
ಮಳವಳ್ಳಿ(ಜೂ.18): ಬಿಜೆಪಿ ದುರಾಡಳಿತ ಹಾಗೂ ಜೆಡಿಎಸ್ ಪಕ್ಷದಲ್ಲಿನ ಕಿತ್ತಾಟದಿಂದ ಬೇಸತ್ತಿರುವ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂಬುವುದಕ್ಕೆ ವಿಧಾನ ಪರಿಷತ್ ಚುನಾವಣೆಗಳೇ ಸಾಕ್ಷಿಯಾಗಿವೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಮುಂದಿನ ದಿನಗಳಲ್ಲಿ ನಡೆಯುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಹಾಗೂ ವಿಧಾನಸಭೆ ಚುನಾವಣೆಗೆ ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದಕ್ಷಿಣ ಪದವೀಧರ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿ ಗೆದ್ದ ಕಾಂಗ್ರೆಸ್
ಈಗಾಗಲೇ ಬಿಜೆಪಿ ದುರಾಡಳಿತ ಹಾಗೂ ಜೆಡಿಎಸ್ ಪಕ್ಷದಲ್ಲಿನ ಕಿತ್ತಾಟದಿಂದ ಬೇಸತ್ತಿರುವ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂಬುವುದಕ್ಕೆ ವಿಧಾನ ಪರಿಷತ್ ಚುನಾವಣೆಗಳೇ ಸಾಕ್ಷಿಯಾಗಿವೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿರುವ ಮಧು ಜಿ.ಮಾದೇಗೌಡರು ಪರಿಷತ್ ಚುನಾವಣೆಯಲ್ಲಿ ಆಯ್ಕೆಯಾಗಿರುವುದು ಪದವೀಧರ ಕ್ಷೇತ್ರಕ್ಕೆ ಆನೆಬಲ ಬಂದಂತಾಗಿದೆ. ಪ್ರಜ್ಞಾವಂತ ಪದವೀಧರ ಮತದಾರರು ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವುದರ ಮೂಲಕ ಜಿಲ್ಲೆಯ ಗಾಂಧಿ, ಕಾವೇರಿ ಹೋರಾಟಗಾರ ದಿ.ಜಿ.ಮಾದೇಗೌಡ ಅವರ ಹೋರಾಟ ಮತ್ತು ಸೇವೆಗೆ ಗೌರವ ಸಲ್ಲಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಮಾಜಿ ಸಂಸದ ಜಿ.ಮಾದೇಗೌಡರು ನಮ್ಮ ಜಿಲ್ಲೆಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಪದವೀಧರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆದು ಹೋರಾಟ ಮಾಡಲಿದ್ದಾರೆ. ಚುನಾವಣೆಯಲ್ಲಿ ಹಗಲಿರುಳು ಎನ್ನದೇ ಶ್ರಮಿಸಿರುವ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.