ಭಾರತ್‌ ಜೋಡೋ ಪಾದಯಾತ್ರೆಯನ್ನು ಯಶಸ್ವಿಗೊಳಿಸೋಣ: ಮೊಹಮ್ಮದ್‌ ನಲಪಾಡ್‌

By Govindaraj SFirst Published Sep 23, 2022, 10:02 PM IST
Highlights

ಭಾರತ್‌ ಜೋಡೋ ಕಾರ್ಯಕ್ರಮ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮುಂದಾಳತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿದ್ದು, ಈ ಪಾದಯಾತ್ರೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿವ ಮೂಲಕ ಯಶಸ್ವಿಗೊಳಿಸಬೇಕು ಎಂದು ರಾಜ್ಯ ಯುತ್‌ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಹ್ಯಾರಿಸ್‌ ನಲಪಾಡ್‌ ಕರೆ ನೀಡಿದ್ದಾರೆ.

ಟಿ. ನರಸೀಪುರ (ಸೆ.23): ಭಾರತ್‌ ಜೋಡೋ ಕಾರ್ಯಕ್ರಮ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮುಂದಾಳತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿದ್ದು, ಈ ಪಾದಯಾತ್ರೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿವ ಮೂಲಕ ಯಶಸ್ವಿಗೊಳಿಸಬೇಕು ಎಂದು ರಾಜ್ಯ ಯುತ್‌ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಹ್ಯಾರಿಸ್‌ ನಲಪಾಡ್‌ ಕರೆ ನೀಡಿದ್ದಾರೆ. ಪಟ್ಟಣದ ವಿದ್ಯೋದಯ ಶಿಕ್ಷಣ ಸಂಸ್ಥೆ ವೃತ್ತದ ಬಳಿ ವರುಣ ಹಾಗೂ ನರಸೀಪುರ ಯುವ ಕಾಂಗ್ರೆಸ್‌ನಿಂದ ಹಮ್ಮಿಕೊಂಡಿದ್ದ ಭಾರತ್‌ ಜೋಡೋ ಸಂಘಟನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಲಪಾಡ್‌ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರನ್ನು ಕಾರ್ಯಕ್ರಮದ ಯಶಸ್ವಿಗೆ ಮನವಿ ಮಾಡಿ ಅವರು ಮಾತನಾಡಿದರು.

ಸ್ವಾತಂತ್ರ್ಯ ನಂತರ ಯಾವುದೇ ಪಕ್ಷ, ನಾಯಕ ಮಾಡದ ಪಾದಯಾತ್ರೆಯನ್ನು ರಾಹುಲ್‌ ಗಾಂಧಿ ಮಾಡುತ್ತಿದ್ದಾರೆ. ಸ್ವಾರ್ಥಕ್ಕಾಗಿ, ಅಧಿಕಾರಕ್ಕಾಗಿ ರಾಹುಲ್‌ ಗಾಂಧಿ ಪಾದಯಾತ್ರೆ ಮಾಡುತ್ತಿಲ್ಲ. ಸಾಮಾನ್ಯ ಜನರ ಪರವಾಗಿ ಈ ಪಾದಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ದೇಶವನ್ನು ಹಾಳು ಮಾಡುತ್ತಿದೆ. ಯುವಕರಿಗೆ ಉದ್ಯೋಗ ಇಲ್ಲ. ಕೆಲಸಕ್ಕೆ ಲಂಚ ಕೊಡಬೇಕು. ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಬದುಕಲಾಗದ ಪರಿಸ್ಥಿತಿಯನ್ನು ರಾಹುಲ್‌ ಗಾಂಧಿ ಅರಿತು ಜನರನ್ನು ಸಂಕಷ್ಟದಿಂದ ಪಾರುಮಾಡಲಲು ಈ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ನುಡಿದರು. ಪಾದಯಾತ್ರೆಯಿಂದ ಜನಸಾಮಾನ್ಯರಿಗೆ ಸತ್ಯ ತಿಳಿಯಲಿದೆ ಅಲ್ಲದೆ ಮುಂದಿನ 6 ತಿಂಗಳಲ್ಲಿ ವಿಧಾನಸಭಾ ಚುನಾವಣೆ ಬರಲಿದೆ. 

Dasara Flower Show 2022: ಗಾಜಿನ ಮನೆಯಲ್ಲಿ ರಾಷ್ಟ್ರಪತಿ ಭವನ ನಿರ್ಮಾಣ

ರಾಹುಲ್‌ ಗಾಂಧಿ ರಾಜ್ಯ ಮತ್ತು ತಮ್ಮ ಜಿಲ್ಲೆಗಳಿಗೆ ಬಂದಾಗ ಹೆಚ್ಚು ಜನರನ್ನು ಸೇರಿಸಿದರೆ ರಾಹುಲ್‌ ಗಾಂಧಿಯವರು ಏತಕ್ಕಾಗಿ ಭಾರತ್‌ ಜೋಡೊ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಸತ್ಯ ತಿಳಿಯಲಿದೆ ಹಾಗೆ ಬಿಜೆಪಿ ಪಕ್ಷಕ್ಕೆ ಜನರು ತಕ್ಕ ಪಾಠ ಕಲಿಸಲು ಸಾಧ್ಯವಾಗುತ್ತದೆ ಎಂದರು. ರಾಜ್ಯ ಉಪಾಧ್ಯಕ್ಷ ವಿಶ್ವನಾಥ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರ್‌, ಮೈಸೂರು ಜಿಲ್ಲಾಧ್ಯಕ್ಷ ಡೊನಾಲ್ಡ್‌ ಎಫ್‌. ನಿರ್ಮಾಣಿಕ್‌, ವರುಣ ಬ್ಲಾಕ್‌ ಅಧ್ಯಕ್ಷ ಲಿಂಗರಾಜು, ತಗಡೂರು ಬ್ಲಾಕ್‌ ಅಧ್ಯಕ್ಷ ಮಾದೇವಸ್ವಾಮಿ, ತಾಪಂ ಮಾಜಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಮೇಶ್‌, ಅಮ್ಜದ್‌ಖಾನ್‌, ವರುಣ ಯೂತ್‌ ಕಾಂಗ್ರೆಸ್‌ ಉಪಾಧ್ಯಕ್ಷ ನಟೇಶ್‌, ಪ್ರಮೋದ್‌, ಸಾಗರ್‌, ಜಗದೀಶ್‌, ಚಿಕ್ಕಬುದ್ಧಿ, ಕಾಂಗ್ರೆಸ್‌ ಪದಾಧಿಕಾರಿಗಳು ಇದ್ದರು.

Mysuru: ಸುತ್ತಾಟವಿಲ್ಲದೆ ಮನೆ ಬಾಗಿಲಿಗೆ ಸರ್ಕಾರಿ ಸೌಲಭ್ಯ: ಸಚಿವ ಆರ್‌.ಅಶೋಕ್‌

ಯುವಕರು ತಪ್ಪಾದ ದಾರಿ ಹಿಡಿಯುತ್ತಿರುವುದು ಸತ್ಯ: ಡಿಗ್ರಿ ಪಡೆದ ಯುವಕರಿಗೆ ಕೆಲಸ ಸಿಗುತ್ತಿಲ್ಲ. ಹೀಗಾಗಿ ಅವರು ಕ್ರೈಂ ದಾರಿ ಹಿಡಿಯುತ್ತಿದ್ದಾರೆ. ತಪ್ಪಾದ ದಾರಿ ಹೋಗುತ್ತಿದ್ದಾರೆ. ಇದೇ ನಡೆಯುತ್ತಿರುವುದು. ಐಸಿಸ್‌ ಸಂಘಟನೆ ಅಂತಲ್ಲ. ಯುವಕರು ತಪ್ಪಾದ ದಾರಿ ಹಿಡಿಯುತ್ತಿರುವುದು ಸತ್ಯ ಎಂದು ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಮಹಮ್ಮದ್‌ ನಲಪಾಡ್‌ ತಿಳಿಸಿದರು. ಶಿವಮೊಗ್ಗದಲ್ಲಿ ಐಸಿಸ್‌ ಸಂಪರ್ಕದಲ್ಲಿದ್ದ ಯುವಕರ ಬಂಧನ ವಿಚಾರಕ್ಕೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ನಿರುದ್ಯೋಗ ಇರುವ ಕಾರಣ ಯುವಕರು ತಪ್ಪು ದಾರಿ ಹಿಡಿದಿದ್ದಾರೆ. ಇದಕ್ಕೆ ಬಿಜೆಪಿಯೇ ಹೊಣೆ. ಕೆಲಸ ಇದ್ದರೆ ಯುವಕರಿಗೆ ತಪ್ಪು ದಾರಿಗೆ ತುಳಿಯುವ ಯೋಚನೆ ಬರಲ್ಲ ಎಂದರು. 2023ರವರೆಗೆ ಯುವಕರು ತಾಳ್ಮೆಯಿಂದ ಇರಿ. ಸುವರ್ಣ ಕಾಲ ಬರುತ್ತೆ. ತಪ್ಪು ದಾರಿಗೆ ಹೋಗಬೇಡಿ ಎಂದ ಅವರು, ಐಸಿಸಿ ಸಂಪರ್ಕದಲ್ಲಿ ಇರೋರರನ್ನು ಭಾರತದಲ್ಲಿ ಇಟ್ಟುಕೊಳ್ಳಬೇಡಿ, ಅವರಿಗೆ ಗಲ್ಲು ಶಿಕ್ಷೆ ಕೊಡಿ ಎಂದು ಆಗ್ರಹಿಸಿದರು.

click me!