ಕಾಂಗ್ರೆಸ್ ಶಾಕ್ ನೀಡಿದ ಕಾಗೋಡು ತಿಮ್ಮಪ್ಪ ಪುತ್ರಿ, ಬಿಜೆಪಿ ಸೇರಲು ಬಿಎಸ್‌ವೈ ಭೇಟಿಯಾದ ರಾಜನಂದಿನಿ!

Published : Apr 12, 2023, 01:16 PM IST
ಕಾಂಗ್ರೆಸ್ ಶಾಕ್ ನೀಡಿದ ಕಾಗೋಡು ತಿಮ್ಮಪ್ಪ ಪುತ್ರಿ, ಬಿಜೆಪಿ ಸೇರಲು ಬಿಎಸ್‌ವೈ ಭೇಟಿಯಾದ ರಾಜನಂದಿನಿ!

ಸಾರಾಂಶ

ಬಿಜೆಪಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಹಲವು ಹಿರಿಯ ನಾಯಕರು, ಟಿಕೆಟ್ ವಂಚಿತರು ಬಂಡಾಯವೆದ್ದಿದ್ದಾರೆ. ಇದರ ನಡುವೆ ಕಾಂಗ್ರೆಸ್‌ನಲ್ಲಿ ಎದ್ದಿರುವ ಬಂಡಾಯ ಶಮನಗೊಂಡಿಲ್ಲ. ಇದೀಗ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಲು ಮುಂದಾಗಿದ್ದಾರೆ. ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾಗಿದ್ದಾರೆ.

ಬೆಂಗಳೂರು(ಏ.11): ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇದೀಗ ಬಂಡಾಯದ ಬಿಸಿ ಹೆಚ್ಚಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಪಕ್ಷ ತೊರೆಯುವವರ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ನಾಯಕರು ಅಸಮಾಧಾನದ ನಡುವೆ ಇದೀಗ ಕಾಂಗ್ರೆಸ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದನಿ ಪಕ್ಷ ತೊರೆಯಲು ಮುಂದಾಗಿದ್ದಾರೆ. ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದ್ದು, ಶೀಘ್ರದಲ್ಲೇ ಅಧಿಕೃತವಾಗಿ ಬಿಜೆಪಿ ಸೇರಿಕೊಳ್ಳುವ ಸಾಧ್ಯತೆ ಇದೆ.

ಇಂದು(ಏ.12) ಬಿಎಸ್ ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಬೇಟಿಯಾದ ರಾಜನಂದನಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ಸೇರಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇತ್ತ ಕೆಪಿಸಿಸಿ ಪರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ರಾಜನಂದಿನಿಗೆ ಕಾಂಗ್ರೆಸ್ ಟಿಕೆಟ್ ವಂಚಿಸಿತ್ತು. ಇಷ್ಟೇ ಅಲ್ಲ ಕಾಗೋಡು ತಿಮ್ಮಪ್ಪಗೂ ಟಿಕೆಟ್ ನಿರಾಕರಿಸಲಾಗಿತ್ತು.  

ಸುಳ್ಯ ಶಾಸಕ ಎಸ್. ಅಂಗಾರ ರಾಜಕೀಯ ನಿವೃತ್ತಿ: ಬಿಜೆಪಿ ಅಭ್ಯರ್ಥಿಗೂ ಬೆಂಬಲಿಸಲ್ಲ

ಸಾಗರದಿಂದ ಕಾಗೋಡು ತಿಮ್ಮಪ್ಪ ಮತ್ತೆ ಸ್ಪರ್ಧಿಸಲು ಸಜ್ಜಾಗಿದ್ದರು. ವಯಸ್ಸಿನ ಕಾರಣದಿಂದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರೆ ಪುತ್ರಿಗೆ ಟಿಕೆಟ್ ಕೊಡಿಸಲು ಮುಂದಾಗಿದ್ದರು. ಆದರೆ  ಕಾಂಗ್ರೆಸ್ ಕಾಗೋಡು ತಿಮ್ಮಪ್ಪ, ಪುತ್ರಿ ರಾಜನಂದಿನಿ ಬದಲು ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಿದ್ದರು. ಇದರಿಂದ ಕಾಗೋಡು ಹಾಗೂ ರಾಜನಂದಿನಿ ತೀವ್ರ ಅಸಮಾಧಾನಗೊಂಡಿದ್ದರು. ಇದೀಗ ಕಾಂಗ್ರೆಸ್ ತಮ್ಮನ್ನು ಕಡೆಗಣಿಸುತ್ತಿದೆ ಅನ್ನೋ ಅಸಮಾಧಾನವನ್ನು ರಾಜನಂದಿನಿ ಹೊರಹಾಕಿದ್ದಾರೆ. ಇದರ ಬೆನ್ನಲ್ಲೇ ಬಿಎಸ್ ಯಡಿಯೂರಪ್ಪ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇಂದು 2 ಗಂಟೆಗೆ ರಾಜನಂದಿನಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜಿನಾಮೆ ನೀಡುವುದಾಗಿ ಹೇಳಿದ್ದಾರೆ. ಬಳಿಕ ಅಧಿಕೃತವಾಗಿ ಬಿಜೆಪಿ ಸೇರಿಕೊಳ್ಳುವ ಸಾಧ್ಯತೆ ಇದೆ. ಕಾಂಗ್ರೆಸ್‌ನಲ್ಲಿ 2ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಬಂಡಾಯದ ಬಾವುಟು ಹೆಚ್ಚಾಗಿದೆ. ಜಿಲ್ಲೆ ಜಿಲ್ಲೆಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಲವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ ಗೊಂಡರೆ ಮತ್ತೆ ಕೆಲವರು ಪಕ್ಷೇತರರಾಗಿ ಸ್ಪರ್ಧಿಸಲು ಮನಸ್ಸು ಮಾಡಿದ್ದಾರೆ.

ಈಶ್ವರಪ್ಪ ರಾಜೀನಾಮೆಯಿಂದ ಬಿಜೆಪಿಗೆ ಸಂಕಷ್ಟ, ಶಿವಮೊಗ್ಗ ಪಾಲಿಕೆಯ 19 ಸದಸ್ಯರ ರಾಜೀನಾಮೆ!

ಕಾಂಗ್ರೆಸ್ ಟಿಕೆಟ್ ವಂಚಿತ ರಘು ಆಚಾರ್ ಜೆಡಿಎಸ್ ಸೇರಿಕೊಂಡಿದರೆ, ವೈಎಸ್‌ವಿ ದತ್ತ ಪಕ್ಷೇತರರಾಗಿ ಸ್ಪರ್ಧಿಸಲು ಮನಸ್ಸ ಮಾಡಿದ್ದಾರೆ. ಕಾಂಗ್ರೆಸ್ ನಾಯಕರ ಬಂಡಾಯ ಶಮನಕ್ಕಾಗಿ ಮಾತುಕತೆ ನಡೆಸಲಾಗುತ್ತಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ