
ಬೆಳಗಾವಿ(ಡಿ.21): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮನೆ ಮೇಲೆ ಎಷ್ಟುಬಾರಿ ದಾಳಿ ಮಾಡುತ್ತೀರಿ. ಸುಮ್ಮನೇ ಇವರ ಮನೆಯಲ್ಲಿ ಒಂದು ಇಡಿ, ಸಿಬಿಐ ಕಚೇರಿ ತೆಗೆದುಬಿಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಕಿಡಿಕಾರಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ನಿನ್ನೆ ನಡೆದ ದಾಳಿಯನ್ನು ಖಂಡಿಸಿದರು. ಡಿಕೆಶಿ ಮನೆಯ ಮೇಲೆ ಒಂದು ಡಜನ್ ಬಾರಿ ದಾಳಿ ಮಾಡಿದ್ದರೂ ನಿಮಗೆ ಏನೂ ಸಿಕ್ಕಿಲ್ಲ. ಕಾಂಗ್ರೆಸ್ ಪಕ್ಷ ಯಾವುದಕ್ಕೂ ಹೆದರುವುದಿಲ್ಲ. ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ ಜೊತೆಗೆ ಇದ್ದಾರೆ ಎಂದರು.
Karnataka Assembly Elections 2023: ಹಾಲಿ ಶಾಸಕರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಿರ್ಧಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಅನೈತಿಕ ಮಾರ್ಗದಿಂದ ಬಂದಿರುವ ಸರ್ಕಾರವಾಗಿದೆ. ಬಿಜೆಪಿಯವರು ಜನರ ದೃಷ್ಟಿಯಲ್ಲಿ ನೆಲಕ್ಕೆ ಬಿದ್ದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ದಿನವೂ ಇರಲು ಸರ್ಕಾರಕ್ಕೆ ನೈತಿಕತೆ ಇಲ್ಲ. ಬಿಜೆಪಿ ಹಾಗೂ ಬೊಮ್ಮಾಯಿ ಸರ್ಕಾರ ಚಡಪಡಿಸುತ್ತಿದೆ. ಬೊಮ್ಮಾಯಿ ಸರ್ಕಾರ ಅನೈತಿಕ ಮಾರ್ಗದಿಂದ ಅಧಿಕಾರ ಹಿಡಿದಿದೆ. 40 ಪರ್ಸೆಂಟ್‌ನಲ್ಲಿ ಬೊಮ್ಮಾಯಿ ಸರ್ಕಾರದಲ್ಲಿ ಮುಳುಗಿದೆ. ಬೊಮ್ಮಾಯಿ ಸರ್ಕಾರ ಎರಡು ಕೈಯಿಂದ ಜನರನ್ನೂ ಲೂಟಿ ಮಾಡಿದೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ದೂರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.