ಉಪಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ . ದೆಹಲಿ ಮಾಹಿತಿ ಆಧಾರದ ಮೇಲೆ ಹೇಳ್ತಿದ್ದೇನೆ ಎಂದು ಮಾಜಿ ಸಿಎಂ ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚನ ಮೂಡಿಸಿದ್ದಾರೆ.
ಬೆಂಗಳೂರು, (ನ.04): ಜಿದ್ದಾಜಿದ್ದಿನ ಕಣವಾಗಿದ್ದ ಶಿರಾ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಶಾಂತಿಯುತವಾಗೇನೋ ಮುಗಿದಿದೆ. ಚಳಿ, ಮಳೆ, ಬಿಸಿಲನ್ನೂ ಲೆಕ್ಕಿಸದೇ ಮತ ಬೇಟೆಯಲ್ಲಿ ತೊಡಗಿದ್ದ ಅಭ್ಯರ್ಥಿಗಳು ಈಗ ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
undefined
ನವೆಂಬರ್ 10ಕ್ಕೆ ಫಲಿತಾಂಶ ಪ್ರಕಟವಾಗಿದೆ. ಆದ್ರೆ, ಅದಕ್ಕೂ ಮೊದಲು ಅಭ್ಯರ್ಥಿಗಳ ಪರ ಬಾಜಿದಾರರು ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದೆ.ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ಶಿರಾ, ಆರ್‌ಆರ್ ನಗರ ಬೈ ಎಲೆಕ್ಷನ್ ರಿಸಲ್ಟ್: ಪಕ್ಷದ ಆಂತರಿಕ ವರದಿ ತೆರೆದಿಟ್ಟ ಸಿಟಿ ರವಿ
ಇಂದು (ಬುಧವಾರ) ಮೈಸೂರಿನಲ್ಲಿ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.
ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡುತ್ತಾರೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯೋದಿಲ್ಲ. ನನಗೆ ಈ ಬಗ್ಗೆ ಕಾನ್ಫಿಡೆಂಟ್ ಇದೆ. ಯಡಿಯೂರಪ್ಪ ಬದಲಾಗ್ತಾರೆ. ದೆಹಲಿ ಮಾಹಿತಿ ಆಧಾರದ ಮೇಲೆ ಹೇಳ್ತಿದ್ದೇನೆ ಎಂದು ಹೇಳಿದರು.
ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು, ಅದು ಒಂದು ಕಾರಣ ಇರಬಹುದು. ಹಲವು ದಿನದಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದರು.