ಬಿಜೆಪಿ ಸರ್ಕಾರ ತನ್ನ ಅವನತಿಯನ್ನು ನೋಡುತ್ತಿದೆ. ಇದರಿಂದಾಗಿ ಅಶ್ವಥ್ ನಾರಾಯಣ ಮೂಲಕ ಸಿದ್ದರಾಮಯ್ಯ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಸೇರಿದಂತೆ ನಮ್ಮಲ್ಲಿ ಯಾರನ್ನಾದರೂ ಕೊಲ್ಲುವುದಾದರೆ ಹೇಳಿ ಅವರು ಹೇಳಿದ ಜಾಗಕ್ಕೆ ಯಾವಾಗ ಬೇಕಾದರೂ ಬರುತ್ತೇವೆ ಎಂದು ಸವಾಲ್ ಹಾಕಿದ ರಣದೀಪ್ ಸುರ್ಜೆವಾಲಾ.
ಬೆಳಗಾವಿ(ಫೆ.20): ಹಿಂಸಾ ರಾಜಕಾರಣವನ್ನು ಅಳವಡಿಸಿಕೊಂಡಿರುವ ಮೋದಿ ಸರ್ಕಾರ, ಬೊಮ್ಮಾಯಿ ಸರ್ಕಾರ ಕಾಂಗ್ರೆಸ್ ನಾಯಕರನ್ನು ಕೊಲ್ಲುವ ಬೆದರಿಕೆ ಹಾಕಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ತನ್ನ ಅವನತಿಯನ್ನು ನೋಡುತ್ತಿದೆ. ಇದರಿಂದಾಗಿ ಅಶ್ವಥ್ ನಾರಾಯಣ ಮೂಲಕ ಸಿದ್ದರಾಮಯ್ಯ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಸೇರಿದಂತೆ ನಮ್ಮಲ್ಲಿ ಯಾರನ್ನಾದರೂ ಕೊಲ್ಲುವುದಾದರೆ ಹೇಳಿ ಅವರು ಹೇಳಿದ ಜಾಗಕ್ಕೆ ಯಾವಾಗ ಬೇಕಾದರೂ ಬರುತ್ತೇವೆ ಎಂದು ಸವಾಲ್ ಹಾಕಿದರು. ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಬಂದಾಗಿನಿಂದ ರಕ್ತದಾನ ಮಾಡಿ ಜನರ ಮತ್ತು ದೇಶದ ಒಳಿತಿಗಾಗಿ ಜೀವವನ್ನೇ ಪಣಕ್ಕಿಟ್ಟು ರಾಜಕೀಯ ಮಾಡುತ್ತಿದೆ. ಮಹಾತ್ಮಗಾಂಧಿ, ರಾಜೀವ್ ಗಾಂಧಿ, ಇಂದಿರಾಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಈ ಹಿಂಸಾ ರಾಜಕಾರಣದಿಂದ ಕೊಂದಿದ್ದಾರೆ. ಆದರೆ ಕಾಂಗ್ರೆಸ್ ಬಿಟ್ಟುಕೊಡುವುದಿಲ್ಲ ಎಂದ ಅವರು, ಬ್ರಾಂಡ್ ಕರ್ನಾಟಕ ಉಳಿಸಲು ಕರ್ನಾಟಕದಲ್ಲಿ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲೇಬೇಕು: ಜಾರಕಿಹೊಳಿ
ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 15 ದಿನಗಳಲ್ಲಿ ತಾತ್ಕಾಲಿಕವಾಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಪಾರದರ್ಶಕತೆ ಕಾಯ್ದುಕೊಳ್ಳಲು ನಾವು ಆಕಾಂಕ್ಷಿ ಅಭ್ಯರ್ಥಿಗಳಿಂದ ಬಹಿರಂಗವಾಗಿ .2 ಲಕ್ಷ ದೇಣಿಗೆ ಸಂಗ್ರಹಿಸಿದ್ದೇವೆ ಎಂದು ತಿಳಿಸಿದರು.