
ವಿಜಯಪುರ(ಡಿ.02): ನಾನು ಭಾರತೀಯ ಜನತಾ ಪಕ್ಷಕ್ಕೆ ವಾಪಸ್ ಹೋಗುವೆ ಎನ್ನುವ ಕೆ.ಎಸ್.ಈಶ್ವರಪ್ಪ ಹೇಳಿಕೆ ಹಸಿಯಾದ ಸುಳ್ಳು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಶೆಟ್ಟರ್ ಬಿಜೆಪಿಗೆ ಬರುತ್ತಾರೆ, ಬರಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರ ಹೇಳಿಕೆಗೆ ವಿಜಯಪುರದಲ್ಲಿ ಶುಕ್ರವಾರ ಸ್ಪಷ್ಟನೆ ನೀಡಿದ ಅವರು, ಬೇರೆಯವರು ಕಾಂಗ್ರೆಸ್‌ಗೆ ಬರಬಾರದು ಎಂದು ನಾನು ಬಿಜೆಪಿಗೆ ವಾಪಸ್ ಬರುತ್ತಿದ್ದೇನೆ ಎಂದು ಬಿಂಬಿಸಲಾಗುತ್ತಿದೆ. ನಾನು ಮರಳಿ ಬಿಜೆಪಿಗೆ ಹೋಗುವ ಮಾತೇ ಇಲ್ಲ. ನನಗೆ ಮತ್ತು ಲಕ್ಷ್ಮಣ ಸವದಿಯವರಿಗೆ ಟಿಕೆಟ್ ತಪ್ಪಿಸಿದ ಪರಿಣಾಮವನ್ನು ಜನ ತೋರಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲೂ ಇದು ಮುಂದುವರಿಯಲಿದೆ. ಬಿಜೆಪಿಯವರು ಕಾಂಗ್ರೆಸ್‌ಗೆ ಹೋಗದಂತೆ ತಡೆಯಲು ನನ್ನ ಹೆಸರು ಬಳಕೆ ಮಾಡ್ತಿದ್ದಾರೆ. ಶೆಟ್ಟರ್ ಅವರೇ ಬಿಜೆಪಿಗೆ ಬಂದು ಬಿಡ್ತಾರೆ ನೀವು ಕಾಂಗ್ರೆಸ್‌ಗೆ ಹೋಗಬೇಡಿ ಎಂದು ಹೇಳುತ್ತಿದ್ದಾರೆ ಎಂದರು.
ಖಂಡಿತ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಬರುತ್ತಾರೆ: ಕೆ.ಎಸ್.ಈಶ್ವರಪ್ಪ ಹೊಸ ಬಾಂಬ್
ಜನಸಂಘ ಸಮಯದಿಂದ ನಮ್ಮ ತಂದೆ, ಚಿಕ್ಕಪ್ಪನವರು ಸಂಘಟನೆ ಮಾಡಿಕೊಂಡು ಬಂದಿದ್ದರು. ಅವರ ಕಡೆಯ ವ್ಯಕ್ತಿಗೆ ಸಣ್ಣ ಎಂಎಲ್ಎ ಟಿಕೆಟ್ ಕೊಡೋಕೆ ಆಗಲಿಲ್ಲ. ಜನಸಂಘದಿಂದ ಬಂದವರಿಗೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ, ಬಿಜೆಪಿ ಯಾರನ್ನು ಕಡೆಗಣಿಸುತ್ತಿದೆ ಅನ್ನೋದಕ್ಕೆ ಇದು ತಾಜಾ ಉದಾಹರಣೆ. ಹಿಂದುತ್ವವನ್ನು ರಾಜಕಾರಣಕ್ಕೆ ಬಳಸಬಾರದು. ಎಲ್ಲರ ಸೌಹಾರ್ದತೆ ಕಾಪಾಡುವುದು ಮುಖ್ಯ ಎಂದು ಶೆಟ್ಟರ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.