ಗೃಹ ಸಚಿವರ ಮನೆ ಮೇಲಿನ ದಾಳಿ ಕಾನೂನು ಕುಸಿತಕ್ಕೆ ಸಾಕ್ಷಿ: ಪ್ರಿಯಾಂಕ್‌ ಖರ್ಗೆ

By Govindaraj S  |  First Published Jul 31, 2022, 5:11 AM IST

ರಾಜ್ಯದಲ್ಲಿ ಗೃಹ ಸಚಿವರ ಕಚೇರಿಗೆ ರಕ್ಷಣೆ ಇಲ್ಲದಂತಾಗಿದೆ. ಗೃಹ ಸಚಿವರ ಮನೆ ಮೇಲೆ ನಡೆದ ದಾಳಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದಕ್ಕೆ ಸಾಕ್ಷಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಒತ್ತಾಯಿಸಿದ್ದಾರೆ. 


ಬೆಂಗಳೂರು (ಜು.31): ರಾಜ್ಯದಲ್ಲಿ ಗೃಹ ಸಚಿವರ ಕಚೇರಿಗೆ ರಕ್ಷಣೆ ಇಲ್ಲದಂತಾಗಿದೆ. ಗೃಹ ಸಚಿವರ ಮನೆ ಮೇಲೆ ನಡೆದ ದಾಳಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದಕ್ಕೆ ಸಾಕ್ಷಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಒತ್ತಾಯಿಸಿದ್ದಾರೆ. 

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ವಕ್ತಾರರೂ ಆದ ಅವರು, ಬಿಜೆಪಿಯ ಕಾರ್ಯಕರ್ತರು ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಿ, ಗೇಟ್‌ ಹಾರಿ ಮನೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಹಾದಿ ಬೀದಿಯಲ್ಲಿ ಹೋಗುವವರು ಮಾಡಿರುವ ಪ್ರತಿಭಟನೆಯಲ್ಲ. ಬಿಜೆಪಿಯ ವಿದ್ಯಾರ್ಥಿ ಸಂಘಟನೆ ಖುದ್ದು ಗೃಹ ಸಚಿವರ ಮನೆ ಮೇಲೆ ನಡೆಸಿರುವ ದಾಳಿಯಿದು. ಇಷ್ಟೂಮಾಹಿತಿಯನ್ನು ಗುಪ್ತಚರ ಇಲಾಖೆಯಿಂದ ಪಡೆಯುತ್ತಿಲ್ಲ ಎಂದರೆ ಇವರು ಅಧಿಕಾರದಲ್ಲಿ ಏಕೆ ಇರಬೇಕು? ಎಂದು ಪ್ರಶ್ನಿಸಿದರು. ಬಿಜೆಪಿ ಸಂಸದರು ಎಲ್ಲರಿಗೂ ಭದ್ರತೆ ನೀಡಲು ಆಗುವುದಿಲ್ಲ ಎಂದು ಹೇಳಿದ್ದಾರೆ. 

Tap to resize

Latest Videos

ಈವರೆಗಿನ ಎಲ್ಲ ಕೋಮುಗಲಭೆ, ಹತ್ಯೆ ನ್ಯಾಯಾಂಗ ತನಿಖೆ ನಡೆಸಿ: ಪ್ರಿಯಾಂಕ್‌ ಖರ್ಗೆ

ಆದರೆ ಬಿಜೆಪಿ ಕಚೇರಿಗಳಿಗೆ ಭದ್ರತೆ ಹೇಗೆ ಒದಗಿಸಿದ್ದಾರೆ. ಸರ್ಕಾರ ಮೊದಲು ತಮ್ಮ ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸಲಿ. ನೀವು ಕಾರ್ಯಕರ್ತರನ್ನು ಯಾವ ಮಟ್ಟಿಗೆ ದುರುಪಯೋಗ ಮಾಡಿಕೊಂಡಿದ್ದೀರಿ ಎಂಬುದಕ್ಕೆ ಅವರ ಆಕ್ರೋಶ ಹಾಗೂ ಸಾಮೂಹಿಕ ರಾಜೀನಾಮೆಗಳೇ ಸಾಕ್ಷಿ ಎಂದು ಕಿಡಿ ಕಾರಿದರು. ಎಬಿವಿಪಿ ಹೆಸರಲ್ಲಿ ಪ್ರತಿಭಟನೆ ಆಗುತ್ತಿದೆ ಎಂಬ ಬಿಜೆಪಿ ನಾಯಕರ ಮಾತಿನ ಬಗ್ಗೆ ಕೇಳಿದ ಪ್ರಶ್ನೆಗೆ, ಗೃಹ ಸಚಿವರ ಕಚೇರಿಗೆ ಜನ ನುಗ್ಗಿದ್ದರೆ ಗುಪ್ತಚರ ಇಲಾಖೆ ಕತ್ತೆ ಕಾಯುತ್ತಿದೆಯಾ? ಪೊಲೀಸ್‌ ಅಧಿಕಾರಿಗಳು ಏನು ಮಾಡುತ್ತಿದ್ದಾರೆ?

ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು: ಪ್ರಿಯಾಂಕ್‌ ಚಾಟಿ

ಬಿಜೆಪಿಯವರು ಮೈ ಮೇಲೆ ಪ್ರಜ್ಞೆ ಇಟ್ಟುಕೊಂಡು ಮಾತನಾಡಲಿ. ಇದು ಸರ್ಕಾರದ ವೈಫಲ್ಯ ಅಲ್ಲವೇ? ಎಂದು ಪ್ರಶ್ನಿಸಿದರು. ಬಿಜೆಪಿಯವರು ಬಿತ್ತಿದ ವಿಷ ಬೀಜ ಈಗ ಹೆಮ್ಮರವಾಗಿ ಬೆಳೆದಿದ್ದು, ಈಗ ಇವರಿಗೆ ನಿಯಂತ್ರಿಸಲು ಆಗುತ್ತಿಲ್ಲ. ಕಟೀಲ ಅವರ ಗಾಡಿ ಅಲ್ಲಾಡಿಸಿದ್ದು, ಸಚಿವ ಸುನಿಲ ಹಾಗೂ ಅಂಗಾರ ಅವರಿಗೆ ದಿಗ್ಬಂಧನ ಹಾಕಿದ್ದು ಕಾಂಗ್ರೆಸ್‌ನವರಲ್ಲ. ಜಗಳ ಹಚ್ಚಿ ರಾಜಕೀಯ ಲಾಭ ಪಡೆಯುವ ವಿಚಾರದಲ್ಲಿ ಬಿಜೆಪಿಯರಿಗೆ ಇತಿಹಾಸವಿದೆ. ಅದೇ ಇಂದು ಅವರಿಗೆ ತಿರುಗು ಬಾಣ ಆಗಿದ್ದು, ಅದನ್ನು ಅರಗಿಸಿಕೊಳ್ಳಲು ಅವರಿಂದ ಆಗುತ್ತಿಲ್ಲ ಎಂದು ತಿರುಗೇಟು ನೀಡಿದರು.

click me!