ಕಾಂಗ್ರೆಸ್‌ನ ಪ್ರಭಾವಿ ನಾಯಕ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿಗೆ ಇದೀಗ ಅವರೇ ಸ್ಪಷ್ಟನೆ ಕೊಟ್ಟಿದ್ದು, ಎಲ್ಲಾ ಊಹಾಪೋಗಳಿಗೆ ತೆರೆ ಎಳೆದಿದ್ದಾರೆ.
ವಿಜಯಪುರ, (ನ.17): ಕಾಂಗ್ರೆಸ್ ಪ್ರಭಾವಿ ನಾಯಕ ಎಂ.ಬಿ. ಪಾಟೀಲ್ ಅವರು ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿಗೆ ಇದೀಗ ಸ್ಪಷ್ಟನೆ ಸಿಕ್ಕಿದೆ.
ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿ ಎಂ.ಬಿ.ಪಾಟೀಲ್, ಬಿಜೆಪಿ ಸೇರ್ಪಡೆ ವಿಚಾರವಾಗಿ ಸ್ಪಷ್ಟನೆ ಕೊಟ್ಟಿದ್ದು,ನಾನು ಬೇರೆ ಪಕ್ಷದವರು ನನ್ನನ್ನ ಸಂಪರ್ಕಿಸಿಲ್ಲ. ನಾನು ಯಾರನ್ನೂ ಸಂಪರ್ಕಿಸಿಲ್ಲ. ನಾನು ಬಿಜೆಪಿಗೆ ಹೋಗುತ್ತೇನೆ ಎನ್ನುವುದು ಸುಳ್ಳು ಎಂದು ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದರು.
undefined
ಕಾಂಗ್ರೆಸ್ ತೊರೆಯುತ್ತಾರಾ ಎಂ.ಬಿ.ಪಾಟೀಲ್ ..?
ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ. ಇಂದೂ ಇದ್ದೇನೆ. ಮುಂದೆಯೂ ಕಾಂಗ್ರೆಸ್ ನಲ್ಲೇ ಇರುತ್ತೇನೆ ಎಂದು ಹೇಳಿದರು.
ವಿಜಯಪುರ ಜಿಲ್ಲೆಯ ಶಾಸಕರಾಗಿರುವ ಎಂ.ಬಿ.ಪಾಟೀಲ್ 2018ರ ವಿಧಾನಸಭಾ ಚುನಾವಣೆ ಬಳಿಕ ಅಷ್ಟಾಗಿ ಕಾಂಗ್ರೆಸ್ ಕಾರ್ಯಚಟುವಟಿಕೆಗಳ ಕಾಣಿಸಿಕೊಂಡಿಲ್ಲ. ಮೈತ್ರಿ ಸರ್ಕಾರ ರಚನೆ ನಂತರ ಮೈತ್ರಿ ಸ್ಥಾನಕ್ಕಾಗಿ ಬಂಡಾಯ ಎದ್ದಿದ್ದರು. ಅಂದಿನಿಂದ ಅದ್ಯಾಕೋ ಪಕ್ಷದಿಂದ ಅಂತರ ಕಾಪಾಡಿಕೊಂಡಿದ್ದಾರೆ.
ಇದರಿಂದಪಾಟೀಲರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ರಾಜ್ಯ ರಾಜ್ಯರಾಜಕಾಣದಲ್ಲಿ ಹರಿದಾಡುತ್ತಿತ್ತು. ಆದ್ರೆ, ಇದೀಗ ಎಂ.ಬಿ.ಪಾಟೀಲ್ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.