ಬಿಜೆಪಿಗೆ ಆಪರೇಷನ್ ಮಾಡೋದೇ ಕೆಲಸವಾಗಿದೆ: ಬಿ.ಎಲ್‌. ಸಂತೋಷ್‌ ವಿರುದ್ಧ ಹರಿಹಾಯ್ದ ಶೆಟ್ಟರ್‌

By Girish Goudar  |  First Published Sep 1, 2023, 9:22 AM IST

ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ. ನೋಡಿ ಕಾಂಗ್ರೆಸ್‌ಗೆ 136 ಸೀಟ್ ಬಂದಿದೆ. ಬೆಳಗ್ಗೆಯಿಂದ ಸಾಯಂಕಾಲವರೆಗೂ ಆಪರೇಶನ್ ‌ಮಾಡೋದೆ ಕೆಲಸವಾಗಿದೆ. ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರೋದು ನಿಮ್ಮ ಕೆಲಸವಾಗಿದೆ. ನಾನು ಯಾಕೆ ಅವರ ಬಗ್ಗೆ ಯೋಚನೆ ಮಾಡಲಿ. ಅದು ಅವರ ಪಕ್ಷಕ್ಕೆ ಬಿಟ್ಟ ಕೆಲಸ. ದಿನದಿಂದ ಪಕ್ಷ ಅಧೋಗತಿಗೆ ಹೋಗ್ತಿದೆ‌. ಬಿಜೆಪಿ ಮುಳುಗುತ್ತಿರುವ ಹಡಗು ಆಗಿದೆ: ಜಗದೀಶ್ ಶೆಟ್ಟರ್ 


ಹುಬ್ಬಳ್ಳಿ(ಸೆ.01):  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷರವರು ಮೊದಲು ತಮ್ಮ ಪಕ್ಷದಲ್ಲಿದವರನ್ನು ಉಳಿಸಿಕೊಳ್ಳಲಿ. ಶಾಸಕರು ಹಾಗೂ ಮಾಜಿ ಶಾಸಕರನ್ನು‌ ಉಳಸಿಕೊಳ್ಳಲಿ. ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ. ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನ ಬಿಟ್ಟು ಬಿಡಲಿ ಅಂತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿ ಕಾರಿದ್ದಾರೆ. 

ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್.ಸಂತೋಷ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಶುಕ್ರವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಬರೀ ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡೋದಾ.??. ಇಡೀ ರಾಷ್ಟ್ರದಲ್ಲಿ ಬಿಜೆಪಿಗೆ ಆಪರೇಷನ್ ಮಾಡೋದೇ ಕೆಲಸವಾಗಿ ಬಿಟ್ಟಿದೆ ಅಂತ ಹೇಳುವ ಮೂಲಕ ಬಿ.ಎಸ್‌. ಸಂತೋಷ್ ಹೇಳಿಕೆಗೆ ತಿರುಗೇಟು‌ ನೀಡಿದ್ದಾರೆ.  

Tap to resize

Latest Videos

ಕಾಂಗ್ರೆಸ್‌ನಿಂದ ವಲಸೆ ಬಂದವರಿಗೆ 'ಬಾಂಬೆ ಬಾಯ್ಸ್' ಅನ್ನಬೇಡಿ: ಬಿ.ಎಲ್‌.ಸಂತೋಷ್‌

ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ. ನೋಡಿ ಕಾಂಗ್ರೆಸ್‌ಗೆ 136 ಸೀಟ್ ಬಂದಿದೆ. ಬೆಳಗ್ಗೆಯಿಂದ ಸಾಯಂಕಾಲವರೆಗೂ ಆಪರೇಶನ್ ‌ಮಾಡೋದೆ ಕೆಲಸವಾಗಿದೆ. ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರೋದು ನಿಮ್ಮ ಕೆಲಸವಾಗಿದೆ. ನಾನು ಯಾಕೆ ಅವರ ಬಗ್ಗೆ ಯೋಚನೆ ಮಾಡಲಿ. ಅದು ಅವರ ಪಕ್ಷಕ್ಕೆ ಬಿಟ್ಟ ಕೆಲಸ. ದಿನದಿಂದ ಪಕ್ಷ ಅಧೋಗತಿಗೆ ಹೋಗ್ತಿದೆ‌. ಬಿಜೆಪಿ ಮುಳುಗುತ್ತಿರುವ ಹಡಗು ಆಗಿದೆ ಅಂತ ಲೇವಡಿ ಮಾಡಿದ್ದಾರೆ. 

ನಾಳೆಯಿಂದನೇ ಆಪರೇಶನ್ ಸ್ಟಾರ್ಟ್ ಮಾಡಲಿ

ಅವರ ಸಂಪರ್ಕದಲ್ಲಿದ್ರೆ ನಾಳೆಯಿಂದನೇ ಆಪರೇಶನ್ ಸ್ಟಾರ್ಟ್ ಮಾಡಲಿ. ರಾಜೀನಾಮೆ ಕೊಟ್ಟು ಯಾರ ಹೋಗ್ತಾರೆ?, ಗಟ್ಟಿ ಮುಟ್ಟಾದ ಸರ್ಕಾರ ಇದೆ. ಅವರ ಭಾಷಣ ನಾನು ನೋಡಿಲ್ಲ, ಅವರ ಬಗ್ಗೆ ನಾನು ಸಾಕಷ್ಟು ಮಾತಾಡಿದ್ದೇನೆ. ಅವರ ಬಗ್ಗೆ ಬಿಜೆಪಿ ಯೋಚನೆ ಮಾಡಬೇಕು, ದೆಹಲಿಯಲ್ಲಿ ಕೂತ ನಾಯಕರು ಯೋಚನೆ‌ ಮಾಡಬೇಕು. ಕರ್ನಾಟಕದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ತಿದೆ. ಇದಕ್ಕೆ ಕಾರಣ ಬಿಜೆಪಿ‌ ಕೆಲವೇ ಜನರ ಕೈಯಲ್ಲಿದೆ. ಅದರಿಂದ ಹೊರಬಂದ್ರೆ ಮಾತ್ರ ಭವಿಷ್ಯ. ಅದರಿಂದ ಹೊರಬರೋಕೆ ಆಗತ್ತೋ ಇಲ್ವೋ, ಅದಕ್ಕೆ ನಾನೇ ಹೊರಗೆ ಬಂದು ಬಿಟ್ಟೀನಿ‌ ಅಂತ ತಿಳಿಸಿದ್ದಾರೆ. 

ರಾಜ್ಯ ಬಿಜೆಪಿ ನಾಯಕರ ಪರಸ್ಥಿತಿ ಇಡೀ ಜಗತ್ತಿಗೆ ಗೊತ್ತಾಗಿದೆ. ಮುನೇನಕೊಪ್ಪ ಅವರ ಜೊತೆ ನಾನು ಮಾತಾಡಿಲ್ಲ. ಹೈಕಮಾಂಡ್ ಕೂಡಾ ನನಗೆ ಏನೂ ಹೇಳಿಲ್ಲ ಅಂತ ಹೇಳಿದ್ದಾರೆ. 

click me!