ರಾಹುಲ್ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಖಂಡನೀಯ: ಬಬಲೇಶ್ವರ
ವಿಜಯಪುರ(ಮಾ.26): ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಖಂಡನೀಯ. ಕೇಂದ್ರ ಬಿಜೆಪಿ ಸರ್ಕಾರದಿಂದಾಗಿ ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದ್ದು, ದೇಶದ ಕಾನೂನು ಹಾಗೂ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಮನಬಂದಂತೆ ಸರ್ಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ ಮುಖಂಡ ಸಂಗಮೇಶ ಬಬಲೇಶ್ವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಅವರು, ದೇಶದಲ್ಲಿ ಆಡಳಿತ ಪಕ್ಷದ ತಪ್ಪುಗಳನ್ನು ಪ್ರಶ್ನಿಸುವದು ಅಪರಾಧ ಎಂಬ ವಾತವಾರಣವನ್ನು ಬಿಜೆಪಿ ನಿರ್ಮಾಣ ಮಾಡಿದೆ. ಬಿಜೆಪಿ ಸೇಡಿನ ರಾಜಕಾರಣ ಬಿಟ್ಟು ಜನರ ಒಳಿತಿಗಾಗಿ ಕೆಲಸ ಮಾಡಬೇಕು. ಈ ಕೂಡಲೇ ರಾಹುಲ್ ಗಾಂಅವರ ಅನರ್ಹತೆಯನ್ನು ಹಿಂಪಡೆಯಬೇಕು ಎಂದರು.
ಯುಕೆಪಿ ಭೂಸ್ವಾಧೀನ ಪರಿಹಾರದಲ್ಲಿ ತಾರತಮ್ಯ: ಎಂ.ಬಿ. ಪಾಟೀಲ
ಸ್ವಾತಂತ್ರ್ಯ ನಂತರ ದೇಶದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಲು ಕಾಂಗ್ರೆಸ್ ಪಕ್ಷ ಶ್ರಮಿಸಿದೆ. ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿದ್ದರಿಂದಲೇ ಇಂದು ಬಿಜೆಪಿ ಅಧಿಕಾರದಲ್ಲಿದೆ ಎನ್ನುವುದನ್ನು ಮರೆಯಬಾರದು. ಬಿಜೆಪಿಗರು ವಾಮಮಾರ್ಗ ಬಿಟ್ಟು ಜನರ ಸೇವೆ ಮಾಡಬೇಕು. ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಜವಾಬ್ದಾರಿಯುತ ರೋಧ ಪಕ್ಷದ ಸ್ಥಾನ ನಿರ್ವಹಿಸುತ್ತಿದೆ. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಭ್ರಷ್ಟಬಿಜೆಪಿ ತೊಲಗಿಸಲು ಕಾಂಗ್ರೆಸ್ ನಿರಂತರ ಹೋರಾಟ ಮುಂದುರಿಸಲಿದೆ ಎಂದು ಹೇಳಿದ್ದಾರೆ.