ಸೋನಿಯಾ ವಿಚಾರಣೆ ಕಾರಣ ಖರ್ಗೆ 80ನೇ ಜನ್ಮದಿನ ಆಚರಣೆ ಇಲ್ಲ

By Govindaraj SFirst Published Jul 19, 2022, 5:00 AM IST
Highlights

80ನೇ ಹುಟ್ಟುಹಬ್ಬ ಹಾಗೂ ರಾಜಕೀಯ ಸೇವೆಯ ಸುವರ್ಣ ಮಹೋತ್ಸವವನ್ನು ಆಚರಣೆ ಮಾಡಿಕೊಳ್ಳದೇ ಇರಲು ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಿದ್ದಾರೆ. ಜು.21ರಂದು ಖರ್ಗೆ ಅವರ ಹುಟ್ಟುಹಬ್ಬ ಇದೆ. 

ಕಲಬುರಗಿ (ಜು.19): 80ನೇ ಹುಟ್ಟುಹಬ್ಬ ಹಾಗೂ ರಾಜಕೀಯ ಸೇವೆಯ ಸುವರ್ಣ ಮಹೋತ್ಸವವನ್ನು ಆಚರಣೆ ಮಾಡಿಕೊಳ್ಳದೇ ಇರಲು ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಿದ್ದಾರೆ. ಜು.21ರಂದು ಖರ್ಗೆ ಅವರ ಹುಟ್ಟುಹಬ್ಬ ಇದೆ. ಆದರೆ ಅಂದೇ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಸಂಬಂಧ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಹೀಗಾಗಿ ತಮ್ಮ ಜನ್ಮದಿನ ಹಾಗೂ ರಾಜಕೀಯ ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಖರ್ಗೆ ಅವರು ತಿಳಿಸಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಸಂಬಂಧ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜುಲೈ 21ರಂದು ವಿಚಾರಣೆ ನಡೆಸಲಿರುವ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ಪಕ್ಷದ ಹಿರಿಯ ನಾಯಕ, ರಾಜ್ಯ ಸಭಾ ವಿಪಕ್ಷ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಇದೇ ಜುಲೈ 21ರಂದು ನಡೆಯಬೇಕಿದ್ದ ತಮ್ಮ ಹುಟ್ಟುಹಬ್ಬ ಹಾಗೂ ರಾಜಕೀಯ ಬದುಕಿನ ಸುವರ್ಣ ಹಬ್ಬ ಆಚರಣೆ ಮಾಡಿಕೊಳ್ಳದಿರಲು ನಿರ್ಧರಿಸಿದ್ದಾರೆ.

Latest Videos

ರಾಜಕೀಯ ಸಂದೇಶಕ್ಕಾಗೇ ಸಿದ್ದರಾಮೋತ್ಸವ: Siddaramaiah ಸ್ಪಷ್ಟನೆ

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜುಲೈ 21ಕ್ಕೆ ನನಗೆ 80 ವರ್ಷ ಪೂರ್ಣಗೊಳ್ಳಲಿದೆ. ನಾಡಿನ ಸರ್ವ ವರ್ಗಗಳ ಪ್ರೀತಿ ಹಾಗೂ ಸಹಕಾರದಿಂದ ರಾಜಕೀಯ ಸೇವೆಯಲ್ಲಿ 50 ವರ್ಷಗಳೂ ಪೂರ್ಣಗೊಂಡಿದೆ. ಈ ಅಪಾರ ಪ್ರಮಾಣದ ಪ್ರೀತಿ ಹಾಗೂ ಅಭಿಮಾನಕ್ಕೆ ನಾನು ಸದಾ ನಿಮಗೆ ಚಿರಋುಣಿ. ನೀವೆಲ್ಲರೂ ನನ್ನ ಹುಟ್ಟುಹಬ್ಬ ಆಚರಿಸುವ ಬದಲಾಗಿ ಬುದ್ಧ- ಬಸವ- ಅಂಬೇಡ್ಕರ್‌ ತತ್ವಗಳನ್ನು ಹಾಗೂ ಸಂವಿಧಾನದ ಆಶಯಗಳನ್ನು ಗಟ್ಟಿಗೊಳಿಸುವ ಕೆಲಸವನ್ನು ಎಲ್ಲರೂ ನಿರ್ವಹಿಸಬೇಕೆಂದು ಡಾ.ಖರ್ಗೆ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಜು.21ಕ್ಕೆ ಸೋನಿಯಾ ಪರ ಕಾಂಗ್ರೆಸ್‌ ಹೋರಾಟ: ಕೇಂದ್ರ ಸರ್ಕಾರವು ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದ ಹೆಸರಿನಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ದುರುಪಯೋಗ ಮಾಡಿಕೊಂಡು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಕಿರುಕುಳ ನೀಡಲು ಮುಂದಾಗಿದ್ದು, ಇದನ್ನು ಖಂಡಿಸಿ ಜು.21ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಜಾಥಾ ಹಾಗೂ ‘ರಾಜಭವನ ಮುತ್ತಿಗೆ’ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. 

ಸಿದ್ದು ಬಗ್ಗೆ 27 ಲೇಖಕರು ವಿಮರ್ಶೆ ಮಾಡಿರುವ ಬೃಹತ್‌ ಕೃತಿ ಜು.23ಕ್ಕೆ ರಿಲೀಸ್

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಅವರು ಶನಿವಾರ ಸಂಜೆ ಪಕ್ಷದ ಶಾಸಕರು, ಮಾಜಿ ಶಾಸಕರು, ಸಂಸದರು, ಪದಾಧಿಕಾರಿಗಳು ಹಾಗೂ ಇತರ ಮುಖಂಡರು ಸೇರಿದಂತೆ 600ಕ್ಕೂ ಹೆಚ್ಚು ನಾಯಕರ ಜತೆ ‘ಜೂಮ್‌’ ಸಭೆ ನಡೆಸಿ ಚರ್ಚಿಸಿದ್ದಾರೆ. ಈ ಸಭೆಯಲ್ಲಿ ಸೋನಿಯಾ ಗಾಂಧಿ ಅವರಿಗೆ ಧೈರ್ಯ ತುಂಬಲು ಜು.21 ರಂದು ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಜು.21 ರಂದು ಎಲ್ಲಾ ನಾಯಕರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಸೇರಿ ಅಲ್ಲಿಂದ ‘ರಾಜಭವನ ಚಲೋ’ ನಡೆಸಲಾಗುವುದು. 

click me!