಲ: ಎಚ್.ಎಂ.ರೇವಣ್ಣ

Published : Feb 02, 2025, 12:36 PM ISTUpdated : Feb 02, 2025, 12:37 PM IST
ಪಂಚ ಗ್ಯಾರಂಟಿ ಚುನಾವಣೆಯ ಗಿಮಿಕ್ ಅಲ್ಲ: ಎಚ್.ಎಂ.ರೇವಣ್ಣ

ಸಾರಾಂಶ

ಸಿದ್ದರಾಮಯ್ಯ ಎರಡನೇ ಬಾರಿ ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಶಕ್ತಿ ಯೋಜನೆಯಡಿ 377 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ರು.9,124 ಕೋಟಿ ಖರ್ಚು ಮಾಡಿದೆ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಎಚ್.ಎಂ.ರೇವಣ್ಣ 

ಚಿತ್ರದುರ್ಗ(ಫೆ.02):  ಪಂಚ ಗ್ಯಾರಂಜಿ ಅನುಷ್ಠಾನ ಚುನಾವಣೆ ಗಿಮಿಕ್ ಅಲ್ಲ.ರಾಜ್ಯದ ಜನರ ಅಭಿವೃದ್ಧಿ ದೂರದೃಷ್ಟಿಯನ್ನು ಗಮನದಲ್ಲಿರಿಸಿ ಜಾರಿ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಈ ಯೋಜನೆಗಳು ನಿಲ್ಲುವುದಿಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.

ಚಿತ್ರದುರ್ಗದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಸಮಿತಿಯ ನೂತನ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 20 ಅಂಶಗಳ ಕಾರ್ಯಕ್ರಮ ದೇಶದ ಬಡವರ ಜೀವನದಲ್ಲಿ ಸಾಕಷ್ಟು ಬದಲಾವಣೆ ತಂದಿತು. ಇವರ ನೇತೃತ್ವದಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜ ಅರಸ್ ರಕ್ತಕ್ರಾಂತಿ ಇಲ್ಲದೆಯೇ ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಜಾರಿ ಮಾಡಿ, ಭೂ ರಹಿತರಿಗೆ ಭೂಮಿ ಹಕ್ಕು ದೊರಕಿಸಿಕೊಟ್ಟು ಶೋಷಿತರ ನಾಯಕರಾದರೆಂದರು.

ಜಮೀನು ಮಂಜೂರು ಅಧಿಕಾರ ನನ್ನ ಕೈಯಲ್ಲಿ ಇಲ್ಲ: ಸಚಿವ ಕೆ.ವೆಂಕಟೇಶ್‌

ಸಿದ್ದರಾಮಯ್ಯ ಎರಡನೇ ಬಾರಿ ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಶಕ್ತಿ ಯೋಜನೆಯಡಿ 377 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ರು.9,124 ಕೋಟಿ ಖರ್ಚು ಮಾಡಿದೆ. ಗೃಹಲಕ್ಷ್ಮಿ ಯೋಜನೆಯಡಿ 1.2 ಕೋಟಿ ಮಹಿಳೆಯರು ನೊಂದಣಿಯಾಗಿದ್ದು, ಇವರಿಗೆ ಪ್ರತಿ ಮಾಹೆ ರು.2000 ಹಣವ ಹಣವನ್ನು ಡಿಬಿಸಿ ಮೂಲಕ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಇದಕ್ಕಾಗಿ 35,608 ಕೋಟಿ ರು. ಹಣ ಬಿಡುಗಡೆ ಮಾಡಲಾಗಿದೆ. ಗೃಹಜ್ಯೋತಿ ರಾಜ್ಯದ ಎಲ್ಲಮನೆಗಳಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದಕ್ಕಾಗಿ 11,810 ಕೋಟಿ ರು. ಪ್ರಯಿಸಲಾಗಿದೆ. ಯುವನಿಧಿ ಯೋಜನೆ ಯಡಿ 2.14 ಲಕ್ಷ ಫಲಾನುಭವಿಗಳಿಗೆ 222 ಕೋಟಿ ರು. ಹಣ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ಗ್ಯಾರಂಟಿ ಯೋಜನೆಗಳ ಪ್ರಚಾರ ಸಂದರ್ಭದಲ್ಲಿ ವಿರೋಧ ಪಕ್ಷದವರು ಗೇಲಿ ಮಾಡಿದ್ದರು. ಆದರೆ ರಾಜ್ಯದ ಜನತೆ ನಮ್ಮ ಪಕ್ಷವನ್ನು ನಂಬಿ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದರು. ಅಧಿಕಾರಕ್ಕೆ ಬಂದ 3 ತಿಂಗಳ ಒಳು ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಲಾಯಿತು ಎಂದರು.

ದರ್ಶನ್ ಮನೆಗೆ ಹೋಗಿದ್ದೆವು ಎಂಬುದು ಸುಳ್ಳು: ರೇಣುಕಾಸ್ವಾಮಿ ತಂದೆ ಕಾಶಿನಾಥ ಶಿವನಗೌಡ್ರು

ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ವಾರ್ಷಿಕವಾಗಿ ರು.60,000 ಕೋಟಿ ಖರ್ಚು ಮಾಡುತ್ತಿದೆ. ಪಕ್ಷಭೇದವಿಲ್ಲದೇ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ವಾರ್ಷಿಕವಾಗಿ 240 ಕೋಟಿ ರು.ಗೂ
ಅಧಿಕ, ಅಂದರೆ ಪ್ರತಿ ತಿಂಗಳಿಗೆ 20 ಕೋಟಿ ರು.ನಷ್ಟು ಹಣ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದೆ ಎಂದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ.ಎನ್.ಹೆಗಡೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ ಪೀರ್, ಜಿಲ್ಲಾ ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದಡಿ.ಎನ್.ಮೈಲಾರಪ್ಪ, ಜಿ.ಟಿ.ಬಾಬು ರೆಡ್ಡಿ, ಖಾದಿ ಜೆ.ರಮೇಶ್, ಬಿ.ಟಿ.ನಿರಂಜನ ಮೂರ್ತಿ, ಸದಸ್ಯರಾದ ನಾಗೇಶ್ ರೆಡ್ಡಿ, ಅಬ್ದುಲ್ಲಾ ಶಾ ವಲಿ, ಟಿ.ಕೃಷ್ಣಮೂರ್ತಿ, ನಾಗರಾಜ್, ಹೇಮಂತಯಾದವ್, ಮಹಮದ್ ಇಸ್ಮಾಯಿಲ್, ಎ.ಲೋಹಿತ್, ಕೆ.ಎ. ತಿಪೇಶ್, ಎಲ್.ಇಂದಿರಾ, ಪಿ.ಆರ್.ಶಿವಕುಮಾರ್, ಮಧುಪಾಲೇಗೌಡ, ಟಿ. ಪ್ರಕಾಶ್, ಚನ್ನಕೇಶವ, ಜಿ.ಪಿ.ಸುರೇಶ್ ಸೇರಿದಂತೆ ತಾಲೂಕು ಅನುಷ್ಠಾನ ಸಮಿತಿಯ ಅಧ್ಯಕ್ಷರು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ