ಪ್ರಜ್ವಲ್ ಪರ ಪ್ರಚಾರ ಮಾಡಿದ್ದ ಮೋದಿ ಈಗೇನು ಹೇಳುತ್ತಾರೆ: ಪ್ರಿಯಾಂಕಾ ಗಾಂಧಿ

By Kannadaprabha News  |  First Published Apr 30, 2024, 5:03 AM IST

ಮಂಗಲಸೂತ್ರದ ಬಗ್ಗೆ ಮಾತನಾಡುವ ಮೋದಿ, ರಾಜ್ಯದ ಈ ಅತಿದೊಡ್ಡ ಸೆಕ್ಸ್‌ ಹಗರಣದ ಬಗ್ಗೆ ಏನು ಹೇಳುತ್ತಾರೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.


ಕಲಬುರಗಿ (ಏ.30): ಪ್ರಧಾನಿ ನರೇಂದ್ರ ಮೋದಿ‌ ಜತೆ ಇರುವ ವ್ಯಕ್ತಿ‌ ಇಂದು ಕರ್ನಾಟಕದಲ್ಲಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಮೋದಿಯವರು ಅದೇ ವ್ಯಕ್ತಿಯ ಪರ ಮತಯಾಚಿಸಿದ್ದ‌ರು. ಅದೇ ವ್ಯಕ್ತಿ ಯಾರಿಗೂ ಗೊತ್ತಾಗದಂತೆ ಈಗ ವಿದೇಶಕ್ಕೆ ಪರಾರಿಯಾಗಿದ್ದಾನೆ. ಮಂಗಲಸೂತ್ರದ ಬಗ್ಗೆ ಮಾತನಾಡುವ ಮೋದಿ, ರಾಜ್ಯದ ಈ ಅತಿದೊಡ್ಡ ಸೆಕ್ಸ್‌ ಹಗರಣದ ಬಗ್ಗೆ ಏನು ಹೇಳುತ್ತಾರೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

ಕಲಬುರಗಿ ಜಿಲ್ಲೆ ಸೇಡಂನಲ್ಲಿ ಸೋಮವಾರ ಕಲಬುರಗಿ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣ ಪರ ಪ್ರಚಾರ ಭಾಷಣ ಮಾಡಿದ ಪ್ರಿಯಾಂಕಾ, ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರ ಸೆಕ್ಸ್‌ ಹಗರಣವನ್ನು ಪರೋಕ್ಷವಾಗಿ ಪ್ರಸ್ತಾಪಿಸಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಈ ಹಿಂದೆ ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಮೋದಿ‌ ಸುಮ್ಮನೆ ಇದ್ದರು. ಈಗ ಮೋದಿ‌ ಜತೆ ಇರುವ ವ್ಯಕ್ತಿ‌ ಇಂದು ಕರ್ನಾಟಕದಲ್ಲಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿ, ಯಾರಿಗೂ ಗೊತ್ತಾಗದಂತೆ ವಿದೇಶಕ್ಕೆ ಪರಾರಿಯಾಗಿದ್ದಾನೆ. 

Tap to resize

Latest Videos

ದೇಶಕ್ಕಾಗಿ ಪ್ರಾಣ ಬಿಟ್ಟ ನನ್ನ ತಂದೆಗೆ ಮೋದಿ ಅಪಮಾನ: ಪ್ರಿಯಾಂಕಾ ಗಾಂಧಿ ಕಿಡಿ

ಅದೇ ವ್ಯಕ್ತಿಯ ಪರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತಯಾಚಿಸಿದ್ದರು. ಮಂಗಲಸೂತ್ರದ ಬಗ್ಗೆ ಮಾತನಾಡುವ ಮೋದಿ ಈಗ ಏನು ಹೇಳುತ್ತಾರೆ? ಮೋದಿಯವರು ಮಹಿಳೆಯರ ರಕ್ಷಣೆಗೆ ಏನು‌ ಕ್ರಮ ಕೈಗೊಂಡಿದ್ದಾರೆ ಎಂಬುದನ್ನು ಹೇಳಲಿ. ರಾಜ್ಯದ ಜನ ಈ ಬಗ್ಗೆ ಮೋದಿಯವರನ್ನು ಪ್ರಶ್ನಿಸಬೇಕು. ಸುಮ್ಮನಿದ್ದರೆ ಧರ್ಮ ಹಾಗೂ ಜಾತಿಯ ಆಧಾರದ ಮೇಲೆ‌ ಮೋದಿ ಮತ್ತೆ ಮತ ಕೇಳಲು ಬರುತ್ತಾರೆ ಎಂದು ಎಚ್ಚರಿಸಿದರು.

ನಾನು ರಾಜಕೀಯಕ್ಕೆ ಬರಲಿ ಎಂದು ಇಡೀ ದೇಶ ಬಯಸುತ್ತಿದೆ: ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ಹಾಗೂ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್‌ ವಾದ್ರಾ ಮತ್ತೊಮ್ಮೆ ರಾಜಕೀಯಕ್ಕೆ ಬರುವ ಬಯಕೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದು, ‘ಇಡೀ ದೇಶ ನಾನು ಸಕ್ರಿಯ ರಾಜಕಾರಣಕ್ಕೆ ಬರಲಿ ಎಂದು ಬಯಸುತ್ತಿದೆ’ ಎಂದು ಹೇಳಿದ್ದಾರೆ. ತನ್ಮೂಲಕ, ರಾಹುಲ್‌ ಗಾಂಧಿ ಪರಾಭವಗೊಂಡ ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದಲ್ಲಿ ತಾವು ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆಗೆ ನಿರ್ಧಾರ: ಎಚ್.ಡಿ.ಕುಮಾರಸ್ವಾಮಿ

‘ಇಡೀ ದೇಶದ ಧ್ವನಿ ನನಗೆ ಕೇಳಿಸುತ್ತಿದೆ. ನಾನು ಸಕ್ರಿಯ ರಾಜಕಾರಣಕ್ಕೆ ಬರಲಿ ಎಂದು ಜನರು ಬಯಸುತ್ತಿದ್ದಾರೆ. ನಾನು ತಮ್ಮ ಜೊತೆ ಇರಲಿ ಎಂದು ಜನರು ಯಾವಾಗಲೂ ಬಯಸುತ್ತಿದ್ದರು. 1999ರಲ್ಲಿ ನಾನು ಅಮೇಠಿಯಲ್ಲಿ ಪ್ರಚಾರ ಮಾಡಿದ್ದೆ. ಅಲ್ಲಿನ ಹಾಲಿ ಸಂಸದೆ ಸ್ಮೃತಿ ಇರಾನಿ ತಮ್ಮ ಭರವಸೆಗಳನ್ನು ಈಡೇರಿಸಿಲ್ಲ’ ಎಂದು ವಾದ್ರಾ ಹೇಳಿದ್ದಾರೆ. ಸೋನಿಯಾ ಗಾಂಧಿ ಈ ಹಿಂದೆ ಪ್ರತಿನಿಧಿಸಿದ್ದ ರಾಯ್‌ಬರೇಲಿ ಹಾಗೂ ರಾಹುಲ್‌ ಗಾಂಧಿ ಪ್ರತಿನಿಧಿಸಿದ್ದ ಅಮೇಠಿ ಕ್ಷೇತ್ರಕ್ಕೆ ಐದನೇ ಹಂತದಲ್ಲಿ ಮೇ 20ರಂದು ಮತದಾನ ನಡೆಯಲಿದ್ದು, ಅಲ್ಲಿಗೆ ಇನ್ನೂ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಿಸಿಲ್ಲ.

click me!