ಮದುವೆ ಸಂಭ್ರಮದಲ್ಲಿ ನಲಪಾಡ್.. ಅದ್ದೂರಿ ಕಾರ್‍ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್, ಸುದೀಪ್, ಯಶ್ ಭಾಗಿ

Published : Aug 16, 2026, 08:14 PM IST
cm dk shivakumar and kiccha sudeep in nalpad marriage

ಸಾರಾಂಶ

ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರು ಕೊಡಗಿನ ಮಡಿಕೇರಿಯ ರೆಸಾರ್ಟ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಕಾನೂನು ಪದವೀಧರೆ ಮಲಿಹಾ ಫಾತಿಮಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಹೈ-ಪ್ರೊಫೈಲ್ ಮದುವೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್, ನಟರಾದ ಕಿಚ್ಚ ಸುದೀಪ್ ಮತ್ತು ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ನವದಂಪತಿಗೆ ಶುಭ ಹಾರೈಸಿದರು.

ಮಡಿಕೇರಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ (Mohammed Nalapad) ಅವರು ಎರಡನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗಿನ ಮಡಿಕೇರಿ ಸಮೀಪದ ಮೇಕೇರಿ ಗ್ರಾಮದಲ್ಲಿರುವ 'ಕೂರ್ಗ್ ವೈಲ್ಡರ್‌ನೆಸ್' (Coorg Wilderness) ರೆಸಾರ್ಟ್‌ನಲ್ಲಿ ಈ ಅದ್ಧೂರಿ ವಿವಾಹ ಮಹೋತ್ಸವ ನೆರವೇರಿದೆ.

ನಲಪಾಡ್ ಅವರ ಕೈಹಿಡಿದ ವಧುವಿನ ಹೆಸರು ಮಲಿಹಾ ಫಾತಿಮಾ. ಈಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಐ.ಮುನೀರ್ ಅಹಮ್ಮದ್ ಅವರ ಮೂರನೇ ಪುತ್ರಿ. ಮಲಿಹಾ ಫಾತಿಮಾ ಅವರು ಕಾನೂನು ಪದವೀಧರೆಯಾಗಿದ್ದು (Law Graduate), ಪ್ರಸ್ತುತ ಅಮೆರಿಕ ಮೂಲದ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ (MNC) ಉನ್ನತ ಹುದ್ದೆಯಲ್ಲಿದ್ದಾರೆ.

ಸ್ನೇಹ ಈಗ ಸಂಬಂಧವಾಗಿ ಬದಲಾಗಿದೆ

ಶಾಸಕ ಎನ್.ಎ. ಹ್ಯಾರಿಸ್ ಮತ್ತು ಮುನೀರ್ ಅಹಮ್ಮದ್ ನಡುವೆ ಕಳೆದ 20 ವರ್ಷಗಳಿಂದ ಗಾಢ ಸ್ನೇಹವಿದೆ. ಮುನೀರ್ ಅವರು ಹಿರಿಯ ಕಾಂಗ್ರೆಸ್ ಮುಖಂಡ ಬಿ.ಎ. ಹಸನಬ್ಬ ಅವರ ಸಹೋದರಿಯ ಪುತ್ರ. ಈಗ ಈ ಎರಡು ಕುಟುಂಬಗಳ ದಶಕಗಳ ಸ್ನೇಹವು ನೆಂಟಸ್ತಿಕೆಯಾಗಿ ಬದಲಾಗಿದೆ. ಎರಡೂ ಕುಟುಂಬಗಳ ಸಮ್ಮತಿಯೊಂದಿಗೆ ಈ ವಿವಾಹ ನಿಶ್ಚಯವಾಗಿತ್ತು.

ಈ ಹೈ-ಪ್ರೊಫೈಲ್ ವಿವಾಹಕ್ಕೆ ರಾಜಕೀಯ ಮತ್ತು ಚಿತ್ರರಂಗದ ಪ್ರಮುಖ ಗಣ್ಯರು ಸಾಕ್ಷಿಯಾದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಪತ್ನಿಯೊಂದಿಗೆ ಆಗಮಿಸಿ ನವದಂಪತಿಗೆ ಶುಭ ಹಾರೈಸಿದ್ದಾರೆ. ಕೇರಳ ಸಿಎಂ ವಿ.ಡಿ. ಸತೀಶನ್, ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು. ಸ್ಯಾಂಡಲ್‌ವುಡ್ ಸ್ಟಾರ್‌ಗಳಾದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರು ಸಮಾರಂಭಕ್ಕೆ ಆಗಮಿಸಿ ಮದುವೆಗೆ ತಾರಾ ಮೆರುಗು ನೀಡಿದರು.

ಆಗಸ್ಟ್ 15ರಿಂದ 20ರವರೆಗೆ ಸತತ ಐದು ದಿನಗಳ ಕಾಲ ಮದುವೆ ಶಾಸ್ತ್ರಗಳು ನಡೆಯಲಿವೆ. ಆಗಸ್ಟ್ 16ರಂದು ನಿಕಾಹ್ ನೆರವೇರಿದ್ದು, ಆಗಸ್ಟ್ 17ರಂದು (ನಾಳೆ) ಅದ್ಧೂರಿ ಆರತಕ್ಷತೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕಾಗಿ ರೆಸಾರ್ಟ್‌ನ ಎಲ್ಲಾ 104 ಕೊಠಡಿಗಳನ್ನು ಸಂಪೂರ್ಣವಾಗಿ ಬುಕ್ ಮಾಡಲಾಗಿದ್ದು, ಭದ್ರತೆಯ ದೃಷ್ಟಿಯಿಂದ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮೊಹಮ್ಮದ್ ನಲಪಾಡ್ ಅವರಿಗೆ ಇದು ಎರಡನೇ ವಿವಾಹವಾಗಿದ್ದು, ಈ ಹಿಂದೆ 2017ರಲ್ಲಿ ಸಮ್ರೀನ್ ಅವರೊಂದಿಗೆ ವಿವಾಹವಾಗಿದ್ದರು. ಇದೀಗ ಕೊಡಗಿನ ಅಳಿಯನಾಗಿ ನಲಪಾಡ್ ಹೊಸ ಜೀವನ ಆರಂಭಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸೋನಿಯಾ ಗಾಂಧಿ ವಿರುದ್ಧ ಮಂಗಳೂರಲ್ಲಿ ಕೇಸ್! FIR ದಾಖಲಿಸದಿದ್ದರೆ ಹೈಕೋರ್ಟ್‌ಗೆ ಹೋಗುವ ಎಚ್ಚರಿಕೆ
ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗೆ ಮುಹೂರ್ತ ನಿಗಧಿ - ಸಿಎಂ ಶಿವಕುಮಾರ್ ಮಹತ್ವದ ಘೋಷಣೆ