ಮೇಸ್ತ ಕೇಸಲ್ಲಿ ಸುಳ್ಳು: ಬಿಜೆಪಿಗರ ವಿರುದ್ಧ ಕೇಸ್‌ ಹಾಕಿ

Published : Oct 19, 2022, 06:36 AM IST
ಮೇಸ್ತ ಕೇಸಲ್ಲಿ ಸುಳ್ಳು: ಬಿಜೆಪಿಗರ ವಿರುದ್ಧ ಕೇಸ್‌ ಹಾಕಿ

ಸಾರಾಂಶ

ಹೊನ್ನಾವರದ ಪರೇಶ್‌ ಮೇಸ್ತಾ ಸಾವು ಕೋಮುಗಲಭೆಯಿಂದ ಸಂಭವಿಸಿಲ್ಲ ಎಂದು ಸಿಬಿಐ ವರದಿ ಸಲ್ಲಿಸಿರುವುದರಿಂದ ರಾಜ್ಯದ ಜನರಿಗೆ ಸುಳ್ಳು ಮಾಹಿತಿ ನೀಡಿ ದಾರಿ ತಪ್ಪಿಸಿದ್ದ ಬಿಜೆಪಿ ಮುಖಂಡರ ವಿರುದ್ಧ 15 ದಿನದೊಳಗೆ ಸರ್ಕಾರ ಸ್ವಯಂಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು. ಇಲ್ಲದಿದ್ದರೆ ಸಿಬಿಐಗೆ ದೂರು ನೀಡಲಾಗುವುದು ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಸಿದ್ದಾರೆ.

ಬೆಂಗಳೂರು (ಅ.19): ಹೊನ್ನಾವರದ ಪರೇಶ್‌ ಮೇಸ್ತಾ ಸಾವು ಕೋಮುಗಲಭೆಯಿಂದ ಸಂಭವಿಸಿಲ್ಲ ಎಂದು ಸಿಬಿಐ ವರದಿ ಸಲ್ಲಿಸಿರುವುದರಿಂದ ರಾಜ್ಯದ ಜನರಿಗೆ ಸುಳ್ಳು ಮಾಹಿತಿ ನೀಡಿ ದಾರಿ ತಪ್ಪಿಸಿದ್ದ ಬಿಜೆಪಿ ಮುಖಂಡರ ವಿರುದ್ಧ 15 ದಿನದೊಳಗೆ ಸರ್ಕಾರ ಸ್ವಯಂಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು. ಇಲ್ಲದಿದ್ದರೆ ಸಿಬಿಐಗೆ ದೂರು ನೀಡಲಾಗುವುದು ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2017 ಡಿಸೆಂಬರ್‌ನಲ್ಲಿ ನಡೆದ ಮೇಸ್ತಾ ಸಾವು ಆಕಸ್ಮಿಕ. ಕೊಲೆಯಲ್ಲ ಎಂದು ಸಿಬಿಐ ನ್ಯಾಯಾಲಯಕ್ಕೆ ವರದಿ ಸಲ್ಲಿಸಿ ಪ್ರಕರಣ ಮುಕ್ತಾಯ ಮಾಡಲು ಮನವಿ ಮಾಡಿದೆ. ಆದರೆ ಕೋಮುಗಲಭೆಯಲ್ಲಿ ಮೇಸ್ತಾ ಹತ್ಯೆ ನಡೆದಿದೆ ಎಂದು ಬಿಜೆಪಿ ಮುಖಂಡರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಇವರ ವಿರುದ್ಧ ರಾಜ್ಯ ಸರ್ಕಾರ ಸುಮೋಟೋ ಕೇಸ್‌ ದಾಖಲಿಸಬೇಕು. ಇಲ್ಲದಿದ್ದರೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಸಿಬಿಐಗೆ ದೂರು ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ರಾಜ್ಯಕ್ಕೆ 1 ಟ್ರಿಲಿಯನ್‌ ಆರ್ಥಿಕತೆ ಗುರಿ: ಸಿಎಂ ಬೊಮ್ಮಾಯಿ

ಮೇಸ್ತಾ ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌, ಸಂಸದ ಅನಂತ್‌ಕುಮಾರ್‌ ಹೆಗಡೆ ಸೇರಿದಂತೆ ಯಾರೆಲ್ಲಾ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದರೋ ಅವರ ವಿರುದ್ಧ 15 ದಿನದಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು. ಇಲ್ಲದಿದ್ದರೆ ಸುಳ್ಳು ಹೇಳಿ ರಾಜ್ಯಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಸಿಬಿಐಗೆ ದೂರು ನೀಡಲಾಗುವುದು ಎಂದು ಹೇಳಿದರು.

ಸುಳ್ಳಿನ ಕಾರ್ಖಾನೆಯಿಂದ ಬೆಂಕಿ: ಬಿಜೆಪಿ ಸುಳ್ಳಿನ ಕಾರ್ಖಾನೆ ಎಂಬುದು ಎಲ್ಲರಿಗೂ ಗೊತ್ತು. ಈ ಸುಳ್ಳಿನ ಕಾರ್ಖಾನೆಯಿಂದ ರಾಜ್ಯದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ನಮ್ಮ ಯುವಕರ ಭವಿಷ್ಯದ ಜತೆ ಚೆಲ್ಲಾಟವಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಬಜರಂಗದಳದ ಅಧ್ಯಕ್ಷರಾಗಿದ್ದ ಮಹೇಂದ್ರಕುಮಾರ್‌ ಬಹಿರಂಗ ವೇದಿಕೆಯಲ್ಲೇ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅನ್ನು ರಕ್ತ ಹೀರುವ ಕ್ರಿಮಿಗಳು ಎಂದು ಹೇಳಿದ್ದರು. ಇದು ಬಿಜೆಪಿಯವರ ಮನಸ್ಥಿತಿಯನ್ನು ಅನಾವರಣಗೊಳಿಸಿದೆ ಎಂದು ಆರೋಪಿಸಿದರು.

ಮೇಸ್ತಾ ಸಾವು ಮದ್ಯ, ವಿಷ, ಡ್ರಗ್ಸ್‌ ಸೇವನೆಯಿಂದ ಆಗಿಲ್ಲ. ದೇಹದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಗುರುತಿಲ್ಲ. ಹತ್ಯೆ ಮಾಡಿ ಕೆರೆಗೆ ಎಸೆದಿಲ್ಲ. ಕುತ್ತಿಗೆ ಹಾಗೂ ಯಾವುದೇ ಮೂಳೆಗೆ ಹಾನಿಯಾಗಿಲ್ಲ. ಬಲವಂತವಾಗಿ ನೀರಿನಲ್ಲಿ ಮುಳುಗಿಸಿಲ್ಲ. ಉರುಳು ಹಾಕಿಲ್ಲ ಎಂಬುದು ಮರಣೋತ್ತರ ವರದಿಯಿಂದ ಬಹಿರಂಗವಾಗಿದೆ. ಸಿಬಿಐ ಅಧಿಕಾರಿಗಳು ಪಾಂಡಿಚೆರಿಯ ತಜ್ಞರಿಂದ ಎರಡನೇ ಅಭಿಪ್ರಾಯ ಪಡೆದಿದ್ದು, ಅವರೂ ಸಹ ನೀರಿನಲ್ಲಿ ಮುಳುಗಿರುವ ಆಕಸ್ಮಿಕ ಸಾವು ಎಂದು ವರದಿ ನೀಡಿದ್ದಾರೆ ಎಂದು ವಿವರಿಸಿದರು.

ಒಕ್ಕಲಿಗರು ಹೆಚ್ಚು ಮೀಸಲು ಕೇಳುವುದು ತಪ್ಪಲ್ಲ: ಸಿಎಂ ಬೊಮ್ಮಾಯಿ

ವಿಧಾನ ಪರಿಷತ್‌ ಮಾಜಿ ಸದಸ್ಯ ರಮೇಶ್‌ ಬಾಬು ಮಾತನಾಡಿ, ಕೇಶವಕೃಪಾದಿಂದ ಬಂದ ಸ್ಕಿ್ರಪ್‌್ಟಗಳನ್ನು ಬಿಜೆಪಿ ನಾಯಕರು ಸಂಕಲ್ಪ ಯಾತ್ರೆಯಲ್ಲಿ ಮಾತನಾಡುತ್ತಿದ್ದಾರೆ. ಸರ್ಕಾರದ ಸಾಧನೆ ಹೇಳುವ ಬದಲು ಕಾಂಗ್ರೆಸ್‌ ನಾಯಕರ ವಿರುದ್ಧ ವೈಯಕ್ತಿಕ ಟೀಕೆಗಳನ್ನಷ್ಟೇ ಮಾಡುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುತರವಾದ ಭ್ರಷ್ಟಾಚಾರ ಆರೋಪಕ್ಕೆ ಉತ್ತರ ನೀಡುತ್ತಿಲ್ಲ ಎಂದು ಟೀಕಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್